ಸಿಎಂ ವಿರುದ್ಧ ರಾಜಕೀಯ ಸಂಚು

0
30

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪು ಬಂದಿದೆ, ನಮ್ಮ ಮುಂದೆ ಬೇರೆ ಬೇರೆ ಆಯ್ಕೆಗಳಿವೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ. ವಿಪಕ್ಷಗಳ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಅವರ ಪಕ್ಷದಲ್ಲಿ ಎಷ್ಟು ಜನರ ಮೇಲೆ ಎಫ್‌ಐಆರ್ ಇದೆ. ಯಾರೆಲ್ಲಾ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಮೊದಲು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು. ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳ್ಳಿಸುವ ಹುನ್ನಾರ ನಡೆದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ಈಗ ಸವಾಲನ್ನು ರಾಜಕೀಯವಾಗಿಯೇ ಎದುರಿಸಲಾಗುವುದು ಎಂದರು.

Previous articleಪ್ರೀತ್ಸೇ ಪ್ರಕರಣ, ಹುಡುಗಿ ತಾಯಿಗೆ ಚಾಕು ಇರಿದ ಯುವಕ
Next articleಮಹಾಲಕ್ಷ್ಮೀ ಕೊಲೆ ಆರೋಪಿ ಆತ್ಮಹತ್ಯೆ