ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

0
14

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಾಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು.


ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 29 ಕ್ಕೆ ಮುಂದೂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ನ್ಯಾಯಲಯದ ಆದೇಶ ನೀಡಿದೆ. ಆಗಸ್ಟ್‌ 29ರವರೆಗೆ ಮಧ್ಯಂತರ ತಡೆ ನೀಡಲಾಗಿದೆ. 29ರಂದು ಹೈಕೋರ್ಟ್‌ ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಸಿದ್ದರಾಮಯ್ಯ ಪರ ಖ್ಯಾತ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದ್ದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ತುಷಾರ್‌ ಮೆಹ್ತಾ ಮತ್ತು ದೂರುದಾರ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.‌

Previous articleಸಂವಿಧಾನ ಉಳಿವಿನ ಹೋರಾಟದಲ್ಲಿ ರವಿಚಂದ್ರನ್ ಸಾವು : ಸಿಎಂ ಸಂತಾಪ
Next articleಬೆಳೆ ವಿಮೆ ಪರಹಾರ ಕೊಡಿಸಲು ಕೇಂದ್ರ ಕೃಷಿ ಸಚಿವರಿಗೆ ಬೊಮ್ಮಾಯಿ ಪತ್ರ