ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಗೋಯಲ್‌ ಮೆಚ್ಚುಗೆ

0
16
ಹುಬ್ಬಳ್ಳಿ ರೈಲ್ವೆ ನಿಲ್ದಾಣ

ಹುಬ್ಬಳ್ಳಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಜವಳಿ ಸಚಿವ ಪಿಯೂಷ್ ಗೋಯಲ್ ಅವರು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿನ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಮಾಡಿರುವ 1507 ಮೀ ಉದ್ದದ ಪ್ಲಾಟ್‌ಫಾರ್ಮ್ ಅನ್ನು ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಎಂದು ಗುರುತಿಸಿದೆ. ಪಿಯೂಷ್ ಗೋಯಲ್ ಅವರು ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ನಿರ್ಮಿಸುವಲ್ಲಿ ನೈಋತ್ಯ ರೈಲ್ವೆಯ ಸಾಧನೆಯನ್ನು ಶ್ಲಾಘಿಸಿದರು.

Previous articleರಾಹುಲ್ ಗಾಂಧಿ ಬಂದ ಪುಟ್ಟ, ಹೋದ ಪುಟ್ಟ
Next articleಬೆಳಗಾವಿ ಕಣಬರಗಿ ಚೆಕ್ ಪೋಸ್ಟ್: 1.77 ಲಕ್ಷ ರೂ. ನಗದು ಜಪ್ತಿ