ಹುಲಿಗೆಮ್ಮ ದೇವಿಗೆ ಭಕ್ತರಿಂದ ಉಧೋ…ಉಧೋ..

0
27

ಕೊಪ್ಪಳ(ಹುಲಿಗಿ): ಉತ್ತರ ಕರ್ನಾಟಕದ ಪ್ರಸಿದ್ಧವಾದ ತಾಲ್ಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಬುಧವಾರ ಮಹಾರಥೋತ್ಸವವು ಅದ್ಧೂರಿಯಾಗಿ ಜರುಗಿತು.

ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಹುಲಿಗೆಮ್ಮನ ರಥೋತ್ಸವಕ್ಕೆ ಸಾಕ್ಷಿಯಾದರು. ರಥವು ಸಾಗುತ್ತಿದ್ದಂತೆಯೇ ಉಧೋ….ಉಧೋ..ಉಧೋ….. ಉದ್ಘೋಷಗಳನ್ನು ಭಕ್ತರು ಮೊಳಗಿಸಿದರು. ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆಯುವ ಮೂಲಕ ಕೃತಾರ್ತರಾದರು. ಆರೋಗ್ಯ, ಆಯುಷ್ಯ, ಐಶ್ವರ್ಯ ದಯಾಪಾಲಿಸುವಂತೆ ದೇವಿಯನ್ನು ಪ್ರಾರ್ಥಿಸಿದರು. ಲಕ್ಷಾಂತರ ಭಕ್ತರು ಆಗಮಿಸಿ, ಸರತಿ ಸಾಲಿನಲ್ಲಿ ನಿಂತು, ಹುಲಿಗೆಮ್ಮ ದೇವಿಯ ದರ್ಶನ ಪಡೆದರು.

Previous articleರಾಜ್ಯದ ಜನರ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಶಾಪ
Next articleರೈತರ ಮೇಲೆ ಕರಡಿ ದಾಳಿ: ಗಂಭೀರ ಗಾಯ