ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಸ್ವಾಗತ

0
9

ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಸ್ವಾಗತ

ಹುಬ್ಬಳ್ಳಿ : ಹುಬ್ಬಳ್ಳಿ, ಧಾರವಾಡ, ಕುಂದಗೋಳ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾ‌ನ ನಿಲ್ದಾಣಕ್ಕೆ ಆಗಮಿಸಿದರು.
ರಾತ್ರಿ 11.30 ರ ಹೊತ್ತಿಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಪಕ್ಷದ ಮುಖಂಡರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ಕಾರಿನಲ್ಲಿ ನಗರದ ಡಿನಿಸನ್ಸ್ ಹೊಟೇಲ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಮುಖಂಡರು ತೆರಳಿದರು.

Previous articleವಿದ್ಯಾನಗರದಲ್ಲಿ ಹೊತ್ತಿ ಉರಿದ ಕಾರು
Next articleಅಮಿತ್ ಶಾ ಭೇಟಿ ಮಾಡಿದ ರಾಜ್ಯ ಬಿಜೆಪಿ ಮುಖಂಡರು