ಬಾಕು: ಅಜರ್‌ಬೈಜಾನ್‌ನ ಬಾಕುದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚೆಸ್ ಫೆಡರೇಶನ್ (ಫಿಡೆ) ವಿಶ್ವಕಪ್‌ನಲ್ಲಿ ಭಾರತದ ಗ್ರಾö್ಯಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವದ ೩ನೇ ಶ್ರೇಯಾಂಕದ ಆಟಗಾರ ಫ್ಯಾಬಿಯಾನೊ ಕರುವಾನಾ ಅವರನ್ನು ಮಣಿಸಿ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈಗ ಅವರು ಪ್ರಶಸ್ತಿಗಾಗಿ ವಿಶ್ವದ ನಂ.೧ ಮತ್ತು ಮಾಜಿ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಜೊತೆ ಸೆಣಸಾಡಲಿದ್ದಾರೆ.