ದೆಹಲಿ: ಐಪಿಎಲ್ ಪಂದ್ಯಾವಳಿಯ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್‌ನಲ್ಲಿ ಗೆಲುವು ಕಂಡಿದೆ.
ದೆಹಲಿಯ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡೂ ತಂಡಗಳು ತಲಾ 9 ಪಂದ್ಯಗಳಲ್ಲಿ 4 ಜಯ ಮತ್ತು 5 ಸೋಲುಗಳೊಂದಿಗೆ 8 ಅಂಕಗಳನ್ನು ಪಡೆದಿವೆ.
ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ ಭರ್ಜರಿ ಜಯ ದಾಖಲಿಸಿದ ಆತ್ಮವಿಶ್ವಾಸದಲ್ಲಿದೆ. .
ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಎಂಟು ವಿಕೆಟ್‌ಗಳ ಜಯಗಳಿಸಿ ಲಯಕ್ಕೆ ಮರಳಿದೆ.
ಸದ್ಯ ಎರಡೂ ತಂಡಗಳಿಗೂ ಕೂಡ ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯವೂ ಅತ್ಯಂತ ನಿರ್ಣಾಯಕವಾಗಿದ್ದು, ಜಯಕ್ಕಾಗಿ ಕಾದಾಡಲಿವೆ.























