ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

0
24
ಬಂಧನ

ಹಾವೇರಿ: ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಕಿಆಲೂರಿನ ಇಬ್ರಾಹಿಂ ಖಾದರ್ ಗೌಸ್ (೨೭) ಹಾಗೂ ತೌಸೀಫ್ ಅಹ್ಮದ್ ಚೌಟಿ ಅಲಿಯಾಸ್ ಕಾಟ್ಲಾ ಖಾಸಿಂ ಸಾಬ್ (೨೫) ಬಂಧಿತ ಆರೋಪಿಗಳು. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ೧೦ ಆರೋಪಿಗಳನ್ನು ಬಂಧಿಸಿದಂತಾಗಿದೆ. ನಾಲ್ಕರ ಕ್ರಾಸ್ ಬಳಿಕ ವಸತಿಗೃಹದಲ್ಲಿದ್ದ ಮಹಿಳೆಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಬಳಿಕ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಸಂತ್ರಸ್ತೆ ಹೇಳಿಕೆ ನೀಡಿದ ಮೇಲೆ ಪ್ರಕರಣ ಬೆಳಕಿಗೆ ಬಂದಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಲು ಜಾಲ ಬೀಸಿದ್ದರು. ಇದೀಗ ೧೦ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಈ ನಡುವೆ ಕರ್ತವ್ಯ ಲೋಪದ ಆರೋಪದ ಮೇಲೆ ಹಾನಗಲ್ಲ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಸೇರಿದಂತೆ ಇಬ್ಬರು ಅಮಾನತುಗೊಂಡಿದ್ದಾರೆ. ಸರ್ಕಾರಕ್ಕೆ ಈ ಪ್ರಕರಣ ತಲೆನೋವಾಗಿ ಪರಿಣಮಿಸಿದ್ದರೆ, ವಿರೋಧ ಪಕ್ಷ ಬಿಜೆಪಿ ಪ್ರಕರಣದಲ್ಲಿ ಸಂತ್ರಸ್ತೆಗೆ ಸಮರ್ಪಕ ಚಿಕಿತ್ಸೆ ಸಿಕ್ಕಿಲ್ಲ, ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿ ಹೋರಾಟಕ್ಕೆ ಸಜ್ಜಾಗುತ್ತಿದೆ.

Previous articleಸ್ವಪಕ್ಷೀಯರಿಂದಲೇ ಸಂಸದ ಹೆಗಡೆ ತರಾಟೆ
Next articleಕಲಬುರಗಿ ವಿಮಾನ ನಿಲ್ದಾಣ ದಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ