ತಂದೆಯಾಗಲಿರುವ ಮ್ಯಾಕ್ಸ್ವೆಲ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಹಾಗೂ ಅವರ ಪತ್ನಿ ವಿನಿ ರಾಮನ್, ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಭಾರತ ಮೂಲದ ವಿನಿ ರಾಮನ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ೨೦೨೨ ರ ಮಾರ್ಚ್ ತಿಂಗಳಲ್ಲಿ ವಿವಾಹವಾಗಿದ್ದಾರೆ.
ನಾವು ಮುಂಬರುವ ಸೆಪ್ಟೆಂಬರ್ ತಿಂಗಳಲ್ಲಿ ನಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ವಿನಿ ರಾಮನ್, ಟ್ವಿಟ್ ಮೂಲಕ ವಿಚಾರವನ್ನು ಹಂಚಿಕೊಂಡಿದ್ದಾರೆ.