ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 10 ವಿಕೆಟ್ ಸುಲಭ ಜಯ ದಾಖಲಿಸಿದೆ.
ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡ 48.2 ಓವರ್ಗಳಲ್ಲಿ 230 ರನ್ಗಳಿಗೆ ಆಲ್ಔಟ್ ಆಯಿತು. ಭಾರತ ತಂಡ ಗುರಿ ಬೆನ್ನಟ್ಟಲು ಆರಂಭಿಸುತ್ತಿದ್ದಂತೆ ಮಳೆ ಆರಂಭವಾಯಿತು. ಬಳಿಕ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 23 ಓವರ್ಗಳಲ್ಲಿ 145 ರನ್ ಬಾರಿಸುವ ಸವಾಲು ಎದುರಾಯಿತು. ಬಾಂಗ್ಲಾದೇಶದ ಬೌಲರ್ಗಳನ್ನು ಪುಡಿಗಟ್ಟಿದ ರೋಹಿತ್ ಹಾಗೂ ಶುಭ್ಮನ್ 20.1 ಓವರ್ಗಳಲ್ಲಿ 147 ರನ್ ಬಾರಿಸಿ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಗುಂಪು 1ರಲ್ಲಿರುವ ಭಾರತ ತಂಡ ಎರಡನೇ ತಂಡವಾಗಿ ಸೂಪರ್-4 ಹಂತಕ್ಕೆ ಪ್ರವೇಶ ಪಡೆಯಿತು.