ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

0
15

ಮೈಸೂರು: ನಗರದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಸೀರೆಗಳನ್ನು ಕಳವು ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರು ಹರಕೆಯಾಗಿ ನೀಡಿರುವ ಸೀರೆಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಇದರಲ್ಲಿ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂದು ಸ್ಮೇಹಮಯಿ ಕೃಷ್ಣ ಅವರು ಕೆಲ ದಿನಗಳ ಹಿಂದೆ ಸಾಮಾಜಿಕ ಮಾಧ್ಯಮ ಹಾಗೂ ಪತ್ರಿಕೆಗಳ ಮೂಲಕ ಆರೋಪ ಮಾಡಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ದೇವಾಲಯದ ಕಾರ್ಯದರ್ಶಿ ರೂಪಾ ಅವರು, ಸರ್ಕಾರಿ ಕೆಲಸಕ್ಕೆ ಅಡ್ಡಿ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

Previous articleಪಶ್ಚಿಮ ವಾಹಿನಿಯಲ್ಲಿ ಎಸ್‌ಎಂಕೆ ಅಸ್ತಿ ವಿಸರ್ಜನೆ
Next articleಮದುವೆಯಾಗಿಲ್ಲವೆಂದು ಯುವಕ ನೇಣಿಗೆ ಶರಣು