SK Home Ad
Home ಕ್ರೀಡೆ ಬಂಗಾರಮಕ್ಕಿಯಲ್ಲಿ ಸ್ಮೃತಿ ಮಂಧಾನ: ವೀರಾಂಜನೇಯನ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬಂಗಾರಮಕ್ಕಿಯಲ್ಲಿ ಸ್ಮೃತಿ ಮಂಧಾನ: ವೀರಾಂಜನೇಯನ ಸನ್ನಿಧಿಯಲ್ಲಿ ವಿಶೇಷ ಪೂಜೆ

0
10

ಹೊನ್ನಾವರ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಬಂಗಾರಮಕ್ಕಿಗೆ ಭೇಟಿ ನೀಡಿ ವೀರಾಂಜನೇಯ ಸ್ವಾಮಿಯ ದರ್ಶನ ಪಡೆದರು.

ಬಂಗಾರಮಕ್ಕಿಗೆ ಆಗಮಿಸಿದ ಸ್ಮೃತಿ ಮಂಧಾನ ಅವರನ್ನು ಶ್ರೀಕ್ಷೇತ್ರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ವೀರಾಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಕೆಲಕಾಲ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದರು.

ನಂತರ ಮಾರುತಿ ಗುರೂಜಿ ಅವರನ್ನು ಭೇಟಿಯಾದ ಸ್ಮೃತಿ ಮಂಧಾನ ಅವರು ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು.

ಕ್ರಿಕೆಟ್‌ ಅಂಗಳದಲ್ಲಿ ತಮ್ಮ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿರುವ ಸ್ಮೃತಿ ಮಂಧಾನ ಅವರ ಬಂಗಾರಮಕ್ಕಿ ಭೇಟಿ ಇದೀಗ ಭಕ್ತರು ಹಾಗೂ ಕ್ರಿಕೆಟ್‌ ಅಭಿಮಾನಿಗಳ ಗಮನ ಸೆಳೆದಿದೆ. ಶ್ರೀಕ್ಷೇತ್ರದಲ್ಲಿ ಅವರ ದರ್ಶನ ಪಡೆದ ಕ್ಷಣಗಳು ಅಭಿಮಾನಿಗಳಲ್ಲೂ ಸಂತಸ ಮೂಡಿಸಿವೆ.

ಈ ಹಿಂದೆ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರೂ ಬಂಗಾರಮಕ್ಕಿಗೆ ಭೇಟಿ ನೀಡಿದ್ದರು. ಇದೀಗ ಸ್ಮೃತಿ ಮಂಧಾನ ಅವರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿರುವುದು ವಿಶೇಷ ಗಮನ ಸೆಳೆದಿದೆ.