ಬೆಂಗಳೂರು: ರಾಜ್ಯ ಬಿಜೆಪಿಯ ಹಲವು ನಾಯಕರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಲೀಡರ್ ಲೆಸ್ ಪಾರ್ಟಿ ಆಗಿದೆ. ಹೀಗಾಗಿ ನಾಯಕ ಇಲ್ಲದೇ ಇರುವುದರಿಂದ ಲೋಕಾಸಭಾ ಚುನಾವಣೆ ವೇಳೆಗೆ ಮತ್ತಷ್ಟು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷ ಸೇರುವ ಮುನ್ನವೇ ಅವರ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಿ, ಬಳಿಕ ಪಕ್ಷ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.