ಹುಬ್ಬಳ್ಳಿ: ಹುಬ್ಬಳ್ಳಿ ಸಿಸಿಬಿ ಘಟಕದಿಂದ ೧೨ ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯ ಅಫೀಮ್ ಜಪ್ತಿ ಮಾಡಿ ಇಬ್ಬರನ್ನು ಬಂಧಿಸಲಾಗಿದೆ.
ಗೋಕುಲ ರೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಎಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ, ೧೧,೮೬ ಲಕ್ಷ ಮೌಲ್ಯದ ೧೧೮೬ ಗ್ರಾಂ ಅಫೀಮ್ ಮತ್ತು ೨ ಮೊಬೈಲ್, ಹಣ ವಶಪಡಿಸಿಕೊಳ್ಳಲಾಗಿದೆ.
ರಾಜಸ್ಥಾನದಿಂದ ಅಫೀಮ್ ತಂದು ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ-ಧಾರವಾಡ ಸಿಇಎನ್ ಕ್ರೆöÊಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸ್ ಇನ್ಸಪೆಕ್ಟರ್ ಆರ್. ಆರ್. ಪಾಟೀಲ್ ಅವರು ಮುಂದಿನ ತನಿಖೆ ಕೈಗೊಂಡಿರುತ್ತಾರೆ.