ಸಿ.ಟಿ.ರವಿ ಬಂಧನ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

0
27

ಕೆಲವು ಅಂಗಡಿ ಮುಂಗಟ್ಟು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿದರೇ, ಉಳಿದಂತೆ ಬಹುತೇಕ ಕಡೆ ವ್ಯಾಪಾರ ವಹಿವಾಟು ನಡೆಸಿದರು.

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಪ್ರಮುಖ ರಸ್ತೆ ಎಂ.ಜಿ. ರಸ್ತೆಯ ಕೆಲವು ಅಂಗಡಿ ಮುಂಗಟ್ಟು ಮಾಲೀಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ. ವಹಿವಾಟು ಬಂದ್ ಗೊಳಿಸಿ ಬಂದ್ ಗೆ ಬೆಂಬಲ ನೀಡಿದರೇ, ಉಳಿದಂತೆ ಬಹುತೇಕ ಅಂಗಡಿ ಮುಂಗಟ್ಟು ಮಾಲೀಕರು ಎಂದಿನಂತೆ ವ್ಯಾಪಾರ ವಹಿವಾಟು ನಡೆಸಿದರು.
ಬೆಳಿಗ್ಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂದಿಸಿ ಠಾಣೆಗೆ ಕರೆದೊ ಯ್ದರು.
ಪೊಲೀಸರ ನಡೆಯನ್ನು ಮುಖಂಡರು ಖಂಡಿಸಿದರು. ಬಂದ್ ಪ್ರತಿಭಟನೆ ಹಿನ್ನಲೆ ನಗರದ ಹನುಮಂತಪ್ಪ ವೃತ್ತ ಸೇರಿದಂತೆ ಆಯಾ ಕಟ್ಟಿನ ಜಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿ ಸಲಾಗಿತ್ತು. ಪ್ರತಿಭಟನೆಗೆ ಹಾಗೂ ಬಂದ್ ಗೆ ಪೊಲೀಸ್ ಇಲಾಖೆಯಿಂದ ಪೂರ್ವ ನುಮತಿ ಪಡೆಯದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ನಿಧನ
Next articleಸಿಟಿ ರವಿಯವರಿಗೆ ಸರ್ಕಾರ ಅಮಾನವೀಯವಾಗಿ ನಡೆಸಿಕೊಂಡಿದೆ