ಹುಬ್ಬಳ್ಳಿ: ಹುಬ್ಬಳ್ಳಿಯ ಹೊರ ವಲಯದ ಗದಗ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಸ್ಯಾಮ್ಯುಯಲ್(38) ಎಂಬಾತನೇ ಕೊಲೆಗೀಡಾದ ವ್ಯಕ್ತಿಯಾಗಿದ್ದು, ಈತ ಹಂದಿ ಸಾಕಾಣಿಕೆ ಮಾಡುತ್ತಿದ್ದನು. ಗುರುವಾರ ರಾತ್ರಿ ಗದಗ ರಸ್ತೆಯಲ್ಲಿ ಸ್ಯಾಮ್ಯುಯಲ್ ಕಣ್ಣಿಗೆ ಖಾರದ ಪುಡಿಯನ್ನು ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.























