ಬೆಳಗಾವಿ: ಬಡ ಜನರನ್ನೇ ಟಾರ್ಗೆಟ್ ಮಾಡಿಕೊಂಡು ಅವರಿಂದಲೇ ಬ್ಯಾಂಕ್ ಖಾತೆ ತೆರೆಸಿ ಬಳಿಕ ಆ ಖಾತೆ ಮೂಲಕ ಶ್ರೀಮಂತರಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ತಂಡದ ಇಬ್ಬರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಳಗಾವಿಯ ತಹಶೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್(೨೮), ರಾಮದೇವಗಲ್ಲಿಯ ಅನೂಪ್ ಕಾರೇಕರ್(೪೨) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ತಲೆ ಮರೆಸಿಕೊಂಡಿದ್ದ ಈ ಇಬ್ಬರು ಸೈಬರ್ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.