ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಿಶೀಲನೆಯನ್ನು ಪ್ರಕಟಿಸಿದ್ದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅಧ್ಯಕ್ಷತೆಯಲ್ಲಿ, ರೆಪೊ ದರ ಕಡಿತದ ಕುರಿತು ನಿರ್ಧರಿಸಲು ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿ ತನ್ನ 3 ದಿನಗಳ ಸಭೆಯ ನಂತರ. ಹಿಂದಿನ ಎರಡು ಹಣಕಾಸು ನೀತಿ ವಿಮರ್ಶೆಗಳಲ್ಲಿ ರಿಸರ್ವ್ ಬ್ಯಾಂಕ್ ಈಗಾಗಲೇ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡಿ, ಅದನ್ನು ಶೇಕಡಾ 6 ಕ್ಕೆ ಇಳಿಸಿದೆ. ಆರ್‌ಬಿಐ ಸತತ ಮೂರನೇ ಬಾರಿ ರಿಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆಯ ಈ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್‌ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ ಅವಧಿಯಲ್ಲಿ ಶೇ. 1ರಷ್ಟು ದರ ಇಳಿದಂತಾಗಿದೆ. ಈ ಹೊಸ ದರವು ತತ್ಕ್ಷಣದಿಂದಲೇ ಜಾರಿಗೆ ಬರಲಿದೆ.