ಹೈದರಾಬಾದ್: ಅಭಿಷೇಕ್ ಶರ್ಮಾ ಭರ್ಜರಿ ಶತಕದ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬೃಹತ್ ರನ್ ಪೇರಿಸಿದೆ.
ಟಾಸ್ ಸೋತು ಮೊದಲ ಬ್ಯಾಟಿಂಗ್‌ಗೆ ಇಳಿದ ಸನ್‌ರೈಸರ್ಸ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 2 ವಿಕಟ್ ಕಳೆದುಕೊಂಡು 242 ರನ್ ಗಳಿಸಿತು.
8.4 ಓವರ್‌ಗಳಲ್ಲಿಯೇ 97 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ ತಂಡಕ್ಕೆ ಅಕ್ಷರ್ ಪಟೇಲ್ ತಮ್ಮ ಐದನೇ ಎಸೆತದಲ್ಲಿ ಟ್ರಾವಿಸ್ ಹೆಡ್ ಉರುಳಿಸುವಲ್ಲಿ ಯಶ ಕಂಡರು.
ಆದರೆ ಎರಡನೇ ವಿಕೆಟ್‌ಗೆ ಕ್ರಿಸ್‌ಗೆ ಬಂದ ಇಶಾನ್ ಕಿಶಾನ್ ಕೂಡ ಸ್ಫೋಟಕ ಬ್ಯಾಟಿಂಗ್ ಶುರು ಮಾಡಿದರು. ಕೇವಲ 13 ಎಸೆತದಲ್ಲಿ 2 ಬೌಂಡರಿ, 1 ಸಿಕ್ಸರ್‌ನಿಂದ 25 ರನ್‌ಗಳಿಸಿ ಆರ್ಭಟಿಸುತ್ತಿರುವಾಗ ರನ್ ಕದಿಯಲು ಹೋಗಿ ಔಟಾದರು.
ಹೆನ್ರಿಕ್ ಕ್ಲಾಸೆನ್ ಕೂಡ ಮೈದಾನಕ್ಕೆ ಬರುತ್ತಿದ್ದಂತೆಯೇ ಬೌಲರ್‌ಗಳನ್ನು ಬೆಂಡೆತ್ತಲು ಶುರುಮಾಡಿದರು. ಕೇವಲ 13 ಎಸೆತದಲ್ಲಿ 3 ಬೌಂಡರಿ, 3 ಸಿಕ್ಸರ್‌ನಿಂದ 37 ರನ್ ಗಳಿಸಿ ಅಜೇಯರಾಗಿ ಉಳಿದರು.
ಇನ್ನೊಂದು ತುದಿಯಲ್ಲಿ ಅಭಿಷೇಕ್ ಶರ್ಮಾ ಆರಂಭದಿಂದಲೂ ಬೌಲರ್‌ಗಳನ್ನು ದಂಡಿಸುತ್ತಲೇ ಬಂದರು. ಕೇವಲ 68 ಎಸೆತಗಳಲ್ಲಿ 10 ಬೌಂಡರಿ, 10 ಸಿಕ್ಸರ್‌ಗಳಿಂದ 135 ರನ್ ಗಳಿಸಿ ಅಜೇಯರಾಗಿ ಉಳಿದರು.























