ಮುಂಬೈ: ನಾಯಕಿ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವೋಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸುವ ಮೂಲಕ ಅಜೇಯ ಓಟವನ್ನು ಮುಂದುವರಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 167 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 18. 2 ಓವರ್‌ಗಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆಯ್ದುಕೊಂಡಿತ್ತು. ಲೆಕ್ಕಾಚಾರದಂತೆ ಆರಂಭದಲ್ಲಿಯೇ ಡೆಲ್ಲಿ ಆಟಗಾರರನ್ನು ಪೆವಿಲಿಯನ್ ಪರೇಡ್ ನಡೆಸಿದ ಆರ್‌ಸಿಬಿ ಬೌಲರ್‌ಗಳು ಕೇವಲ 10 ರನ್‌ಗಳಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು.
ಶಫಾಲಿ ಏಕಾಂಗಿ ಹೋರಾಟ: ಡೆಲ್ಲಿ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಒಂದಡೆ ವಿಕೆಟ್ ಬೀಳುತ್ತಿದ್ದರೂ ಇನ್ನೊಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಏಕಾಂಗಿ ಹೋರಾಟ ನಡೆಸಿ ತಂಡವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ದರು. ಕೇವಲ 41 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್‌ಗಳಿಂದ 62 ರನ್‌ಗಳಿಸಿ 8 ವಿಕೆಟ್‌ಗೆ ಔಟಾದರು.
167 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಆರಂಭದಲ್ಲಿಯೇ ಆಘಾತ ಅನುಭವಿಸಿತು. ಗ್ರೇಸ್ ಹ್ಯಾರಿಸ್ ಕೇವಲ 1 ರನ್ ಗಳಿಸಿ ಔಟಾದರು. ಆದರೆ, ಬಳಿಕ ಜತೆಯಾದ ನಾಯಕಿ ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವೋಲ್ ಜೋಡಿ ಅತ್ಯುತ್ತಮ ಜತೆಯಾಟ ನಡೆಸಿತು. ಸ್ಮೃತಿ ಮಂಧಾನ ಕೇವಲ 96 ರನ್‌ಗಳಿಸಿ ಕೇವಲ 4 ರನ್‌ಗಳಿಂದ ಶತಕದಿಂದ ವಂಚಿತರಾದರು.









