Home Advertisement
Home ಕ್ರೀಡೆ IPL: ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

IPL: ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

0
17

ಹುಬ್ಬಳ್ಳಿ: ಕ್ರಿಕೆಟ್‌ ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತ ಕುಳಿತಿದ್ದ ಐಪಿಎಲ್‌ ವೇಳಾಪಟ್ಟಿ ಕೊನೆಗೂ ಹೊರಬಿದಿದ್ದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ.

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ಮಾರ್ಚ್‌ 28ರಿಂದ ಏಪ್ರಿಲ್‌ 12ರ ವರೆಗೆ ನಡೆಯಲಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.

ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿರುವುದರಿಂದಾಗಿ ಈ ರಾಜ್ಯಗಳಿಗೆ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.