ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಬೆಂಗಳೂರಿನಲ್ಲಿ

0
74

ಬೆಂಗಳೂರು: ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೇಜ್‌ ಜಗಜ್ಜಾಹೀರ ಆಗಿದೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅವಘಡದಿಂದ ಬೆಂಗಳೂರು ಕ್ರಿಕೆಟ್‌ ಪ್ರಿಯರಲ್ಲಿ ಕೊಂಚ ಮಸಕು ಕವಿದಂತ ವಾತವಾರಣ ಸೃಷ್ಟಿಯಾಗಿದೆ. ಇದಕ್ಕೆ ಪೂರಕ ಎಂಂತೆ ನಾಳೆಯಿಂದ ನಡೆಯಬೇಕಿದ್ದ ಮಹಾರಾಜ ಟ್ರೋಫಿ ಟಿ20 ಲೀಗ್‌ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದು ಕ್ರಿಕೆಟ್‌ ಪ್ರಿಯರಲ್ಲಿ ನಿರಾಸೆ ಮೂಡಿಸಿತ್ತು. ಇದರ ಮದ್ಯ ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರವಲಯದಲ್ಲಿ 80,000 ಆಸನಗಳ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ನಿರ್ಮಿಸಲು ಅನುಮೋದನೆ ನೀಡಿರುವ ಸುದ್ದಿ ಇದೆ.

ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಕೇವಲ 17 ಎಕರೆ ವಿಸ್ತೀರ್ಣದಲ್ಲಿರುವ ಈ ಕ್ರೀಡಾಂಗಣ ಕೇವಲ 32,000 ಆಸನ ಸಾಮರ್ಥ್ಯವನ್ನು ಮಾತ್ರ ಹೊಂದಿದೆ. ರಾಜ್ಯ ಸರ್ಕಾರವು ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು ಹಸಿರು ನಿಶಾನೆ ತೋರಿಸಿದ್ದು. ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅತ್ಯಾಧುನಿಕ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 8 ರಂದು ಅನುಮೋದನೆ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದಲ್ಲಿ ನಿರ್ಮಾಣ ಆಗಲಿರುವ ಕ್ರೀಡಾಂಗಣ ವಿಶ್ವದ 3ನೇ ಅತಿದೊಡ್ಡ ಸ್ಟೇಡಿಯಂ ಆಗಿದೆ. ಭಾರತದ ಎರಡನೇ ಅತಿದೊಡ್ಡ, ಒಟ್ಟಾರೆ ಮೂರನೇ ದೊಡ್ಡ ಆಸನ ಸಾಮರ್ಥ್ಯದ ಹೊಂದಿದ ಕ್ರಿಡಾಂಗಣ ಆಗಲಿದೆ. ಪ್ರಸ್ತುತ 1,32,000 ಆಸನ ಸಾಮರ್ಥ್ಯ ಹೊಂದಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ದೇಶದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಆಗಿದೆ.

ವಿಶಾಲವಾದ ಪಾರ್ಕಿಂಗ್ ಸ್ಥಳ ಮತ್ತು ಹೆಚ್ಚಿನ ಆಸನ ಸಾಮರ್ಥ್ಯ ಇರುವ ಕ್ರೀಡಾಂಗಣವನ್ನು ನಗರದ ಹೊರ ವಲಯವಾದ ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 100 ಎಕರೆ ಪ್ರದೇಶದಲ್ಲಿ ಕ್ರೀಡಾ ಕೇಂದ್ರವನ್ನು ನಿರ್ಮಿಸಲು ಕೆ ಎಚ್‌ ಬಿ ಸಜ್ಜಾಗಿದ್ದು, ಇನ್ನು ಈ ಕ್ರೀಡಾಂಗಣಕ್ಕೆ ಅಂದಾಜು ₹1,650 ಕೋಟಿ ವೆಚ್ಚ ಆಗಲಿದೆ ಎನ್ನಲಾಗಿದೆ. ಈ ಕ್ರೀಡಾಂಗಣವನ್ನು ಕರ್ನಾಟಕ ಗೃಹ ಮಂಡಳಿಯಿಂದ ನಿರ್ಮಿಸಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವುದಿಲ್ಲ. ಎಲ್ಲಾ ಖರ್ಚನ್ನು ಗೃಹ ಮಂಡಳಿಯೇ ನೋಡಿಕೊಳ್ಳಲಿದೆ. ಇದರ ಜತೆಗೆ ನಿರ್ವಹಣೆಯನ್ನೂ ಗೃಹ ಮಂಡಳಿಯೇ ಮಾಡಲಿದೆ.

ಪ್ರಸ್ತಾವಿತ ಕ್ರೀಡಾ ಕೇಂದ್ರವು ಕ್ರಿಕೆಟ್ ಸೇರಿದಂತೆ ಎಂಟು ಒಳಾಂಗಣ ಮತ್ತು ಎಂಟು ಹೊರಾಂಗಣ ಕ್ರೀಡೆಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ. ಈ ಕೇಂದ್ರವು ಅತ್ಯಾಧುನಿಕ ಜಿಮ್‌ಗಳು, ತರಬೇತಿ ಸೌಲಭ್ಯಗಳು, ಈಜುಕೊಳ, ಅತಿಥಿ ಗೃಹಗಳು, ಹಾಸ್ಟೆಲ್‌ಗಳು, 3 ಸ್ಟಾರ್ ಮತ್ತು 5 ಸ್ಟಾರ್ ಹೋಟೆಲ್‌ಗಳು ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳನ್ನು ಆಯೋಜಿಸ ಬಹುದಾದ ಸಮಾವೇಶ ಸಭಾಂಗಣವನ್ನು ಸಹ ಹೊಂದಿರಲಿದೆ ಎನ್ನಲಾಗಿದೆ. ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಈ ಹೊಸ ಕ್ರಿಕೆಟ್ ಸ್ಟೇಡಿಯಂ, ಸದ್ಯ ಚಿನ್ನಸ್ವಾಮಿ ಸ್ಟೇಡಿಯಂನಿಂದ 28 ಕಿಲೋಮೀಟರ್ ದೂರದಲ್ಲಿದೆ.

Previous articleನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ: ಮೋದಿಯೊಂದಿಗೆ ಪ್ರಯಾಣ ಮಾಡಿದ ಸಿಎಂ-ಡಿಸಿಎಂ
Next articleಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ತಂತ್ರಜ್ಞಾನ ಮೇಕ್ ಇನ್ ಇಂಡಿಯಾ ಬಲ ಇದೆ

LEAVE A REPLY

Please enter your comment!
Please enter your name here