ಹೆಜ್ಜೇನು ದಾಳಿ: ೧೦ ಮಕ್ಕಳು ಅಸ್ವಸ್ಥ

0
36

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ೧೦ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಇಂದು ನಡೆದಿದೆ.
ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಣೆಯೂರು ಕಕ್ಕಿಂಜೆ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಸುಮಾರು ೧೦ರಿಂದ ೧೫ ವಿದ್ಯಾರ್ಥಿಗಳಿಗೆ ಗಾಯವಾಗಿದೆ.
ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸಿದ್ದಾರೆ. ಮಕ್ಕಳು ಅಸ್ವಸ್ಥರಗಿದ್ದರೂ ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಸುತ್ತಾಡುತ್ತಿದ್ದು ಸ್ಥಳೀಯರು ಬೆಂಕಿ ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ಮಾಡಿದ್ದಾರೆ.

Previous article119 ಕೆಜಿ ಗಾಂಜಾ ವಶ: ನಾಲ್ವರ ಸೆರೆ
Next articleಶಾಲಾ ರಂಗೋತ್ಸವದಲ್ಲಿ ಭೂತಾರಾಧನೆಗೆ ಖಂಡನೆ