ಸೆಕ್ಯೂರಿಟಿ ಏಜೆನ್ಸಿ ಮೂಲಕ ಶಿಕ್ಷಕರ ಅಕ್ರಮ ನೇಮಕಾತಿ

0
8

ಬೆಂಗಳೂರು: ಸೆಕ್ಯೂರಿಟಿ ಏಜೆನ್ಸಿ ಮೂಲಕ ನೇಮಕಾತಿ ಮಾಡಿಕೊಂಡು ಕಮಿಷನ್ ಹೊಡೆಯುವ ಜಾಣತನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅರ್ ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ 100% ಕಮಿಷನ್‌ ಸರ್ಕಾರ ಎನ್ನುವುದಕ್ಕೆ ಸೆಕ್ಯೂರಿಟಿ ಏಜೆನ್ಸಿ ಮೂಲಕ ಶಿಕ್ಷಕರ ಅಕ್ರಮ ನೇಮಕಾತಿ ಮಾಡಿಕೊಳ್ಳಲು ಹೊರಟಿರುವುದೇ ಸಾಕ್ಷಿ.

ನೇರ ನೇಮಕಾತಿ ಮಾಡಿಕೊಂಡರೆ 2014-15ರಲ್ಲಿ ಹೊರಬಂದಂತೆ ಇಂದಲ್ಲ ನಾಳೆ ಭ್ರಷ್ಟಾಚಾರ ಹೊರಬಹುದು ಎಂದು ಮುಂದಾಲೋಚನೆ ಮಾಡಿರುವ ಸಿಎಂ ಸಿದ್ದರಾಮಯ್ಯನವರು ಈ ಬಾರಿ ಸೆಕ್ಯೂರಿಟಿ ಏಜೆನ್ಸಿ ಮೂಲಕ ನೇಮಕಾತಿ ಮಾಡಿಕೊಂಡು ಕಮಿಷನ್ ಹೊಡೆಯುವ ಜಾಣತನ ಪ್ರದರ್ಶನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎಂದಿದ್ದಾರೆ.

Previous articleಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟ
Next articleಭೀಕರ ರಸ್ತೆ ಅಪಘಾತ: ಮೂವರ ಸಾವು