Home Advertisement
Home ಕ್ರೀಡೆ ಗೆಲುವಿನ ವಿಶ್ವಾಸದಲ್ಲಿ ಆರ್‌ಸಿಬಿ

ಗೆಲುವಿನ ವಿಶ್ವಾಸದಲ್ಲಿ ಆರ್‌ಸಿಬಿ

0
128
MATCH

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ೨೪ ನೇ ಲೀಗ್ ಪಂದ್ಯ ಸೋಮವಾರ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಹೊನಲು ಬೆಳಕಿನಲ್ಲಿ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ತಂಡ, ತನ್ನ ಐದನೇ ಲೀಗ್ ಪಂದ್ಯ ಆಡಲು ಸಜ್ಜಾಗಿದ್ದು, ಈ ವರೆಗೆ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಜಯ ಹಾಗೂ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿ ಒಟ್ಟು ನಾಲ್ಕು ಅಂಕಗಳೊಂದಿಗೆ ಸಧ್ಯ ಅಂಕಪಟ್ಟಿಯಲ್ಲಿ ಸಧ್ಯ ಏಳನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಚೆನೈ ಸೂಪರ್ ಕಿಂಗ್ಸ್ ತಂಡ ಕೂಡ ತನ್ನ ಐದನೇ ಲೀಗ್ ಪಂದ್ಯ ಆಡಲು ಸಜ್ಜಾಗಿದ್ದು, ಈವರೆಗೆ ಆಡಿದ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಜಯ ಹಾಗೂ ಎರಡು ಸೋಲುಗಳೊಂದಿಗೆ ಸಧ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆಡಿದ ತನ್ನ ನಾಲ್ಕನೇ ಲೀಗ್ ಪಂದ್ಯದಲ್ಲಿ ೨೩ ರನ್ ಜಯ ಸಾಧಿಸಿದ್ದು, ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಕೂಡ ಮಣಿಸುವ ವಿಶ್ವಾಸದಲ್ಲಿದೆ.

ಪಂದ್ಯದ ಆರಂಭ: ರಾತ್ರಿ ೭-೩೦ ರಿಂದ