Home ಕ್ರೀಡೆ ಭಾರತದ ನಾರಿಯರ ಮುಡಿಗೇರಿದ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ

ಭಾರತದ ನಾರಿಯರ ಮುಡಿಗೇರಿದ ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ

0

ಭಾರತ ಮಹಿಳಾ ಹಾಕಿ ತಂಡ ಭಾನುವಾರ ಜಪಾನ್ ತಂಡವನ್ನು 4-0 ಗೋಲುಗಳಿಂದ ಸೋಲಿಸುವ ಮೂಲಕ ಎರಡನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಜಯಿಸಿತು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜಪಾನ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಭಾರತದ ನಾರಿಯರು ಅದ್ಭುತ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ಸ್ ಟ್ರೋಫಿ ಗೆದ್ದು ಭಾರತದ ಗೌರವ ಹೆಚ್ಚಿಸಿದ್ದಾರೆ ಮತ್ತು ಇದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಹಾಕಿ ತಂಡದ ಎಲ್ಲಾ ಸಹೋದರಿಯರಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.

https://twitter.com/samyuktakarnat2/status/1721410067931529478

Exit mobile version