ಹುಬ್ಬಳ್ಳಿ ಅಂಜಲಿ ಹತ್ಯೆ ಆರೋಪಿ ಪೊಲೀಸ್ ಬಲೆಗೆ

0
21

ಹುಬ್ಬಳ್ಳಿ : ಅಂಜಲಿ ಅಂಬಿಗೇರ ಕೊಲೆ ಆರೋಪಿಯನ್ನು ದಾವಣಗೆರೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಂಜಲಿಯನ್ನು ಕೊಲೆ ಮಾಡಿ ಗೋಕುಲ ಬಸ್ ನಿಲ್ದಾಣದ ಮೂಲಕ ಬಸ್ ಹತ್ತಿ ಪರಾರಿಯಾಗಿದ್ದ ಆರೋಪಿ ವಿಶ್ವನಾಥ ಅಲಿಯಾಸ್ ಗಿರೀಶ್ ಸಾವಂತ ದಾವಣಗೆರೆಗೆ ಪಲಾಯಾನ ಮಾಡಿದ್ದಾನೆ. ಅಲ್ಲಿ ಸಾರ್ವಜನಿಕರು ಈತನಿಗೆ ತಳಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳೀಯ ಪೊಲೀಸರು ಮತ್ತು ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಅಂಜಲಿ ಹತ್ಯೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಕಸ್ಟಡಿಗೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ತಿಳಿಸಿದ್ದಾರೆ

Previous articleಬಯಕೆಯ ಬೆಟ್ಟ ಹತ್ತಿದಷ್ಟು ಇಳಿಜಾರು
Next articleಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಮೃತ್ಯು