Home ಸುದ್ದಿ ದೇಶ ಸಿಬಿಐನಿಂದ ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಬಂಧನ

ಸಿಬಿಐನಿಂದ ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಬಂಧನ

0
78

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಸುಮಾರು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.ದೆಹಲಿ ಸಿಎಂ ಅರವಿಂದ್​ ಕೇಜ್ರೀವಾಲ್​ ನೇತೃತ್ವದ ದೆಹಲಿ ಸರ್ಕಾರ ಜಾರಿ ತರಲು ಮುಂದಾಗಿದ್ದ ಹೊಸ ಅಬಕಾರಿ ನೀತಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದರಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎಂದ ಆರೋಪ ಕೇಳಿ ಬಂದಿದೆ. ಕೇಂದ್ರ ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿವೆ. ಇದರ ತನಿಖೆಯ ಮುಂದುವರೆದ ಭಾಗವಾಗಿ ಇಂದು ದೆಹಲಿ ಡಿಸಿಎಂ ಆಗಿರುವ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಅಂತೆಯೇ, ಬೆಳಗ್ಗೆ ವಿಚಾರಣೆಗಾಗಿ ಸಿಬಿಐ ಕಚೇರಿಗೆ ಅವರು ಆಗಮಿಸಿದ್ದರು. ಅಲ್ಲಿಂದ ಸುಮಾರು ಎಂಟು ಗಂಟೆಗಳ ಕಾಲ ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಿದ ಬಳಿಕ ಸಂಜೆ 7ರ ಸುಮಾರಿಗೆ ಬಂಧಿಸಿದ್ದಾರೆ.