SK Home Ad
Home ಕ್ರೀಡೆ IPL 2026: ಗುಜರಾತ್‌ ವಿರುದ್ಧ ಟಾಸ್‌ ಗೆದ್ದ ಹೈದರಾಬಾದ್

IPL 2026: ಗುಜರಾತ್‌ ವಿರುದ್ಧ ಟಾಸ್‌ ಗೆದ್ದ ಹೈದರಾಬಾದ್

0
363

ಅಹಮದಾಬಾದ್:‌ ಐಪಿಎಲ್‌ ಪಂದ್ಯಾವಳಿಯ 56ನೇ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಪ್ರಸ್ತುತ ಉಭಯ ತಂಡಗಳು ತಲಾ 14 ಅಂಕಗಳನ್ನು ಹೊಂದಿದ್ದು, ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡವು 16 ಅಂಕಗಳೊಂದಿಗೆ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಶುಭಮನ್ ಗಿಲ್ ನೇತೃತ್ವದ ಗುಜರಾತ್ ತಂಡವು ಸತತ ನಾಲ್ಕು ಗೆಲುವುಗಳೊಂದಿಗೆ ಅಬ್ಬರಿಸುತ್ತಿದ್ದರೆ, ಪ್ಯಾಟ್ ಕಮಿನ್ಸ್ ಸಾರಥ್ಯದ ಹೈದರಾಬಾದ್ ಕೂಡ ಕಳೆದ ಏಳು ಪಂದ್ಯಗಳಲ್ಲಿ ಆರರಲ್ಲಿ ಜಯ ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ.

ಈವರೆಗಿನ ಮುಖಾಮುಖಿ ಲೆಕ್ಕಾಚಾರದಲ್ಲಿ ಗುಜರಾತ್ 5-1 ಅಂತರದ ಸ್ಪಷ್ಟ ಮೇಲುಗೈ ಸಾಧಿಸಿದೆ. ಎರಡೂ ಬಲಿಷ್ಠ ತಂಡಗಳ ನಡುವಿನ ಈ ಕಾದಾಟ ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.