ಹಿಂದೂ ಹಿತ ಮರೆತರೆ ದೇಶಕ್ಕೆ ಅಪಾಯ

0
8

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂ ಹಿತ ಮರೆತು, ಮುಸ್ಲಿಂ ತುಷ್ಟೀಕರಣ ನೀತಿ ಅನುಸರಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ವಿಶ್ವ ಹಿಂದೂ ಪರಿಷತ್‌ನ ಕೇಂದ್ರಿಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುವ ಸರ್ಕಾರಗಳು ಹಿಂದೂ ಹಿತ ಕಾಪಾಡಬೇಕು. ಏಕೆಂದರೆ, ಹಿಂದೂ ಹಿತದಲ್ಲಿಯೇ ದೇಶದ ಹಿತವಿದೆ ಎಂದರು.
ಕಳೆದ ಆರೇಳು ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆತಂಕ ತಂದಿವೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಮುಸ್ಲಿಂ ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಪರಿಣಾಮ ರಾಜ್ಯದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಕಲಬುರ್ಗಿ ಸೇರಿದಂತೆ ಹಲವೆಡೆ ನಡೆದ ಕಳವಳಕಾರಿ ಘಟನೆಗಳು ನಡೆದಿವೆ ಎಂದು ಹೇಳಿದರು.
ಹಿಂದೂ ಸಮಾಜದ ಮಹಿಳೆಯರು, ಹಿಂದುಳಿದ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳಾಗಿವೆ. ಬಲಾತ್ಕಾರ ಆಗಿವೆ, ಹತ್ಯೆಯಾಗಿವೆ. ಗೋಹತ್ಯೆ ಪ್ರಕರಣ ಹೆಚ್ಚಾಗಿವೆ. ಗೋರಕ್ಷಕರ ಮೇಲೆ ದಾಳಿಗಳಾಗುತ್ತಿವೆ. ಸಾಧು ಸಂತರು, ಮಹಿಯರು ಸುರಕ್ಷಿತವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Previous articleಕೈದಿಯಿಂದ ಬೆದರಿಕೆ ದೂರು ದಾಖಲು
Next articleನ್ಯಾಯಾಲಯ ಶಿಕ್ಷೆ ವಿಧಿಸಲಿ: ಆರೋಪಿ ತಾಯಿ