ಚೆನ್ನೈ: ಐಪಿಎಲ್ ಪಂದ್ಯಾವಳಿಯ 44ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಇಲ್ಲಿನ ಎಂ.ಎ. ಚಿದಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಋತುವಿನಲ್ಲಿ ಮಿಶ್ರ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸಿರುವ ಮುಂಬೈ, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.
ಪ್ಲೇ ಆಫ್ ರೇಸ್‌ನಲ್ಲಿ ಉಳಿಯಲು ಮುಂಬೈ ತಂಡಕ್ಕೆ ಈ ಪಂದ್ಯವು ಅತ್ಯಂತ ನಿರ್ಣಾಯಕವಾಗಿದೆ. ಸಿಎಸ್‌ಕೆ ಕೂಡ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಹವಣಿಸುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಸಂಜು ಸ್ಯಾಮ್ಸನ್(w), ರುತುರಾಜ್ ಗಾಯಕ್ವಾಡ್(c), ಉರ್ವಿಲ್ ಪಟೇಲ್, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಜೇಮಿ ಓವರ್ಟನ್, ರಾಮಕೃಷ್ಣ ಘೋಷ್, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮುಖೇಶ್ ಚೌಧರಿ
ಮುಂಬೈ ಇಂಡಿಯನ್ಸ್ ತಂಡ: ವಿಲ್ ಜಾಕ್ಸ್, ರಿಯಾನ್ ರಿಕೆಲ್ಟನ್(w), ಸೂರ್ಯಕುಮಾರ್ ಯಾದವ್, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ಸಿ), ರಾಬಿನ್ ಮಿಂಜ್, ಟ್ರೆಂಟ್ ಬೌಲ್ಟ್, ಕ್ರಿಶ್ ಭಗತ್, ಜಸ್ಪ್ರೀತ್ ಬುಮ್ರಾ, ಎಎಮ್ ಗಜನ್ಫರ್























