ಮುಂಬೈ: ಐಪಿಎಲ್ ಪಂದ್ಯಾವಳಿಯ 69ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಮುಂಬೈ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ರಾಜಸ್ಥಾನ್ ರಾಯಲ್ಸ್‌ಗೆ ಇದು ಅತ್ಯಂತ ನಿರ್ಣಾಯಕ ಪಂದ್ಯ. ಸದ್ಯ 13 ಪಂದ್ಯಗಳಿಂದ 14 ಅಂಕ ಗಳಿಸಿರುವ ರಾಜಸ್ಥಾನ್ ತಂಡವು ಪ್ಲೇಆಫ್‌ನ ನಾಲ್ಕನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.






















