Home Advertisement
Home ಕ್ರೀಡೆ IPL 2026: ಚೆನ್ನೈನಲ್ಲೇ ಸಿಎಸ್‌ಕೆಗೆ ಮುಂಬೈ ಪಡೆ ಸವಾಲು

IPL 2026: ಚೆನ್ನೈನಲ್ಲೇ ಸಿಎಸ್‌ಕೆಗೆ ಮುಂಬೈ ಪಡೆ ಸವಾಲು

0
56

ಚೆನ್ನೈ: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ `ಎಲ್ ಕ್ಲಾಸಿಕೋ’ ಹಣಾಹಣಿಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗಲಿದೆ.

ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಋತುವಿನಲ್ಲಿ ಮಿಶ್ರ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ತಂಡದ ಪರ ಸಂಜು ಸ್ಯಾಮ್ಸನ್ ಅದ್ಭುತ ಫಾರ್ಮ್‌ನಲ್ಲಿದ್ದು, ಈಗಾಗಲೇ ಎರಡು ಶತಕಗಳೊಂದಿಗೆ 300ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಅನ್ಶುಲ್ ಕಾಂಬೋಜ್ ಮತ್ತು ಜೆಮ್ಮಿ ಓವರ್ಟನ್ ತಂಡದ ಬಲವಾಗಿದ್ದಾರೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಕಠಿಣ ಸವಾಲನ್ನು ಎದುರಿಸುತ್ತಿದೆ.

ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸಿರುವ ಮುಂಬೈ, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ. ರಯಾನ್ ರಿಕೆಲ್ಟನ್ ಕಳೆದ ಪಂದ್ಯದಲ್ಲಿ 123 ರನ್ ಗಳಿಸಿ ಮಿಂಚಿರುವುದು ತಂಡಕ್ಕೆ ಹೊಸ ಭರವಸೆ ನೀಡಿದೆ.

ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಈ ಎರಡು ತಂಡಗಳ ನಡುವಿನ ಐಪಿಎಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ 22-20 ಅಂತರದ ಸಲ್ಪ ಮುನ್ನಡೆ ಹೊಂದಿದೆ. ಆದರೆ, ಕಳೆದ ಎಪ್ರಿಲ್ 23 ರಂದು ನಡೆದಿದ್ದ ಮೊದಲ ಪಂದ್ಯದಲ್ಲಿ ಸಿಎಸ್‌ಕೆ ತಂಡವು 103 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಆ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಸಿಡಿಸಿ ಮಿಂಚಿದ್ದರು.

ಪ್ಲೇ ಆಫ್ ರೇಸ್‌ನಲ್ಲಿ ಉಳಿಯಲು ಮುಂಬೈ ತಂಡಕ್ಕೆ ಈ ಪಂದ್ಯವು ಅತ್ಯಂತ ನಿರ್ಣಾಯಕವಾಗಿದೆ. ಸಿಎಸ್‌ಕೆ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಹವಣಿಸುತ್ತಿದೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ