ಬೆಂಗಳೂರು: ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎನ್ನುವ ಒಂದು ಸಾಲಿನ ನಿರ್ಣಯವನ್ನು ಕೈಗೊಂಡು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಅಂತ್ಯಗೊಂಡಿದೆ.
ಸಿಎಂ ಆಯ್ಕೆ ವಿಚಾರವಾಗಿ ಶಾಂಗ್ರೀಲಾ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ.
ಹೈಕಮಾಂಡ್‌ಗೆ ವೀಕ್ಷಕರು ಇಂದಿನ ಶಾಸಕಾಂಗ ಸಭೆಯ ವರದಿ ನೀಡಲಿದ್ದು, ಈ ವರದಿ ಆಧರಿಸಿ ಕಾಂಗ್ರೆಸ್ ಹೈ ಕಮಾಂಡ್ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಕರ್ನಾಟಕಕ್ಕೆ ನೂತನ ಸಿಎಂ ಆಯ್ಕೆ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಅಲ್ಲದೆ ಶಾಸಕಾಂಗ ಸಭೆ ಬಳಿಕ, ಸಿಎಂ ಆಯ್ಕೆ ಕುರಿತಂತೆ ಪ್ರತಿಯೊಬ್ಬ ಶಾಸಕರ ಲಿಖಿತ ಅಭಿಪ್ರಾಯ ಸಂಗ್ರಹಿಸಲು ವೀಕ್ಷಕರು ಮುಂದಾಗಿದ್ದಾರೆ. ಡಿನ್ನರ್ ಮೀಟಿಂಗ್‌ನಲ್ಲಿ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
























