ಸಾಹಿತಿ, ವಿಮರ್ಶಕ ಜಿ.ಎಸ್.ಸಿದ್ದಲಿಂಗಯ್ಯ ನಿಧನ

0
27

ಬೆಂಗಳೂರು: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ.
ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ವಯೋಸಹಜ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಚಾಮರಾಜಪೇಟೆಯ ಲಿಂಗಾಯತ ರುದ್ರಭೂಮಿಯಲ್ಲಿ ಇಂದು(ಬುಧವಾರ) ಮಧ್ಯಾಹ್ನ 3 ನಂತರ ಮೃತರ ಅಂತ್ಯಕ್ರಿಯೆ ನಡೆಯಲಿದೆ, ತುಮಕೂರು ಜಿಲ್ಲೆ ಬೆಳ್ಳಾವಿಯ ಸಿದ್ದಲಿಂಗಯ್ಯ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಸಿದ್ದಲಿಂಗಯ್ಯನವರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

Previous articleಪಹಲ್ಗಾವ್ ಉಗ್ರರ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಪ್ರಬಲ ಪ್ರತ್ಯುತ್ತರ
Next articleರಾಯಚೂರು ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ