Home ಅಪರಾಧ ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ

0
147

ಆನೇಕಲ್: ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು ಹತ್ತು ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್‌ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದ್ದು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.