ರಾಯಪುರ್: ಐಪಿಎಲ್ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಂಗಳೂರು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಉಭಯ ತಂಡಗಳಿಗೂ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲು ಈ ಜಯ ಅನಿವಾರ್ಯವಾಗಿದೆ.
ಬೆಂಗಳೂರು ತಂಡವು ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿದೆ.
ಸತತ 4 ಗೆಲುವುಗಳನ್ನು ಕಂಡಿರುವ ಕೆಕೆಆರ್‌ಗೆ ನಾಯಕ ಅಜಿಂಕ್ಯ ರಹಾನೆ, ರಿಂಕು ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ ಮುಖ್ಯಪಾತ್ರ ವಹಿಸಿದ್ದಾರೆ. ಬ್ಯಾಟಿಂಗ್‌ನಲ್ಲಿ ರಿಂಕು ಸಿಂಗ್ ಮತ್ತು ಫಿನ್ ಅಲೆನ್ ಸ್ಫೋಟಕ ಆಟವಾಡಬಲ್ಲರು.























