ಬೆಂಗಳೂರು: ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ನಿರ್ಧಾರ ಕೈಗೊಂಡಿದ್ದಾರೆ.
ಬಿಜೆಪಿ ಅಮಾನತ್ತಾದ ಶಾಸಕರ ಬಗ್ಗೆ ಸಂಜೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಧ್ಯೆ ಅಮಾನತು ಆದೇಶ ವಾಪಸ್ ಪಡೆಯುವಂತೆ ವಿಪಕ್ಷ ನಾಯಕರು, ನಾಯಕರ ಬೇಡಿಕೆ ಇತ್ತು. ಈ ಬಗ್ಗೆ ಇಂದು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ವಿಪಕ್ಷ ನಾಯಕ ಆರ್.ಅಶೋಕ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಸ್ಪೀಕರ್ ಈ ನಿರ್ಧಾರ ಪ್ರಕಟಿಸಿದ್ದಾರೆ.