SK Home Ad
Home ಕ್ರೀಡೆ ಭಾರತಕ್ಕೆ ಭರ್ಜರಿ ಶುಭಾರಂಭ

ಭಾರತಕ್ಕೆ ಭರ್ಜರಿ ಶುಭಾರಂಭ

0
242

ಏಕದಿನ ವಿಶ್ವಕಪ್‌ನ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಅದ್ಭುತವಾಗಿ ಶುಭಾರಂಭ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.3 ಓವರ್‌ಗಳಲ್ಲಿ 199 ರನ್‌ಗಳಿಗೆ ಆಲೌಟ್ ಆಯಿತು.

200 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ಅತ್ಯದ್ಭುತ ಜೊತೆಯಾಟದ ನೆರವಿನಿಂದ 41.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿ ಗುರಿ ತಲುಪಿ ಭಾರತ ಈ ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯಗಳಿಸಿದೆ.