Home Advertisement
Home ನಮ್ಮ ಜಿಲ್ಲೆ ಹೊರಡಿಸಿರುವ ಆದೇಶ ಹೊಸತೇನಲ್ಲ

ಹೊರಡಿಸಿರುವ ಆದೇಶ ಹೊಸತೇನಲ್ಲ

0
97

ಬೆಂಗಳೂರು: ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.