೧೩ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

0
34

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. ೧೩ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಸವದತ್ತಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಸಂಜೆ ೪ಕ್ಕೆ ಧಾರವಾಡಕ್ಕೆ ಅವರು ಆಗಮಿಸುವರು.
ಧಾರವಾಡದಲ್ಲಿರುವ ರಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಸಂಭ್ರಮ ಹಾಗೂ ಪ್ರಧಾನ ಕಚೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್.ಟಿ. ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ನಂತರ ಸತ್ತೂರನಲ್ಲಿರುವ ಡಿ. ವಿರೇಂದ್ರ ಹೆಗ್ಗಡೆ ಕಲಾ ಕ್ಷೇತ್ರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಸಂಜೆ ೭ಕ್ಕೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಗೆದ್ದರೆ ಇವಿಎಂ ಓಕೆ; ಸೋತರೆ ದೋಷ..!
Next articleಬಳ್ಳಾರಿಯಲ್ಲೇ ದರ್ಶನ್ ದಸರಾ