RCB ಅಭಿಮಾನಿಗಳ ಕಾಲ್ತುಳಿತ ಪ್ರಕರಣ: KSCAಯ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಪತ್ರ ಹಂಚಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.