ಧರ್ಮಶಾಲಾ: ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗುತ್ತಿದ್ದು, ಗುಜರಾತ್ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿರುವ ‘ಕ್ವಾಲಿಫೈಯರ್ 1’ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಮೇ 31ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಮಹಾ ಫೈನಲ್‌ಗೆ ಲಗ್ಗೆ ಇಡಲಿದೆ. ಸೋತ ತಂಡಕ್ಕೆ ಫೈನಲ್ ತಲುಪಲು ಕ್ವಾಲಿಫೈಯರ್ 2 ರೂಪದಲ್ಲಿ ಮತ್ತೊಂದು ಅವಕಾಶ ಸಿಗಲಿದೆಯಾದರೂ, ಎರಡೂ ತಂಡಗಳು ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಲು ಸೆಣಸಾಡುತ್ತಿವೆ.
ಲೀಗ್ ಹಂತದ 14 ಪಂದ್ಯಗಳಲ್ಲಿ ತಲಾ 18 ಅಂಕಗಳನ್ನು ಗಳಿಸಿದ್ದರೂ, ರನ್‌ರೇಟ್ ಆಧಾರದ ಮೇಲೆ ಆರ್‌ಸಿಬಿ (+0.783) ಪ್ರಥಮ ಸ್ಥಾನ ಹಾಗೂ ಗುಜರಾತ್ ಟೈಟನ್ಸ್ (+0.695) ದ್ವಿತೀಯ ಸ್ಥಾನ ಪಡೆದು ಕ್ವಾಲಿಫೈಯರ್ 1 ಹಂತಕ್ಕೆ ಪ್ರವೇಶಿಸಿವೆ.






















