16ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, 10 ತಂಡಗಳ ನಡುವೆ ಪ್ರಶಸ್ತಿಗಾಗಿ ಪೈಪೋಟಿ ನಡೆಲಿದ್ದು, ಇಂದಿನಿಂದ ಮೇ 28ರವರೆಗೆ 52 ದಿನಕಾಲ ನಡೆಯಲಿರುವ ಚುಟುಕು ಕ್ರಿಕೆಟ್ ಮಹಾ ಸಂಗ್ರಾಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಲಖನೌ ಸೂಪರ್ ಜೈಂಟ್ಸ್, ಗುಜರಾತ್ ಟೈಟಾನ್ಸ್ ರಾಜಸ್ಥಾನ ಸೇರಿದಂತೆ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಮೊದಲ ಪಂದ್ಯವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.

