ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ಕನ್ನಡಿಗ ಕೆ.ಎಲ್. ರಾಹುಲ್‌ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.
ಬಿಸಿಸಿಐ ಆಯ್ಕೆ ಸಮಿತಿ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೇ ಈ ಸರಣಿ ಮೂಲಕ ವಿಕೆಟ್ ಕೀಪರ್ ರಿಷಬ್ ಪಂತ್ ಏಕದಿನ ಸರಣಿಗೆ ಕಮ್ ಬ್ಯಾಕ್ ಮಾಡಿದ್ದಾರೆ.
ಬುಮ್ರಾ, ಸಿರಾಜ್‌ಗೆ ವಿಶ್ರಾಂತಿ: ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ಅವರಿಗೆ ಸರಣಿಯಿಂದ ಕೈಬಿಡಲಾಗಿದೆ. ಆದರೆ ದಕ್ಷಿಣ ಆಫ್ರಿಕಾ ‘ಎ’ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಋುತುರಾಜ್ ಗಾಯಕ್ವಾಡ್‌ಗೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ನವೆಂಬರ್ 30 ರಿಂದ ಡಿಸೆಂಬರ್ 6 ರವರೆಗೆ ನಡೆಯಲಿರುವ ಮೂರು ಪಂದ್ಯಗಳ ಸರಣಿಯು ರಾಂಚಿ, ರಾಯ್‌ಪುರ ಮತ್ತು ವಿಶಾಖಪಟ್ಟಣಂನಲ್ಲಿ ಪಂದ್ಯಗಳು ನಡೆಯಲಿವೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್(ನಾಯಕ), ರಿಷಭ್ ಪಂತ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್
