Home Advertisement
Home ಕ್ರೀಡೆ IPL 2026: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ

IPL 2026: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ

0
68

ಗುವಾಹಟಿ: ಐಪಿಎಲ್ 19ನೇ ಆವೃತ್ತಿಯ ಹೈವೋಲ್ಟೇಜ್ ಪಂದ್ಯಕ್ಕೆ ಇಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣ ಸಜ್ಜಾಗಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಅಜೇಯ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ.

ಸತತ ಎರಡು ಪಂದ್ಯ ಗೆದ್ದಿರುವ ಆರ್‌ಸಿಬಿ ಇಂದು ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ. ಈ ಪಂದ್ಯದಲ್ಲಿ ಮುಖ್ಯವಾಗಿ ರಾಜಸ್ಥಾನ್ ತಂಡದ 15 ವರ್ಷದ ವೈಭವ್ ಸೂರ್ಯವಂಶಿ ಆಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ತಮ್ಮ ನಿರ್ಭೀತ ಹಾಗೂ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಈ ಬಾಲ ಪ್ರತಿಭೆ ಕಟ್ಟಿಹಾಕಲು ಆರ್‌ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಸಜ್ಜಾಗಿದ್ದಾರೆ. ಪವರ್‌ಪ್ಲೇನಲ್ಲಿ ಭುವಿ ಸ್ವಿಂಗ್ ಬೌಲಿಂಗ್ ಮತ್ತು ವೈಭವ್ ಆಕ್ರಮಣಕಾರಿ ಬ್ಯಾಟಿಂಗ್ ನಡುವಿನ ಜಿದ್ದಾಜಿದ್ದಿ ಪಂದ್ಯದ ಪ್ರಮುಖ ಆಕರ್ಷಣೆಯಾಗಲಿದೆ.

ಇನ್ನು ಆರ್‌ಸಿಬಿ ತಂಡಕ್ಕೆ ಸ್ಟಾರ್ ವೇಗಿ ಜೋಶ್ ಹೇಝಲ್‌ವುಡ್ ಮರಳುವ ಸಾಧ್ಯತೆಯಿದೆ. ಹಾಗೇನಾದ್ರು ಆದ್ರೆ ಬೌಲಿಂಗ್ ವಿಭಾಗಕ್ಕೆ ಆನೆಬಲ ಬರಲಿದೆದೆ. ಬ್ಯಾಟಿಂಗ್‌ನಲ್ಲಿ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ.

ಅತ್ತ ರಾಜಸ್ಥಾನ್ ಪರ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಬಿಗ್ ಇನ್ನಿಂಗ್ಸ್ ಕಟ್ಟುವ ನಿರೀಕ್ಷೆಯಲ್ಲಿದ್ದಾರೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಉಭಯ ತಂಡಗಳ ನಡುವೆ ಶುಕ್ರವಾರ ರೋಚಕ ಹೋರಾಟ ನಡೆಯುವುದು ಖಚಿತವಾಗಲಿದೆ.