#ಸಂಯುಕ್ತ ಕರ್ನಾಟಕ ಲೈವ್ Archives - Samyukta Karnataka

Samyukta Karnataka News Live: ವ್ಯಾಪಾರಿಗಳಿಗೆ ಹಬ್ಬದ ಶಾಕ್: ವಾಣಿಜ್ಯ LPG ಬೆಲೆಯಲ್ಲಿ ಏರಿಕೆ
ಏಷ್ಯನ್ ಗೇಮ್ಸ್ 2026 – ಪಾಕಿಸ್ತಾನ ವಿರುದ್ಧ 4–3 ಗೆದ್ದು ಫೈನಲ್ ಪ್ರವೇಶಿಸಿದ ಭಾರತ : 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡ ರೋಚಕ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ ಭಾರತ 4–3 ಅಂತರದಿಂದ ಜಯ ಸಾಧಿಸಿ ಚಿನ್ನದ ಪದಕದ ಹೋರಾಟಕ್ಕೆ ಅರ್ಹತೆ ಪಡೆದುಕೊಂಡಿದೆ. 2026ರ ಏಷ್ಯನ್ ಗೇಮ್ಸ್‌ನಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವ ಭಾರತದ ಪ್ರಯತ್ನ ಮುಂದುವರಿದಿದ್ದು, ಫೈನಲ್‌ನಲ್ಲಿ ಮತ್ತೊಂದು ಗೆಲುವು ಸಾಧಿಸಿದರೆ ತಂಡ ತನ್ನ ಏಷ್ಯನ್ ಗೇಮ್ಸ್ ಹಾಕಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರೇಷನ್ ಕಾರ್ಡ್ e-KYCಗೆ 8 ಜಿಲ್ಲೆಗಳಲ್ಲಿ ‘ಅನ್ನ ಸೇವೆ’ ಆ್ಯಪ್ ಪೈಲಟ್ ಯೋಜನೆ : ರೇಷನ್ ಕಾರ್ಡ್‌ದಾರರಿಗೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ‘ಅನ್ನ ಸೇವೆ’ ಎಂಬ ಮೊಬೈಲ್ ಆ್ಯಪ್‌ನ್ನು ಪರಿಚಯಿಸಿದೆ. ಈ ಮೂಲಕ ಮುಂದಿನ ಹಂತದಲ್ಲಿ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗೆ ತೆರಳುವ ಅಗತ್ಯವಿಲ್ಲದೆ ಮೊಬೈಲ್‌ನಲ್ಲೇ e-KYC ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್‌ಗೆ ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಇದನ್ನು 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ (Pilot Project) ಜಾರಿಗೆ ತರಲಾಗಿದೆ. ಪೈಲಟ್ ಯೋಜನೆಯ ಫಲಿತಾಂಶವನ್ನು ಆಧರಿಸಿ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿಯಲ್ಲಿ ಪ್ರಮೋದ್ ಮುತಾಲಿಕ್‌ಗೆ ಪ್ರವೇಶ ನಿರ್ಬಂಧ : ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಶ್ರೀರಾಮ ಸೇನೆಯ ಸಂಸ್ಥಾಪಕ ಹಾಗೂ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಲಬುರಗಿ ಉಪವಿಭಾಗದ ವ್ಯಾಪ್ತಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಕಲಬುರಗಿ ಸಹಾಯಕ ಆಯುಕ್ತೆ ರಿತಿಕಾ ವರ್ಮಾ ಅವರು ಹೊರಡಿಸಿರುವ ಆದೇಶದ ಪ್ರಕಾರ, ಗುರುವಾರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 6ರ ಬೆಳಗ್ಗೆ 8 ಗಂಟೆಯವರೆಗೆ ಕಲಬುರಗಿ ಉಪವಿಭಾಗದ ವ್ಯಾಪ್ತಿಯ ಕಲಬುರಗಿ, ಜೇವರ್ಗಿ, ಯಡ್ರಾಮಿ, ಅಫಜಲಪುರ ಹಾಗೂ ಆಳಂದ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಲಚ್ಯಾಣ ಭಕ್ತರಿಗೆ ಗುಡ್‌ನ್ಯೂಸ್ – 4 ದಿನ ವಿಶೇಷ ರೈಲು ನಿಲುಗಡೆ : ವಿಜಯಪುರ ಜಿಲ್ಲೆಯ ಲಚ್ಯಾಣದಲ್ಲಿ ನಡೆಯಲಿರುವ ಶ್ರೀ ಸಿದ್ದಲಿಂಗ ಮಹಾರಾಜರ ಪುಣ್ಯತಿಥಿ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ 4ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಲಚ್ಯಾಣ ರೈಲು ನಿಲ್ದಾಣದಲ್ಲಿ ಆಯ್ದ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ಕಲ್ಪಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

9/11 ರೀತಿಯ ದುರಂತ ತಪ್ಪಿಸಿದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಧೈರ್ಯಕ್ಕೆ ಮೋದಿ ಶ್ಲಾಘನೆ : ಫ್ಲೈದುಬೈ ವಿಮಾನದಲ್ಲಿ ಸಂಭವಿಸಿದ ಗಂಭೀರ ಮಧ್ಯಂತರ ಘಟನೆಯ ಸಂದರ್ಭದಲ್ಲಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಶೌರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ ಇತರರ ಜೀವ ರಕ್ಷಿಸುವ ನಿಟ್ಟಿನಲ್ಲಿ ಕ್ಯಾಪ್ಟನ್ ಮಚ್ಚರ್ ಕೈಗೊಂಡ ಕ್ರಮವು ಭಾರೀ ದುರಂತವನ್ನು ತಪ್ಪಿಸಲು ನೆರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಕ್ಕರೆಯ MSP ಬಗ್ಗೆ ಗೊಂದಲ ಬೇಡ ಎಂದ ಪ್ರಲ್ಹಾದ್ ಜೋಶಿ : ಸಕ್ಕರೆಯ ಬೆಲೆ ಹಾಗೂ ಕಬ್ಬು ಬೆಳೆಗಾರರಿಗೆ ಪಾವತಿಸುವ ದರದ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ, ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸಕ್ಕರೆಯ ₹31ರ MSP ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಕ್ಕರೆಗೆ ನಿಗದಿಪಡಿಸಿರುವ MSP ಎಂದರೆ Minimum Support Price ಅಲ್ಲ, ಅದು Minimum Selling Price (ಕನಿಷ್ಠ ಮಾರಾಟ ಬೆಲೆ) ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Form-7 ಮೂಲಕ ಮತದಾರರ ಹೆಸರು ಅಳಿಸುವ ಆರೋಪ; ಮಾಹಿತಿ ನೀಡುವಂತೆ ಡಿಕೆಶಿ ಮನವಿ : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ Form-7 ಅರ್ಜಿಗಳ ಕುರಿತ ವಿವಾದದಿಂದ ಮತ್ತಷ್ಟು ಚರ್ಚೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಪ್ಪು ಮಾಹಿತಿಯೊಂದಿಗೆ Form-7 ಸಲ್ಲಿಸಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯಕ್ಕೆ ವಿಶ್ವದ ಗಣ್ಯರ ಮೆಚ್ಚುಗೆ : ಫ್ಲೈದುಬೈ ವಿಮಾನದಲ್ಲಿ ನಡೆದ ಹೈಜಾಕ್ ಯತ್ನದ ವೇಳೆ ಅಸಾಧಾರಣ ಧೈರ್ಯ ಮತ್ತು ಸಮಯಪ್ರಜ್ಞೆ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಶೌರ್ಯಕ್ಕೆ ಪ್ರಧಾನಿ ಮೋದಿ ಸೇರಿದಂತೆ ವಿಶ್ವದ ಹಲವು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

KSRTC ಬಸ್-ಲಾರಿ ನಡುವೆ ಭೀಕರ ಡಿಕ್ಕಿ : ಚಿತ್ರದುರ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಣಿವೆ ಬಳಿ KSRTC ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ KSRTC ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ : ಹಬ್ಬದ ಋತುವಿನ ಆರಂಭದಲ್ಲೇ ಹೋಟೆಲ್, ರೆಸ್ಟೋರೆಂಟ್, ಕ್ಯಾಟರಿಂಗ್ ಸೇರಿದಂತೆ ವಾಣಿಜ್ಯ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಅಕ್ಟೋಬರ್ 1, 2026ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ₹62.50ರಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸೆಪ್ಟೆಂಬರ್‌ನಲ್ಲಿ ₹2,747.50 ಇದ್ದ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ ₹2,810ಕ್ಕೆ ಏರಿಕೆಯಾಗಿದೆ. ಇದು ಸುಮಾರು ಶೇ.2.3ರಷ್ಟು ಹೆಚ್ಚಳವಾಗಿದೆ. ದೇಶದ ಇತರ ನಗರಗಳಲ್ಲಿಯೂ ವಾಣಿಜ್ಯ LPG ದರ ಏರಿಕೆಯಾಗಿದೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಕಣ ಬರಹ | ಹುಬ್ಬಳ್ಳಿ ರೈತ ಹೋರಾಟ – ಹತ್ತಿಕ್ಕದಿರಿ, ಸ್ಪಂದಿಸಿ : ಸಂಯುಕ್ತ ಕರ್ನಾಟಕ ಕಾರ್ಯನಿರ್ವಾಹಕ ಹಾಗೂ ಸಂಪಾದಕರಾದ ಮೋಹನ ಹೆಗಡೆ ಅವರ ಅಂಕಣ ಗುರುವಾರ ದಿನಪತ್ರಿಕೆಯಲ್ಲಿ ಪ್ರಕಟವಾದ ಲೇಖನದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ರೈತರ ಪ್ರತಿಭಟನೆಯು 1980ರ ದಶಕದ ಚಳವಳಿಯನ್ನು ನೆನಪಿಸುವಂತಿದ್ದು, ಕಬ್ಬು ಬೆಳೆಗಾರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿದ್ದರು. ಪಂಜಾಬ್, ಮಹಾರಾಷ್ಟ್ರ ರಾಜ್ಯಗಳಿಗೆ ಇರುವ ಕಬ್ಬು ಹಾಗೂ ಎಥಿನಾಲ್ ಖರೀದಿ ನೀತಿಗೂ, ಕರ್ನಾಟಕದ ನೀತಿಗೂ ವ್ಯತ್ಯಾಸವಿದ್ದು, ಕೇಂದ್ರ ಸರ್ಕಾರದ ತಾರತಮ್ಯವನ್ನು ಅಂಕಣದಲ್ಲಿ ಪ್ರಶ್ನಿಸಲಾಗಿದೆ.ಇಳುವರಿ ಕಮ್ಮಿಯಿರುವ ಹಾಗೂ ಸರಿಯಾಗಿ ಬಲಿಯದ ಕಬ್ಬನ್ನು ನುರಿಸಲು ಕಾರ್ಖಾನೆಗಳು ತರಾತುರಿ ಮಾಡುತ್ತಿದ್ದು, ಇದು ರೈತರಿಗೆ ನಷ್ಟ ಉಂಟುಮಾಡುತ್ತಿದೆ. ಸಕ್ಕರೆ ಕಾರ್ಖಾನೆಗಳು ರಾಜಕಾರಣಿಗಳ ಕಪಿಮುಷ್ಟಿಯಲ್ಲಿದ್ದು, ರೈತರ ಬೆಳೆ ಹಾಗೂ ದರದಲ್ಲಿ ಮೋಸವಾಗುತ್ತಿದೆ. ಒಟ್ಟಿನಲ್ಲಿ, ಇದು ಸಕ್ಕರೆ ಕಾರ್ಖಾನೆಗಳು ಮತ್ತು ರಾಜಕಾರಣಿಗಳ ಹಿಡಿತದಲ್ಲಿ ಸಿಲುಕಿ ವಂಚನೆಗೆ ಒಳಗಾಗುತ್ತಿರುವ ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕುಗಳಿಗಾಗಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯ ಧ್ವನಿಯಾಗಿದೆ. ಕೇಂದ್ರ ಸರ್ಕಾರ ಮತ್ತು ಸ್ಥಳೀಯ ನಾಯಕರು ತಾರತಮ್ಯವಿಲ್ಲದೆ ಸ್ವಾಮಿನಾಥನ್ ವರದಿ ಹಾಗೂ ಸೂಕ್ತ ಬೆಂಬಲ ಬೆಲೆಯನ್ನು ಜಾರಿಗೆ ತಂದು ರೈತರ ಬವಣೆಯನ್ನು ಬಗೆಹರಿಸಬೇಕು ಎನ್ನುವುದೇ ಈ ಅಂಕಣದ ಆಶಯವಾಗಿದೆ.

ಅಂಕಣ  ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ನಾಗಭೂಷಣ ಹೆಗಡೆ ನಿಧನ

ಬಡುಗುತಿಟ್ಟಿನ ಯಕ್ಷ ಕಲಾವಿದ ಶ್ರೀಪಾದ ಭಟ್ ನಿಧನ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ವ್ಯಾಪಾರಿಗಳಿಗೆ ಹಬ್ಬದ ಶಾಕ್: ವಾಣಿಜ್ಯ LPG ಬೆಲೆಯಲ್ಲಿ ಏರಿಕೆ appeared first on Samyukta Karnataka.

Samyukta Karnataka News Live: ಅಮೆರಿಕದ ಸರ್ಕಾರಿ ದಾಖಲೆಗಳಲ್ಲಿ AIಗೆ ಹೊಸ ಹೆಸರು
‘ನೀವು ದೈತ್ಯ’ ಎಂದ ಟ್ರಂಪ್ – ಸುಂದರ್ ಪಿಚೈ ನಗುತ್ತಲೇ ಕೊಟ್ಟ ಪ್ರತಿಕ್ರಿಯೆ ಭಾರೀ ವೈರಲ್ : ಶ್ವೇತಭವನದ AI ಸಭೆಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಡೊನಾಲ್ಡ್ ಟ್ರಂಪ್ ‘Monster’ ಎಂದು ಕರೆದರು. ಪಿಚೈ ನಗುತ್ತಲೇ ನೀಡಿದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

UPSCಗೆ 100 ವರ್ಷ – ಅಕ್ಟೋಬರ್ 1ರಂದು ಶತಮಾನೋತ್ಸವ ಸಮಾರಂಭ  : ಭಾರತದ ನಾಗರಿಕ ಸೇವಾ ನೇಮಕಾತಿ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕೇಂದ್ರ ಲೋಕಸೇವಾ ಆಯೋಗ (UPSC) ಅಕ್ಟೋಬರ್ 1, 2026ರಂದು ತನ್ನ ಶತಮಾನೋತ್ಸವವನ್ನು ಆಚರಿಸಲಿದೆ. 1926ರ ಅಕ್ಟೋಬರ್ 1ರಂದು ಭಾರತದ ಮೊದಲ ಲೋಕಸೇವಾ ಆಯೋಗ ಸ್ಥಾಪನೆಯಾದ ದಿನದಿಂದ ಆರಂಭವಾದ ಸಂಸ್ಥೆಯ ಪಯಣ ಇದೀಗ 100 ವರ್ಷಗಳನ್ನು ಪೂರೈಸುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೊಮ್ಮಗಳ ಮೇಲೆ ದೌರ್ಜನ್ಯ ಯತ್ನ ಆರೋಪ, ಅಜ್ಜನ ವಿರುದ್ಧ FIR : ಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಆಘಾತಕಾರಿ ಘಟನೆ ಸುರಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈಜಾಕ್ ಭೀತಿ ಮೂಡಿಸಿದ್ದ ವಿಮಾನ : ದುಬೈಯಿಂದ ಟೆಲ್ ಅವಿವ್‌ಗೆ ತೆರಳುತ್ತಿದ್ದ ಫ್ಲೈದುಬೈ ಪ್ರಯಾಣಿಕ ವಿಮಾನದಲ್ಲಿ ಬುಧವಾರ ತುರ್ತು ಪರಿಸ್ಥಿತಿಯ ಸಂಕೇತಗಳು ರವಾನೆಯಾಗಿದ್ದು, ಕೆಲಕಾಲ ಅಪಹರಣದ ಆತಂಕ ಸೃಷ್ಟಿಸಿತು. ಆದರೆ ನಂತರದ ಬೆಳವಣಿಗೆಯಲ್ಲಿ ವಿಮಾನವನ್ನು ಅಪಹರಿಸಲಾಗಿಲ್ಲ ಎಂಬುದು ಸ್ಪಷ್ಟವಾಗಿದ್ದು, ಪೈಲಟ್‌ಗಳ ನಡುವಿನ ಘರ್ಷಣೆಯೇ ಘಟನೆಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಮೆರಿಕದ 29,000 ಸರ್ಕಾರಿ ವೆಬ್‌ಸೈಟ್‌ಗಳಿಗೆ ಒಂದೇ ವಿಳಾಸ :  ಅಮೆರಿಕದ ಫೆಡರಲ್ ಸರ್ಕಾರದ ವಿವಿಧ ವೆಬ್‌ಸೈಟ್‌ಗಳು ಮತ್ತು ಆನ್‌ಲೈನ್ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಗೆ ತರುವ ಉದ್ದೇಶದ ಹೊಸ America.gov ವೆಬ್‌ಸೈಟ್ ಸೆಪ್ಟೆಂಬರ್ 29ರಂದು ಲೈವ್ ಆಗಿದೆ. ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯನ್ನು ಬಳಸಿಕೊಂಡು ನಾಗರಿಕರು ಸರ್ಕಾರಿ ಸೇವೆಗಳು ಹಾಗೂ ಮಾಹಿತಿಯನ್ನು ಸುಲಭವಾಗಿ ಹುಡುಕಲು ಈ ವೇದಿಕೆಯನ್ನು ರೂಪಿಸಲಾಗಿದೆ. ಅಮೆರಿಕದ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ಸಂಬಂಧಿಸಿದ ಸುಮಾರು 29,000 ವೆಬ್‌ಸೈಟ್‌ಗಳಲ್ಲಿರುವ ಮಾಹಿತಿಯನ್ನು ಒಂದೇ ಪ್ರವೇಶದ್ವಾರದಿಂದ ಪಡೆಯುವ ವ್ಯವಸ್ಥೆಯನ್ನು America.gov ಒದಗಿಸುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಭರ್ಜರಿ ಕಾರ್ಯಾಚರಣೆ : ಅರಬ್ಬಿ ಸಮುದ್ರದಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಲಕ್ಷದ್ವೀಪದ ಪಶ್ಚಿಮ ಭಾಗದಲ್ಲಿ ಸೆಪ್ಟೆಂಬರ್ 25ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 526 ಕೆಜಿ ಹೆರಾಯಿನ್ ಮತ್ತು ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ₹3,000 ಕೋಟಿಗೂ ಅಧಿಕ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಆಧರಿಸಿ ಭಾರತೀಯ ಕರಾವಳಿ ಕಾವಲು ಪಡೆ ಸಮುದ್ರ ಮತ್ತು ವಾಯು ಮಾರ್ಗದಲ್ಲಿ ಕಣ್ಗಾವಲು ನಡೆಸಿ ಅನುಮಾನಾಸ್ಪದ ಹಡಗನ್ನು ಪತ್ತೆಹಚ್ಚಿತ್ತು. ಬಳಿಕ ಹಡಗನ್ನು ಹಿಂಬಾಲಿಸಿ ತಡೆದು ಪರಿಶೀಲನೆ ನಡೆಸಿದಾಗ ಭಾರೀ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿವೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘AI’ಗೆ ಅಮೆರಿಕದ ಸರ್ಕಾರಿ ದಾಖಲೆಗಳಲ್ಲಿ ಕೃತಕ ಬುದ್ಧಿಮತ್ತೆಗೆ ಹೊಸ ಹೆಸರು : ಕೃತಕ ಬುದ್ಧಿಮತ್ತೆ (Artificial Intelligence) ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ‘Artificial Intelligence’ ಮತ್ತು ‘AI’ ಎಂಬ ಪದಗಳ ಬದಲಿಗೆ ‘Super Intelligence’ ಮತ್ತು ‘SI’ ಎಂಬ ಪದಗಳನ್ನು ಫೆಡರಲ್ ಸರ್ಕಾರದ ಅಧಿಕೃತ ಬಳಕೆಯಲ್ಲಿ ಬಳಸುವಂತೆ ಟ್ರಂಪ್ ಆದೇಶಿಸಿದ್ದಾರೆ. ಈ ನಿರ್ಧಾರವನ್ನು ತಂತ್ರಜ್ಞಾನದ ವೇಗದ ಬೆಳವಣಿಗೆ ಮತ್ತು ಅದರ ಪರಿವರ್ತನಕಾರಿ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಪದಬಳಕೆಯ ಬದಲಾವಣೆ ಎಂದು ಆಡಳಿತ ವಿವರಿಸಿದೆ. ಟ್ರಂಪ್ ಆಡಳಿತದ ಪ್ರಕಾರ, ಸರ್ಕಾರ ಬಳಸುವ ಪರಿಭಾಷೆಯು ಈ ತಂತ್ರಜ್ಞಾನಗಳ ಸಾಮರ್ಥ್ಯ ಮತ್ತು ಅಮೆರಿಕದ ಜನರಿಗೆ ಅವು ಸೃಷ್ಟಿಸಬಹುದಾದ ಅವಕಾಶಗಳನ್ನು ಪ್ರತಿಬಿಂಬಿಸಬೇಕು. ಇದೇ ಕಾರಣಕ್ಕೆ ‘Super Intelligence’ ಎಂಬ ಪದವು ಪ್ರಸ್ತುತ AI ತಂತ್ರಜ್ಞಾನಗಳ ಭರವಸೆ, ಸಾಮರ್ಥ್ಯ ಹಾಗೂ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಸ್ವರೂಪವನ್ನು ಹೆಚ್ಚು ಸೂಕ್ತವಾಗಿ ವಿವರಿಸುತ್ತದೆ ಎಂಬ ನಿಲುವನ್ನು ಆಡಳಿತ ಮುಂದಿಟ್ಟಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ನಾಗಭೂಷಣ ಹೆಗಡೆ ನಿಧನ

ಬಡುಗುತಿಟ್ಟಿನ ಯಕ್ಷ ಕಲಾವಿದ ಶ್ರೀಪಾದ ಭಟ್ ನಿಧನ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಅಮೆರಿಕದ ಸರ್ಕಾರಿ ದಾಖಲೆಗಳಲ್ಲಿ AIಗೆ ಹೊಸ ಹೆಸರು appeared first on Samyukta Karnataka.

Samyukta Karnataka News Live: ಅಕ್ಟೋಬರ್‌ನಿಂದ WhatsApp Business ಬಳಕೆದಾರರಿಗೆ ಹೊಸ ಶುಲ್ಕ?
‘ಮುಧೋಳ್’ನಿಂದ ಮತ್ತೊಂದು ಮೆಲೋಡಿ ಟ್ರೀಟ್ –  ‘ಜುಮಂತು’ ಹಾಡು ಬಿಡುಗಡೆ :ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ ‘ಮುಧೋಳ್’ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ‘ಜುಮಂತು’ (Jumanthu) ಹೆಸರಿನ ಈ ಮೆಲೋಡಿ ಹಾಡು ಇದೀಗ ಸಂಗೀತ ಪ್ರಿಯರ ಗಮನ ಸೆಳೆಯುತ್ತಿದ್ದು, ಚಿತ್ರತಂಡ ಹಾಡಿನ ಮೂಲಕ ಹೊಸ ನಿರೀಕ್ಷೆ ಮೂಡಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರವಾಡದ ಕಲಾವಿದನ ವಿಶ್ವ ದಾಖಲೆ – ಗಿನ್ನೆಸ್ ಪೇಜ್‌ನಲ್ಲೇ ಕಂಗೊಳಿಸಿದ ಕನ್ನಡಿಗನ ಕಲೆ! : ಬಣ್ಣ, ಬ್ರಷ್‌ಗಳ ಬದಲು ಭಾರತೀಯ ಅಡುಗೆಮನೆಯಲ್ಲೇ ಸಾಮಾನ್ಯವಾಗಿ ಬಳಸುವ ಅರಿಶಿನ ಮತ್ತು ಮೆಣಸಿನ ಪುಡಿಗಳನ್ನು ಕಲೆಯ ಮಾಧ್ಯಮವನ್ನಾಗಿ ಮಾಡಿಕೊಂಡು ಧಾರವಾಡದ ಕಲಾವಿದ ಅಮರ್ ರಾಜು ಕಾಳೆ ವಿಶಿಷ್ಟ ಸಾಧನೆ ಮಾಡಿದ್ದಾರೆ. ಮಸಾಲೆಗಳನ್ನು ಬಳಸಿ ರಚಿಸಿದ ಬೃಹತ್ ಚಿತ್ರಕ್ಕಾಗಿ ಅವರು Guinness World Recordsನಲ್ಲಿ ಸ್ಥಾನ ಪಡೆದಿದ್ದಾರೆ. ಅವರ ಈ ಕಲೆಯ ದೃಶ್ಯ ಇಂದು ಗಿನ್ನೆಸ್ ಪೇಜ್‌ನಲ್ಲೇ ಕಂಗೊಳಿಸಿದ್ದು ಕನ್ನಡಿಗನ ಕಲೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ : ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಒಟ್ಟು 11 ರಾಜ್ಯಸಭಾ ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಉತ್ತರ ಪ್ರದೇಶದ 10 ಹಾಗೂ ಉತ್ತರಾಖಂಡದ ಒಂದು ಸ್ಥಾನ ಸೇರಿದೆ. ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಂತೆ ಅಕ್ಟೋಬರ್ 16ರಂದು ಮತದಾನ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಫೋನ್ ನೆಪದಲ್ಲಿ ಮುಖ-ಧ್ವನಿ ಡೇಟಾ ಕದಿಯುವ ಸೈಬರ್ ವಂಚನೆ? : ಮಾಲ್‌ಗಳು ಸೇರಿದಂತೆ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತರು ಫೋನ್‌ ಸಹಾಯ ಕೇಳುವ ನೆಪದಲ್ಲಿ ಜನರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಬಹುದು ಎಂಬ ಎಚ್ಚರಿಕೆಯ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವಂಚಕರು ಮೊಬೈಲ್‌ ಫೋನ್‌ ಬಳಸಿ ಕರೆ ಮಾಡುವಂತೆ ನಟಿಸುತ್ತಾ, ಇದೇ ಸಂದರ್ಭದಲ್ಲಿ ವ್ಯಕ್ತಿಯ ಮುಖ ಹಾಗೂ ಧ್ವನಿ ಡೇಟಾವನ್ನು ಸೆರೆಹಿಡಿಯಲು ಪ್ರಯತ್ನಿಸಬಹುದು ಎಂಬುದು ವಿಡಿಯೊದಲ್ಲಿನ ಪ್ರಮುಖ ಎಚ್ಚರಿಕೆಯಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ : ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು, ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಹುಬ್ಬಳ್ಳಿಯಲ್ಲಿ ಬೃಹತ್ ರೈತರ ಪ್ರತಿಭಟನೆ ನಡೆಯುತ್ತಿದೆ. ರೈತರು ಈಗಾಗಲೇ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಬಳಿಕ ನೆಹರು ಮೈದಾನದತ್ತ ತೆರಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಜೆ ಬಳಕೆಗೆ ಅನುಮತಿ ನಿರಾಕರಣೆ – ಗಣೇಶ ಮೂರ್ತಿ ವಾಪಸ್ ತಂದು ಮರುಪ್ರತಿಷ್ಠಾಪನೆ : ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವಕರು, ಮೆರವಣಿಗೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಿ ಗಣೇಶ ಮೂರ್ತಿಯನ್ನು ವಾಪಸ್ ತಂದು ಮರುಪ್ರತಿಷ್ಠಾಪಿಸಿದ ಘಟನೆ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

IAS ರಾಜೀನಾಮೆಯ ಹಿಂದಿನ ಪ್ರಶ್ನೆಗಳಿಗೆ Video ಮೂಲಕ ಉತ್ತರ ನೀಡಿದ ದಿವ್ಯಾ ಮಿತ್ತಲ್ : ಭಾರತೀಯ ಆಡಳಿತ ಸೇವೆಗೆ (IAS) ರಾಜೀನಾಮೆ ನೀಡಿ ಕೆಲ ದಿನಗಳಿಂದ ತಮ್ಮ ಮುಂದಿನ ನಡೆ ಕುರಿತು ಕುತೂಹಲ ಮೂಡಿಸಿದ್ದ ಉತ್ತರ ಪ್ರದೇಶ ಕೇಡರ್‌ನ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್, ಇದೀಗ ತಮ್ಮ ರಾಜಕೀಯ ಪ್ರವೇಶವನ್ನು ಘೋಷಿಸಿದ್ದಾರೆ. ಸೆಪ್ಟೆಂಬರ್ 29ರಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಮ್ಮ ನಿರ್ಧಾರದ ಕುರಿತು ಅವರು ವಿವರಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಥಿಯೇಟರ್‌ನಲ್ಲಿ 50 ದಿನ ಪೂರೈಸಿದ ‘ಅಯೋಗ್ಯ 2’ : ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಅಭಿನಯದ ‘ಅಯೋಗ್ಯ 2’ ಚಿತ್ರವು ಚಿತ್ರಮಂದಿರಗಳಲ್ಲಿ 50 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದ್ದು, ಈ ಸಂಭ್ರಮವನ್ನು ಚಿತ್ರತಂಡ ಪ್ರೇಕ್ಷಕರು ಹಾಗೂ ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ. ಭರ್ಜರಿ ಓಪನಿಂಗ್ ಪಡೆದುಕೊಂಡು ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿದ್ದ ‘ಅಯೋಗ್ಯ 2’, ಬಿಡುಗಡೆಯ ಬಳಿಕ ಕರ್ನಾಟಕದ ಸುಮಾರು 25ಕ್ಕೂ ಅಧಿಕ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನ ಕಂಡಿದೆ. ಪ್ರಸ್ತುತ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವುದು ಸವಾಲಾಗಿರುವ ಸಂದರ್ಭದಲ್ಲಿ, ಸಿನಿಮಾ 50 ದಿನಗಳ ಪ್ರದರ್ಶನ ಪೂರ್ಣಗೊಳಿಸಿರುವುದು ಚಿತ್ರತಂಡದ ಸಂಭ್ರಮಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಟೋಬರ್‌ನಿಂದ WhatsApp Business API ಬಳಸುವವರಿಗೆ ಹೊಸ ಹೊರೆ ? : WhatsApp Business Platform/API ಬಳಸುವ ವ್ಯವಹಾರಗಳಿಗೆ ಅಕ್ಟೋಬರ್‌ನಿಂದ ಪ್ರತಿ ಮೆಸೇಜ್‌ಗೆ ಶುಲ್ಕ ವಿಧಿಸುವ ಕುರಿತು ಹೊಸ ದರ ವ್ಯವಸ್ಥೆ ಜಾರಿಗೆ ಬರಲಿದೆ ಎಂಬ ಮಾಹಿತಿ ಇದೀಗ ಗಮನ ಸೆಳೆದಿದೆ. ಈ ಬದಲಾವಣೆ ಭಾರತೀಯ ವ್ಯವಹಾರಗಳಿಗೂ ಅನ್ವಯಿಸುವ ಸಾಧ್ಯತೆ ಇದೆ, ಆದರೆ ₹0.14ರ ದರವು ಯಾವ ರೀತಿಯ ಮೆಸೇಜ್‌ಗೆ ಮತ್ತು ಯಾವ ವರ್ಗದ business messageಗೆ ಅನ್ವಯಿಸುತ್ತದೆ ಎಂಬುದನ್ನು ಪ್ರಸ್ತುತ Metaಯ ಅಧಿಕೃತ pricing category ಆಧರಿಸಿ ನೋಡಬೇಕಾಗಿದೆ. (ಮಾಹಿತಿ ಅಪ್​ಡೇಟ್ ಆಗಲಿದೆ)

ರೈತರಿಗೆ ದೆಹಲಿಗೆ ಬನ್ನಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಕ್ತ ಆಹ್ವಾನ : ಕಬ್ಬಿನ ನ್ಯಾಯಯುತ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಇಂದು ಪ್ರತಿಭಟನೆಗೆ ಮುಂದಾಗಿರುವ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಗೆ ಬಂದು ಮುಕ್ತ ಚರ್ಚೆ ನಡೆಸುವಂತೆ ಆಹ್ವಾನ ನೀಡಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಸಚಿವರು, ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ, ನೇರವಾಗಿ ರಾಷ್ಟ್ರ ರಾಜಧಾನಿಗೆ ಬಂದರೆ ಅಧಿಕಾರಿಗಳ ಜೊತೆ ಕೂರಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ನಾಗಭೂಷಣ ಹೆಗಡೆ ನಿಧನ

ಬಡುಗುತಿಟ್ಟಿನ ಯಕ್ಷ ಕಲಾವಿದ ಶ್ರೀಪಾದ ಭಟ್ ನಿಧನ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಅಕ್ಟೋಬರ್‌ನಿಂದ WhatsApp Business ಬಳಕೆದಾರರಿಗೆ ಹೊಸ ಶುಲ್ಕ? appeared first on Samyukta Karnataka.

Samyukta Karnataka News Live: UPI ಶುಲ್ಕ ವಿವಾದ – ಸುಪ್ರೀಂ ಕೋರ್ಟ್ ನೋಟಿಸ್
WPL 2027 – ಐದು ತಂಡಗಳ ರಿಟೆನ್ಶನ್ ಪಟ್ಟಿ ಪ್ರಕಟ : ಮಹಿಳಾ ಪ್ರೀಮಿಯರ್ ಲೀಗ್‌ (WPL) 2027ರ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಸೆಪ್ಟೆಂಬರ್ 28ರಂದು ಐದು ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ (Retained) ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. 2027ರ WPL ಜನವರಿ 14ರಿಂದ ಫೆಬ್ರವರಿ 7ರವರೆಗೆ ನಡೆಯಲಿದ್ದು, ಆಟಗಾರರ ಹರಾಜು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ವಿಸ್ತರಣೆ : 2026-27ರ ಮೌಲ್ಯಮಾಪನ ವರ್ಷಕ್ಕೆ (AY 2026-27) ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಗಡುವನ್ನು ಕೇಂದ್ರ ನೇರ ತೆರಿಗೆಗಳ ಮಂಡಳಿ (CBDT) ವಿಸ್ತರಿಸಿದೆ. ಆದಾಯ ತೆರಿಗೆ ಕಾಯ್ದೆ, 1961ರ ಸೆಕ್ಷನ್ 139(1)ರ ವಿವರಣೆ 2ರ ಕೋಷ್ಟಕದ ವಿಭಾಗ 2ರಲ್ಲಿ ಉಲ್ಲೇಖಿಸಲಾದ ಹಾಗೂ ತೆರಿಗೆ ಆಡಿಟ್‌ಗೆ ಒಳಪಡುವ ನಿರ್ದಿಷ್ಟ ವರ್ಗದ ತೆರಿಗೆದಾರರಿಗೆ ಈ ಸೌಲಭ್ಯ ಅನ್ವಯಿಸುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿಗಾಗಿ ರಕ್ಷಣಾ ಸಚಿವರಿಗೆ ಡಿಕೆಶಿ ಮನವಿ : ಬೆಂಗಳೂರಿನ ನಗರಾಭಿವೃದ್ಧಿ, ಸಂಚಾರ ವ್ಯವಸ್ಥೆ ಹಾಗೂ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ರಕ್ಷಣಾ ಭೂಮಿಯ ಬಳಕೆ ಮತ್ತು ವಿವಿಧ ಅನುಮತಿಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರಿನ ಹಲವು ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಸಹಕಾರವನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ನಗರದ ಸಂಪರ್ಕ ವ್ಯವಸ್ಥೆ, ಸಾರ್ವಜನಿಕ ಹಸಿರು ಪ್ರದೇಶ, ರಸ್ತೆ ಅಭಿವೃದ್ಧಿ ಹಾಗೂ ಭವಿಷ್ಯದ ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಒಟ್ಟು ಏಳು ಪ್ರಮುಖ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ದಸರಾಕ್ಕೆ ಹಲವು ಕಾರ್ಯಕ್ರಮಗಳ ಪೋಸ್ಟರ್ ಅನಾವರಣ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ನಾಡಹಬ್ಬವನ್ನು ಮತ್ತಷ್ಟು ವೈವಿಧ್ಯಮಯಗೊಳಿಸುವ ಉದ್ದೇಶದಿಂದ ಆಯೋಜಿಸಿರುವ ವಿವಿಧ ವಿಶೇಷ ಕಾರ್ಯಕ್ರಮಗಳ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಅರಮನೆ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ದಸರಾ, ರೈತ ದಸರಾ, ಕಂಬಳ, ಯೋಗ ದಸರಾ, ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ, ಶ್ವಾನ ಹಾಗೂ ಮುದ್ದು ಪ್ರಾಣಿಗಳ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳ ಪೋಸ್ಟರ್‌ಗಳನ್ನು ಅನಾವರಣಗೊಳಿಸಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

UPI ಶುಲ್ಕ ವಿವಾದ – RBI, NPCIಗೆ ಸುಪ್ರೀಂ ಕೋರ್ಟ್ ನೋಟಿಸ್ : ₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI Person-to-Merchant (P2M) ವಹಿವಾಟುಗಳ ಮೇಲೆ ಶೇ.0.4ರಷ್ಟು Merchant Discount Rate (MDR) ವಿಧಿಸುವ ಹೊಸ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಾಗೂ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI)ಗೆ ನೋಟಿಸ್ ನೀಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಹದಾಯಿ ಹೋರಾಟದ ವೇಳೆ ರೈಲು ತಡೆ ಪ್ರಕರಣ – ಕೋಡಿಹಳ್ಳಿ ಚಂದ್ರಶೇಖರ್ ಅರೆಸ್ಟ್ : 3 ವರ್ಷಗಳ ಹಿಂದಿನ ರೈಲು ತಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಹೊರಡಿಸಿದ್ದ ವಾರಂಟ್ ಆಧಾರದ ಮೇಲೆ ಈ ಬಂಧನ ನಡೆದಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಶಿರಸಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೋಡಿಹಳ್ಳಿ ಚಂದ್ರಶೇಖರ್ ಆಗಮಿಸಿದ್ದರು. ಈ ವೇಳೆ ಶಿರಸಿ ಪೊಲೀಸರ ಸಹಕಾರ ಪಡೆದು ಹುಬ್ಬಳ್ಳಿ ರೈಲ್ವೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಹುಬ್ಬಳ್ಳಿಗೆ ಕರೆದೊಯ್ಯಲಾಗಿದ್ದು, ಸೆಪ್ಟೆಂಬರ್ 28ರಂದು ಹುಬ್ಬಳ್ಳಿ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳದ ಗವಿಮಠಕ್ಕೆ ಸಚಿವ ತಂಗಡಗಿ ಭೇಟಿ –  ದಸರಾ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನ: ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಗೆ ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕರ್ನಾಟಕ ಸರ್ಕಾರದ ವತಿಯಿಂದ ಗೌರವಪೂರ್ವಕವಾಗಿ ಆಹ್ವಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಭೇಟಿಯಾಗಿ ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಶ್ರೀಗಳ ಆಶೀರ್ವಾದ ಹಾಗೂ ಸಾನ್ನಿಧ್ಯವನ್ನು ಕೋರಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೂ–ಮುಸ್ಲಿಂ ಸೌಹಾರ್ದತೆಗೆ ಮಾದರಿಯಾದ ಹೂವಿನಹಡಗಲಿ : ಗಣಪತಿ ಮೆರವಣಿಗೆ ವೇಳೆ ಉಂಟಾಗಿದ್ದ ಗೊಂದಲದ ಬಳಿಕ ಹೂವಿನಹಡಗಲಿ ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆ ಮೂಡಿದ್ದು,  ಹಿಂದೂ–ಮುಸ್ಲಿಂ ಬಾಂಧವರು ಪರಸ್ಪರ ಸಹಕಾರದ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೂವಿನಹಡಲಿ ಪಟ್ಟಣದ ಕೊರವರ ಓಣಿಯಲ್ಲಿ ಮರುಪ್ರತಿಷ್ಠಾಪನೆಗೊಂಡ ಗಣಪತಿ ಮೂರ್ತಿಗೆ ಇಸ್ಲಾಂಪೇಟೆಯ ಮುಸ್ಲಿಂ ಬಾಂಧವರು ಪೂಜೆ ಸಲ್ಲಿಸಿದ್ದು ವಿಶೇಷ ಗಮನ ಸೆಳೆಯಿತು. ಪರಸ್ಪರ ಗೌರವ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ ಈ ಬೆಳವಣಿಗೆ ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

AI ಜಗತ್ತಿನಲ್ಲಿ ಸಚಿನ್ ಇನ್ನಿಂಗ್ಸ್‌ – OpenAI ಜೊತೆ ಕೈಜೋಡಿಸಿದ ದಿಗ್ಗಜ! : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು OpenAI ಜೊತೆಗಿನ ತಮ್ಮ ಹೊಸ ಪಾಲುದಾರಿಕೆಯನ್ನು ಘೋಷಿಸಿದ್ದು, ChatGPT ಮೂಲಕ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಹಾಗೂ ಹೊಸ ಸಾಧ್ಯತೆಗಳನ್ನು ಅನ್ವೇಷಿಸುವ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ChatGPT ಬಳಕೆಯ ಹೊಸ ಸಾಧ್ಯತೆಗಳು, ತಮ್ಮ ಅನುಭವಗಳು ಮತ್ತು ಮುಂದಿನ ಯೋಜನೆಗಳ ಕುರಿತು ಸಚಿನ್ ಹಂಚಿಕೊಂಡ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

IIT ಧಾರವಾಡದಲ್ಲಿ ಸಂಸ್ಕೃತ ಕಲಿಯಲು ಅವಕಾಶ : ಸಂಸ್ಕೃತ ಭಾಷೆ ಹಾಗೂ ಸಾಹಿತ್ಯವನ್ನು ಕಲಿಯಲು ಆಸಕ್ತರಿಗೆ ಮಹತ್ವದ ಅವಕಾಶ ದೊರೆತಿದ್ದು, ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಐಐಟಿ ಧಾರವಾಡದ ಜಂಟಿ ಸಹಯೋಗದಲ್ಲಿ ನಡೆಸಲಾಗುವ ಸಂಸ್ಕೃತ ಪ್ರಮಾಣಪತ್ರ ಮತ್ತು ಡಿಪ್ಲೊಮಾ ಕೋರ್ಸ್‌ಗಳಿಗೆ 2026–27ನೇ ಶೈಕ್ಷಣಿಕ ಅವಧಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಫ್ಘಾನಿಸ್ತಾನ ವಿರುದ್ಧ ಪಂದ್ಯವಿಲ್ಲದೆ ಭಾರತಕ್ಕೆ ಸೆಮಿಫೈನಲ್ ಟಿಕೆಟ್ : ಏಷ್ಯನ್ ಗೇಮ್ಸ್‌ 2026ರ ಪುರುಷರ ಕ್ರಿಕೆಟ್‌ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಭಾರತ ಯಾವುದೇ ಎಸೆತ ಆಡದೆ ಸೆಮಿಫೈನಲ್‌ಗೆ ಪ್ರವೇಶಿಸಿದೆ. ನಿಸ್ಸಿನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಿರಂತರ ಮಳೆ ಹಾಗೂ ಮೈದಾನ ತೇವವಾಗಿದ್ದ ಕಾರಣ ಪಂದ್ಯ ಆರಂಭಿಸಲು ಸಾಧ್ಯವಾಗಲಿಲ್ಲ. ಟಾಸ್ ಕೂಡ ನಡೆಯದೆ ಭಾರತ ನಿಯಮಾನುಸಾರ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಕಲಿ ಔಷಧ ಪ್ರಕರಣದಲ್ಲಿ ಆರೋಪಿ ಪ್ರಶಾಂತ್ ಬಂಧನ : ರಾಮನಗರದ ಬಿಡದಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಪತ್ತೆಯಾಗಿರುವ ನಕಲಿ ಔಷಧ ಜಾಲದ ತನಿಖೆ ಮುಂದುವರಿದಿರುವ ನಡುವೆಯೇ, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನೆಂದು ಗುರುತಿಸಲಾಗಿರುವ ಆರ್. ಪ್ರಶಾಂತ್‌ನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಬಂಧಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ ನಡೆಯಬೇಕಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ : ಸೆಪ್ಟೆಂಬರ್‌ 28ರಿಂದ 30ರವರೆಗೆ ಮೂರು ದಿನಗಳ ಕಾಲ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರವನ್ನು ಮುಂದೂಡಲಾಗಿದೆ. ಹೀಗಾಗಿ ಇಂದಿನಿಂದ ಬ್ಯಾಂಕ್‌ ಶಾಖೆಗಳ ಸಾಮಾನ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ತಿಳಿಸಲಾಗಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ (UFBU) ನೇತೃತ್ವದಲ್ಲಿ ಸೆಪ್ಟೆಂಬರ್‌ 28ರಿಂದ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಐದು ದಿನಗಳ ಕೆಲಸದ ವಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್‌ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದವು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ನಾಗಭೂಷಣ ಹೆಗಡೆ ನಿಧನ

ಬಡುಗುತಿಟ್ಟಿನ ಯಕ್ಷ ಕಲಾವಿದ ಶ್ರೀಪಾದ ಭಟ್ ನಿಧನ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: UPI ಶುಲ್ಕ ವಿವಾದ – ಸುಪ್ರೀಂ ಕೋರ್ಟ್ ನೋಟಿಸ್ appeared first on Samyukta Karnataka.

Samyukta Karnataka News Live: ಆರ್ಥಿಕ ಸುಧಾರಣೆಯ ಹರಿಕಾರನಿಗೆ ದೇಶದಾದ್ಯಂತ ಗೌರವ
ಟ್ರಾಫಿಕ್‌ ಕಿರಿಕಿರಿ ಹೃದಯಕ್ಕೆ ಅಪಾಯವೇ? : ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನಿರಂತರ ಟ್ರಾಫಿಕ್‌ ಒತ್ತಡ, ಸಂಚಾರದ ಕಿರಿಕಿರಿ ಮತ್ತು ಹೃದಯದ ಆರೋಗ್ಯದ ನಡುವಿನ ಸಂಬಂಧದ ಕುರಿತು ತಜ್ಞರ ಅಭಿಪ್ರಾಯ ಹಾಗೂ ನಿರಂತರ ಹಾರ್ನ್‌ ಹಾಗೂ ಸಂಚಾರದ ಒತ್ತಡ ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರಬಹುದು? ವೈದ್ಯರ ಸಲಹೆ ಮತ್ತು ಪ್ರಮುಖ ಕಾರಣಗಳ ಮಾಹಿತಿಗಾಗಿ  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

SIR ಕುರಿತು ECI ಮಹತ್ವದ ನಿರ್ಧಾರ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಇತ್ತೀಚೆಗೆ ವ್ಯಕ್ತವಾಗಿದ್ದ ಭಿನ್ನಾಭಿಪ್ರಾಯಗಳ ನಡುವೆ ಭಾರತೀಯ ಚುನಾವಣಾ ಆಯೋಗ (ECI) ಶನಿವಾರ ಮಹತ್ವದ ಸ್ಪಷ್ಟನೆ ನೀಡಿದೆ. ದೆಹಲಿಯ ನಿರ್ವಾಚನ ಸದನದಲ್ಲಿ ಸೆಪ್ಟೆಂಬರ್ 26ರಂದು ಮಧ್ಯಾಹ್ನ 3 ಗಂಟೆಗೆ ನಡೆದ ಪೂರ್ಣ ಆಯೋಗದ ಸಭೆಯ ಬಳಿಕ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ, SIRಗೆ ಸಂಬಂಧಿಸಿದ ಪ್ರಮುಖ ಆದೇಶಗಳು ಪೂರ್ಣ ಆಯೋಗದಿಂದ ಸರ್ವಾನುಮತದಿಂದ ಅನುಮೋದಿಸಲ್ಪಟ್ಟಿವೆ ಎಂದು ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಠದ ಅನುದಾನ ದುರುಪಯೋಗ ಆರೋಪ – ತನಿಖೆಗೆ ರಾಜ್ಯಪಾಲರ ಸೂಚನೆ : ಹರಿಹರ ತಾಲೂಕಿನ ಅನಗೋಡು ಸಮೀಪದ ಮಠವೊಂದಕ್ಕೆ ವಸತಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿದ್ದ ಸುಮಾರು ₹10 ಕೋಟಿ ಅನುದಾನದ ಬಳಕೆ ಕುರಿತು ಕೇಳಿಬಂದಿರುವ ದುರುಪಯೋಗದ ಆರೋಪ ಇದೀಗ ತನಿಖೆಯ ಹಂತಕ್ಕೆ ಬಂದಿದೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ವಾಸ್ತವಾಂಶಗಳೊಂದಿಗೆ ವರದಿ ಸಲ್ಲಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

34 ಲಕ್ಷ ಮಕ್ಕಳಿಗಾಗಿ ಬೃಹತ್ ಲಸಿಕಾ ಅಭಿಯಾನ : ದಡಾರ-ರುಬೆಲ್ಲಾ ಸೋಂಕಿನ ವಿರುದ್ಧ ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಬಾಂಗ್ಲಾದೇಶ ಸರ್ಕಾರವು ಶನಿವಾರದಿಂದ ರಾಷ್ಟ್ರವ್ಯಾಪಿ ವಿಶೇಷ “Intensified MR Catch-up Vaccination” ಅಭಿಯಾನ ಆರಂಭಿಸಿದೆ. 6 ತಿಂಗಳಿಂದ 5 ವರ್ಷದೊಳಗಿನ ಸುಮಾರು 34 ಲಕ್ಷ ಲಸಿಕೆ ಪಡೆಯದ ಅಥವಾ ಹಿಂದಿನ ಅಭಿಯಾನಗಳಲ್ಲಿ ತಪ್ಪಿಸಿಕೊಂಡ ಮಕ್ಕಳನ್ನು ಈ ಅಭಿಯಾನದ ವ್ಯಾಪ್ತಿಗೆ ತರಲು ಗುರಿ ಇಡಲಾಗಿದೆ. ಅಭಿಯಾನವು ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ – ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ : ಕಿನ್ನರ ಗ್ರಾಮಸ್ಥರಿಗೆ ಉಪ್ಪು ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿ ಎಂದು ಸಣ್ಣ ನೀರಾವರಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಅವರು ಶನಿವಾರ ಕಾರವಾರ ತಾಲೂಕು ಕಿನ್ನರ ಗ್ರಾಮ ಪಂಚಾಯತ್ ನಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ಕಿನ್ನರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿರುವ ಮತ್ತು ಬಾವಿ ಗಳಲ್ಲಿ ಉಪ್ಪು ನೀರು ಸೇರ್ಪಡೆಯಾಗುತ್ತಿರುವ ಕುರಿತ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಲ್ಲಿಸಿದ ಮನವಿಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯಿಂದ ಈ ಭಾಗದಲ್ಲಿ ಉಪ್ಪುನೀರಿನ ಸಮಸ್ಯೆ ತಡೆಗೆ ಖಾರ್ ಲ್ಯಾಂಡ್ ನಿರ್ಮಾಣ ಮಾಡುವ ಕುರಿತಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕುರಿತಂತೆ ಪರಿಶೀಲಿಸಿ ಆದಷ್ಟು ಶೀಘ್ರದಲ್ಲಿ ಈ ಸಮಸ್ಯಗೆ ಪರಿಹಾರ ಒದಗಿಸಲಾಗುವುದು ಎಂದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸೇನೆ ಸೇರುವ ಕನಸು ಹೊತ್ತ ಶಿವಪ್ಪನ ಬದುಕು ದುರಂತ ಅಂತ್ಯ : ದೇಶದ ಗಡಿಯಲ್ಲಿ ತ್ರಿವರ್ಣ ಧ್ವಜದಡಿ ಸೇವೆ ಸಲ್ಲಿಸಬೇಕು ಎಂಬ ಕನಸಿನೊಂದಿಗೆ ಭಾರತೀಯ ಸೇನೆ ಸೇರಿದ್ದ 24 ವರ್ಷದ ಯುವಕನ ಬದುಕು, ಸ್ವಗ್ರಾಮದತ್ತ ಮರಳುವ ಹಾದಿಯಲ್ಲೇ ರೈಲು ದುರಂತದಲ್ಲಿ ದಾರುಣ ಅಂತ್ಯ ಕಂಡಿದೆ. ಅಗ್ನಿವೀರ ತರಬೇತಿ ಪಡೆಯುತ್ತಿದ್ದ ಮಡಕೇರಿ ಗ್ರಾಮದ ಶಿವಪ್ಪ ಹನುಮಪ್ಪ ಮುದಗಲ್ ಅವರ ಪಾರ್ಥಿವ ಶರೀರಕ್ಕೆ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

100 ಹಾಸಿಗೆಗಳ ಆಸ್ಪತ್ರೆಯಾಗಲಿದೆ ದಾವಣಗೆರೆ ESI – MRI ಸೌಲಭ್ಯಕ್ಕೆ ಸಚಿವರ ಭರವಸೆ : ನಗರದ ESI ಆಸ್ಪತ್ರೆಗೆ ಭೇಟಿ ನೀಡಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಆಸ್ಪತ್ರೆಯ ಸ್ವಚ್ಛತೆ, ಆಡಳಿತ ವ್ಯವಸ್ಥೆ ಹಾಗೂ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಅತ್ಯವಶ್ಯಕವಾಗಿರುವ MRI ಸ್ಕ್ಯಾನಿಂಗ್ ಸೌಲಭ್ಯವನ್ನು ಮೊದಲ ಆದ್ಯತೆಯಲ್ಲಿ ಕಲ್ಪಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವ ಕೆ.ಎಸ್. ಬಸವಂತಪ್ಪ ಅವರು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಸಂಬಂಧಪಟ್ಟ ಆಯುಕ್ತರೊಂದಿಗೆ ಚರ್ಚಿಸಿ, ದಾವಣಗೆರೆ ESI ಆಸ್ಪತ್ರೆಗೆ MRI ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಯುದ್ಧ್ ಅಭ್ಯಾಸ್‌ನಲ್ಲಿ ಸ್ವದೇಶಿ ರಕ್ಷಣಾ ತಂತ್ರಜ್ಞಾನದ ಪ್ರದರ್ಶನ : ಭಾರತ ಮತ್ತು ಅಮೆರಿಕ ಸೇನೆಗಳ ಜಂಟಿ ಸಮರಾಭ್ಯಾಸ ಯುದ್ಧ್ ಅಭ್ಯಾಸ್‌-2026ರಲ್ಲಿ ಭಾರತದ ರಕ್ಷಣಾ ತಂತ್ರಜ್ಞಾನದ ಮತ್ತೊಂದು ಮಹತ್ವದ ಪ್ರದರ್ಶನ ನಡೆದಿದೆ. ರಾಜಸ್ಥಾನದ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ನಡೆದ ಜಂಟಿ ಫೈರಿಂಗ್ ಪ್ರದರ್ಶನದ ವೇಳೆ ಸ್ಕೈಸ್ಟ್ರೈಕರ್ ಲಾಯಿಟರಿಂಗ್ ಮ್ಯೂನಿಷನ್ ನಿಗದಿತ ಗುರಿಯನ್ನು ಪತ್ತೆಹಚ್ಚಿ ನಿಖರವಾಗಿ ಹೊಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಬಡ್ಡಿಯಲ್ಲಿ ಭಾರತದ ಸುವರ್ಣ ಸಂಭ್ರಮ – ಒಂದೇ ದಿನ ಎರಡು ಚಿನ್ನದ ಪದಕ : ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಕಬಡ್ಡಿಯಲ್ಲಿ ಒಂದೇ ದಿನ ಎರಡು ಚಿನ್ನದ ಪದಕಗಳನ್ನು ಗೆದ್ದು ಸುವರ್ಣ ಸಾಧನೆ ಮಾಡಿದೆ. ಶನಿವಾರ ನಡೆದ ಮಹಿಳಾ ಹಾಗೂ ಪುರುಷರ ಕಬಡ್ಡಿ ಫೈನಲ್‌ಗಳಲ್ಲಿ ಭಾರತ ಎರಡೂ ತಂಡಗಳು ಇರಾನ್‌ನ್ನು ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿವೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿಷೇಧಿತ ಪ್ಲಾಸ್ಟಿಕ್ ವಿರುದ್ಧ ಪಾಲಿಕೆ ದಾಳಿ : ನಿಷೇಧಿತ ಸಿಂಗಲ್‌ ಯೂಸ್‌ ಪ್ಲಾಸ್ಟಿಕ್‌ ಬಳಕೆ, ಮಾರಾಟ ಹಾಗೂ ದಾಸ್ತಾನಿಗೆ ಕಡಿವಾಣ ಹಾಕಲು ದಾವಣಗೆರೆ ಮಹಾನಗರಪಾಲಿಕೆ ಅಧಿಕಾರಿಗಳು ಶನಿವಾರ ನಗರದ ವಿವಿಧೆಡೆ ದಾಳಿ ನಡೆಸಿದ್ದು, ಸುಮಾರು 180 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ₹1.68 ಲಕ್ಷ ದಂಡ ವಿಧಿಸಿದ್ದಾರೆ. ಮಹಾನಗರಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರನ್ನೊಳಗೊಂಡ ತಂಡವು ನಗರದ ಶಾಮನೂರು ರಸ್ತೆ, ಬಿಐಇಟಿ ರಸ್ತೆ, ಎಂಸಿಸಿ ‘ಬಿ’ ಬ್ಲಾಕ್‌ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ವಿವಿಧ ಉದ್ದಿಮೆಗಳ ಮೇಲೆ ತಪಾಸಣೆ ನಡೆಸಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಥಳೀಯರೊಂದಿಗೆ ಕುಳಿತು ಮಂಡಕ್ಕಿ ಸವಿದ ಬಸವಂತಪ್ಪ : ದಾವಣಗೆರೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾರಿಗನೂರು ಕ್ರಾಸ್‌ನಲ್ಲಿ ಶನಿವಾರ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಜನರ ಸಮಸ್ಯೆಗಳನ್ನು ಆಲಿಸುವುದರ ಜತೆಗೆ ಸ್ಥಳೀಯ ಹೋಟೆಲ್‌ನಲ್ಲಿ ಮುಖಂಡರೊಂದಿಗೆ ಮಂಡಕ್ಕಿ, ಮೆಣಸಿನಕಾಯಿ ಸವಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ವದೇಶಿ ಮೈಕ್ರೋ-GPU ಅಭಿವೃದ್ಧಿಪಡಿಸಿದ ಐಐಟಿ ದೆಹಲಿ : ದೇಶದ ಗ್ರಾಫಿಕ್ಸ್ ಹಾಗೂ ಎಂಬೆಡೆಡ್ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಐಐಟಿ ದೆಹಲಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧಕರು ಕಾರ್ಯನಿರ್ವಹಿಸುವ ಮತ್ತು ಪ್ರದರ್ಶಿಸಬಹುದಾದ ಸ್ವದೇಶಿ ಮೈಕ್ರೋ-ಗ್ರಾಫಿಕ್ಸ್ ಪ್ರೊಸೆಸಿಂಗ್ ಯೂನಿಟ್ (ಮೈಕ್ರೋ-GPU) ಅನ್ನು ಅಭಿವೃದ್ಧಿಪಡಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದಂಗಡಿಯಲ್ಲಿ ಮಲಗಿದ ಕೋತಿಯ ವಿಡಿಯೋ ವೈರಲ್ : ಮದ್ಯದಂಗಡಿಯೊಂದಕ್ಕೆ ನುಗ್ಗಿದ ಕೋತಿಯೊಂದು ಕಪಾಟಿನಲ್ಲಿ ಅಲೆದಾಡಿ, ಬಳಿಕ ಅಲ್ಲೇ ಕೆಲಕಾಲ ಮಲಗಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. ಬ್ಲಾಕ್ ಚೌಕ್ ಪ್ರದೇಶದಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಈ ಘಟನೆಯ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿವಿಧ ರೀತಿಯ ಹಾಸ್ಯಮಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇರಾನ್ ವಿರುದ್ಧ ಭಾರತಕ್ಕೆ ಮಹಿಳಾ ಕಬಡ್ಡಿಯಲ್ಲಿ ಚಿನ್ನ : ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡ ಮತ್ತೊಮ್ಮೆ ಚಿನ್ನದ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದೆ. ಸೆಪ್ಟೆಂಬರ್ 26ರಂದು ಟೋಕೈ ಸಿಟಿಜನ್ಸ್ ಜಿಮ್ನಾಷಿಯಂನಲ್ಲಿ ನಡೆದ ಫೈನಲ್‌ನಲ್ಲಿ ಭಾರತ ಇರಾನ್ ತಂಡವನ್ನು 37–34 ಅಂಕಗಳಿಂದ ಮಣಿಸಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಗಣೇಶ ವಿಸರ್ಜನೆಯಲ್ಲಿ ಭಕ್ತರೊಂದಿಗೆ ಪೊಲೀಸರ ಹೆಜ್ಜೆ : ಗಣೇಶ ವಿಸರ್ಜನೆಯ ಸಂಭ್ರಮದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದ ಸಮವಸ್ತ್ರಧಾರಿ ಪೊಲೀಸ್ ಅಧಿಕಾರಿಗಳು ಭಕ್ತರೊಂದಿಗೆ ಸಾಂಪ್ರದಾಯಿಕ ಹಾಡುಗಳಿಗೆ ಹೆಜ್ಜೆ ಹಾಕಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ. ವಿಶೇಷವಾಗಿ ಖೈರತಾಬಾದ್ ಹಾಗೂ ಹುಸೇನ್ ಸಾಗರ್ ಸುತ್ತಮುತ್ತ ಕಂಡುಬಂದ ಈ ಕ್ಷಣಗಳು, ಭಕ್ತರೊಂದಿಗೆ ಪೊಲೀಸ್ ಅಧಿಕಾರಿಗಳು ಸಾಂಪ್ರದಾಯಿಕ ಹಾಡುಗಳಿಗೆ ನೃತ್ಯ ಮಾಡಿದ ದೃಶ್ಯಗಳು ಗಮನ ಸೆಳೆದಿವೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಡುರೊಂಟೊ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ: ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ನಾಗ್ಪುರ–ಮುಂಬೈ CSMT ಡುರೊಂಟೊ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12290) ಸೆಪ್ಟೆಂಬರ್ 25ರ ರಾತ್ರಿ ಕಲ್ಲು ತೂರಾಟಕ್ಕೆ ಗುರಿಯಾಗಿದೆ. ಬೋರ್ಖೇಡಿ ನಿಲ್ದಾಣ ದಾಟಿದ ಬಳಿಕ ರಾತ್ರಿ ಸುಮಾರು 8:27ಕ್ಕೆ ರೈಲಿನ ಕಿಟಕಿಗಳಿಗೆ ಹೊರಗಿನಿಂದ ಕಲ್ಲು ಅಥವಾ ವಸ್ತುವೊಂದು ಬಡಿದಿದ್ದು, A-1, B-2 ಮತ್ತು B-5 ಕೋಚ್‌ಗಳ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಬೋರ್ಖೇಡಿ ನಿಲ್ದಾಣ ನಾಗ್ಪುರದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಡಾ. ಮನಮೋಹನ್ ಸಿಂಗ್ ಜನ್ಮದಿನದಂದು ದೇಶದಾದ್ಯಂತ ಸ್ಮರಣೆ : ಭಾರತದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಅವರ ಸಾರ್ವಜನಿಕ ಜೀವನ, ಆರ್ಥಿಕ ಸುಧಾರಣೆಗಳು ಮತ್ತು ಸರಳ ನಾಯಕತ್ವವನ್ನು ಸ್ಮರಿಸಲಾಗುತ್ತಿದೆ. 1932ರ ಸೆಪ್ಟೆಂಬರ್ 26ರಂದು ಜನಿಸಿದ ಮನಮೋಹನ್ ಸಿಂಗ್ ಅವರು 2024ರ ಡಿಸೆಂಬರ್ 26ರಂದು ನಿಧನರಾದರು. ಡಾ. ಮನಮೋಹನ್ ಸಿಂಗ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ 1991ರ ಆರ್ಥಿಕ ಸುಧಾರಣೆಗಳು, 2004–2014ರ ಪ್ರಧಾನಮಂತ್ರಿ ಅವಧಿ, ಸಾಮಾಜಿಕ ಕಲ್ಯಾಣ ಯೋಜನೆಗಳು ಮತ್ತು ಸಾರ್ವಜನಿಕ ಸೇವೆಯ ಕುರಿತು ದೇಶಾದ್ಯಂತ ಸ್ಮರಣೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

ಖ್ಯಾತ ಹಿಂದೂಸ್ತಾನಿ ಗಾಯಕ ಪಂ. ನಾಗಭೂಷಣ ಹೆಗಡೆ ನಿಧನ

ಬಡುಗುತಿಟ್ಟಿನ ಯಕ್ಷ ಕಲಾವಿದ ಶ್ರೀಪಾದ ಭಟ್ ನಿಧನ

ಹೊಸಪೇಟೆಯ ಬಿದಿರು ಮಾರುಕಟ್ಟೆಯಲ್ಲಿ ಬೆಂಕಿ: ಹಲವು ವಸ್ತುಗಳು ಬೆಂಕಿಗಾಹುತಿ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಐಎನ್‌ಎಸ್ ಸಮರ್ಥಕ್ ಯುದ್ಧನೌಕೆ ಅ. 16ರಂದು ಭಾರತೀಯ ನೌಕಾಪಡೆಗೆ ಸೇರ್ಪಡೆ

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಆರ್ಥಿಕ ಸುಧಾರಣೆಯ ಹರಿಕಾರನಿಗೆ ದೇಶದಾದ್ಯಂತ ಗೌರವ appeared first on Samyukta Karnataka.

Samyukta Karnataka News Live: ಬೆಂಗಳೂರಿನಲ್ಲಿ ಕರ್ನಾಟಕ ಪರ್ವ-2026
RCB ನಾಯಕ ರಾಜತ್ ಪಾಟಿದಾರ್‌ಗೆ ಗೌರವ ಡಾಕ್ಟರೇಟ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಾಜತ್ ಪಾಟಿದಾರ್ ಅವರ ಸಾಧನೆಗಳ ಪಟ್ಟಿಗೆ ಮತ್ತೊಂದು ಮಹತ್ವದ ಗೌರವ ಸೇರ್ಪಡೆಯಾಗಿದೆ. ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಛಗನ್‌ಭಾಯಿ ಪಟೇಲ್ ಅವರಿಂದ ರಾಜತ್ ಪಾಟಿದಾರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ರಾಜತ್ ಪಾಟಿದಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದು, ಈ ಗೌರವವನ್ನು ಹೆಮ್ಮೆ ಮತ್ತು ಕೃತಜ್ಞತೆಯ ಕ್ಷಣ ಎಂದು ಬಣ್ಣಿಸಿದ್ದಾರೆ. ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ತಮ್ಮ ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯುವ ಮೈಲಿಗಲ್ಲು ಎಂದು ಅವರು ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಸೇವಾ ಫಸ್ಟ್’ ಚಾಲನೆ : ದೇಶದ ಯುವಶಕ್ತಿಯನ್ನು ಸ್ಥಳೀಯ ಹಾಗೂ ರಾಷ್ಟ್ರೀಯ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಕಂಡುಹಿಡಿಯಲು ಬಳಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯದ ‘ಸೇವಾ ಫಸ್ಟ್ ಇನ್ನೋವೇಷನ್ ಚಾಲೆಂಜ್’ (Seva First Innovation Challenge)ಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc)ಯಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತವು ವಿಶ್ವದಲ್ಲೇ ಅತಿ ದೊಡ್ಡ ಯುವಜನಸಂಖ್ಯೆಯನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು, 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ನಿರ್ಣಾಯಕವಾಗಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಯುವಜನರು ತಮ್ಮ ಸುತ್ತಮುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಕಾರ್ಯಗತಗೊಳಿಸಬಹುದಾದ ಪರಿಹಾರಗಳನ್ನು ರೂಪಿಸುವುದು ಈ ಸವಾಲಿನ ಪ್ರಮುಖ ಉದ್ದೇಶವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸುಪ್ರೀಂ ಕೋರ್ಟ್‌ನಲ್ಲಿ ಹಿಂದಿ ಅಧಿಕೃತ ಭಾಷೆಯಾಗಬೇಕೆಂಬ ಅರ್ಜಿ ವಜಾ : ಸುಪ್ರೀಂ ಕೋರ್ಟ್‌ನ ಅಧಿಕೃತ ಭಾಷೆಯಾಗಿ ಹಿಂದಿಯನ್ನು ಬಳಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 25ರಂದು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಹಿಂದಿ ಬಳಕೆಯ ಸಾಧ್ಯತೆಯನ್ನು ಪರಿಶೀಲಿಸಲು ಹಾಗೂ ಶಿಫಾರಸುಗಳನ್ನು ನೀಡಲು ಸಮಿತಿ ರಚಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆ ನಡೆಸಿತು. ಭಾಷೆಗೆ ಸಂಬಂಧಿಸಿದ ಇಂತಹ ಬದಲಾವಣೆಗಳನ್ನು ನ್ಯಾಯಾಲಯದ ಆದೇಶದ ಮೂಲಕ ಜಾರಿಗೆ ತರಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿತು. ಇವು ಶಾಸಕಾಂಗ ಮತ್ತು ಆಡಳಿತಾತ್ಮಕ ಸುಧಾರಣೆಗಳ ಭಾಗವಾಗಿ ಹಂತಹಂತವಾಗಿ ನಡೆಯಬೇಕಾದ ಪ್ರಕ್ರಿಯೆಗಳು ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಗಡುವು : ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು ಸೆಪ್ಟೆಂಬರ್ 26ರೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ಅಕ್ಟೋಬರ್ 2ರಿಂದ ಮುಂಬೈನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಶುಕ್ರವಾರ ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ ತೊಗರಿಗೆ ವಿದೇಶಿ ಮಾರುಕಟ್ಟೆ ಬಾಗಿಲು : ಕಲ್ಯಾಣ ಕರ್ನಾಟಕದ ಪ್ರಮುಖ ಕೃಷಿ ಉತ್ಪನ್ನವಾಗಿರುವ ಕಲಬುರಗಿ ತೊಗರಿ ಬೇಳೆ ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಮತ್ತೊಂದು ಹೆಜ್ಜೆ ಇಟ್ಟಿದೆ. GI ಟ್ಯಾಗ್ ಹೊಂದಿರುವ ಗುಲ್ಬರ್ಗಾ ತೊಗರಿ ಬೇಳೆಯ ಒಂದು ಮೆಟ್ರಿಕ್ ಟನ್ ಪ್ರಮಾಣವನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಕಲಬುರಗಿ ತೊಗರಿಗೆ ದೊರೆತಿರುವ ಭೌಗೋಳಿಕ ಸೂಚಕ (GI) ಮಾನ್ಯತೆ, ಉತ್ಪನ್ನದ ಪ್ರಾದೇಶಿಕ ಗುರುತು ಮತ್ತು ಗುಣಮಟ್ಟವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗುರುತಿಸಲು ನೆರವಾಗುತ್ತಿದೆ. ಭಾರತದ ಅಧಿಕೃತ GI ದಾಖಲೆಗಳ ಪ್ರಕಾರ, ‘Gulbarga Tur Dal’ ಹೆಸರಿನಲ್ಲಿ ಈ ಉತ್ಪನ್ನ ನೋಂದಣಿಯಾಗಿದ್ದು, ಕರ್ನಾಟಕದ ಭೌಗೋಳಿಕ ಪ್ರದೇಶಕ್ಕೆ ಸಂಬಂಧಿಸಿದ ಕೃಷಿ ಉತ್ಪನ್ನವಾಗಿ ಗುರುತಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಮಾ ವಲಯದಲ್ಲಿ ಮಹತ್ವದ ಬದಲಾವಣೆ -ಏಜೆಂಟ್‌ಗಳ ಕಮಿಷನ್, ತಪ್ಪು ಮಾರಾಟಕ್ಕೆ IRDAI ಕಡಿವಾಣ : ವಿಮಾ ಪಾಲಿಸಿದಾರರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ಒದಗಿಸುವ ಉದ್ದೇಶದಿಂದ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ವಿಮಾ ವಿತರಣಾ ವ್ಯವಸ್ಥೆಯಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ‘ವಿಮಾ ವಿತರಣೆಯ ಅರ್ಥಶಾಸ್ತ್ರವನ್ನು ಮರುಮಾಪನ ಮಾಡುವುದು’ ಎಂಬ ಸಾರ್ವಜನಿಕ ಸಮಾಲೋಚನಾ ಪತ್ರದಲ್ಲಿ ವಿತರಣಾ ವೆಚ್ಚ, ಕಮಿಷನ್, ಮಾರುಕಟ್ಟೆ ನಡವಳಿಕೆ, ಗ್ರಾಹಕರ ಸೂಕ್ತತೆ ಹಾಗೂ ಡಿಜಿಟಲ್ ವ್ಯವಸ್ಥೆ ಸೇರಿದಂತೆ ಹಲವು ಅಂಶಗಳ ಕುರಿತು ಸುಧಾರಣೆಗಳನ್ನು ಸೂಚಿಸಲಾಗಿದೆ. ಪ್ರಸ್ತಾವಿತ ಚೌಕಟ್ಟಿನ ಪ್ರಮುಖ ಉದ್ದೇಶಗಳಲ್ಲಿ ತಪ್ಪು ಮಾರಾಟ (mis-selling) ನಿಯಂತ್ರಣವೂ ಸೇರಿದೆ. ಗ್ರಾಹಕರ ಅಗತ್ಯತೆ ಮತ್ತು ಸೂಕ್ತತೆಯನ್ನು ದಾಖಲಿಸುವುದು, ವಿಮಾ ಉತ್ಪನ್ನವನ್ನು ಇತರ ಹಣಕಾಸು ಉತ್ಪನ್ನಗಳೊಂದಿಗೆ ಬಲವಂತವಾಗಿ ಜೋಡಿಸುವುದನ್ನು ತಡೆಯುವುದು ಹಾಗೂ ಗ್ರಾಹಕರಿಗೆ ವಿಮಾ ಉತ್ಪನ್ನದ ನೈಜ ವೆಚ್ಚ ಮತ್ತು ವಿತರಣಾ ವೆಚ್ಚದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದು ಸೇರಿದಂತೆ ಹಲವು ಕ್ರಮಗಳನ್ನು IRDAI ಸೂಚಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇಕ್ ಇನ್ ಇಂಡಿಯಾ’ದ ಪಯಣಕ್ಕೆ 12 ವರ್ಷ :  ದೇಶವನ್ನು ಜಾಗತಿಕ ಉತ್ಪಾದನಾ, ವಿನ್ಯಾಸ ಮತ್ತು ನವೋದ್ಯಮ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ 2014ರ ಸೆಪ್ಟೆಂಬರ್ 25ರಂದು ಆರಂಭಿಸಲಾದ ‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಇಂದು 12 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಔಷಧ, ಉಕ್ಕು, ರೈಲ್ವೆ ಮತ್ತು ರಕ್ಷಣಾ ಉತ್ಪಾದನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶೀಯ ಉತ್ಪಾದನಾ ಸಾಮರ್ಥ್ಯ ವಿಸ್ತರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಕರ್ನಾಟಕ ಪರ್ವ-2026 : ಕಲೆ, ಸಂಸ್ಕೃತಿ, ಕರಕುಶಲತೆ ಹಾಗೂ ಸ್ಥಳೀಯ ಉದ್ಯಮಶೀಲತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಕರ್ನಾಟಕ ಪರ್ವ-2026’ ಉತ್ಸವ ಸೆಪ್ಟೆಂಬರ್ 26ರಿಂದ 30ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿದೆ. ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಐದು ದಿನಗಳ ಉತ್ಸವವನ್ನು ಸೆಪ್ಟೆಂಬರ್ 26ರಂದು ಉದ್ಘಾಟನೆಯಾಗಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಶಂಕಿತ ಉಗ್ರರ ಬಂಧನ : ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಂಕಿತ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಗಣೇಶ ವಿಸರ್ಜನೆಗೆ ಪೊಲೀಸರ ಮಾರ್ಗಸೂಚಿ : ಇಂದು ( ಸೆ.25 ರಂದು) ಸಂಜೆ 11 ದಿನದ ಸಾರ್ವಜನಿಕ ಗಣೇಶಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತಾಲಯವು ಸಾರ್ವಜನಿಕರಿಗೆ ಮಾರ್ಗಸೂಚಿ ಪ್ರಕಟಿಸಿದ್ದು ಸಂಚಾರ ಮತ್ತು ವಿಸರ್ಜನೆ ವೇಳೆ ಪೊಲೀಸರ ಸೂಚನೆ ಪಾಲಿಸಬೇಕು ಎಂದು ಆಯುಕ್ತಾಲಯದ ಪ್ರಕಟಣೆ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾರ್ಜಾದಲ್ಲಿ ಕೊಲೆಗೀಡಾದ ಅಲ್ವಿನ್ ಕುಂದರ್ ಶವ ಇಂದು ತಾಯ್ನಾಡಿಗೆ : ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಗೀಡಾಗಿರುವ ಇಲ್ಲಿನ ಕುಂದಾಪುರದ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದ‌ರ್ (50) ಅವರ ಶವ ಶಾರ್ಜಾದಿಂದ ಸೆ.25 ರಂದು ವಿಮಾನದ ಮೂಲಕ ಹುಟ್ಟೂರಿಗೆ ಬರಲಿದೆ. ಗುರುವಾರ ರಾತ್ರಿ 11 ಗಂಟೆಗೆ ಶಾರ್ಜಾದಿಂದ ಪ್ರಕಾಶ್‌ ಅವರ ಸಂಬಂಧಿಕರು ಹಾಗೂ ಕಂಪೆನಿಯವರು ವಿಮಾನದಲ್ಲಿ ಪಾರ್ಥಿವ ಶರೀರದೊಂದಿಗೆ ಹೊರಟಿದ್ದು, ಶುಕ್ರವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಬೆಂಗಳೂರಿನಲ್ಲಿ ಕರ್ನಾಟಕ ಪರ್ವ-2026 appeared first on Samyukta Karnataka.

Samyukta Karnataka News Live: ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಡಾ. ಆನಂದ ಪಾಂಡುರಂಗಿ ನಿಧನ
ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್ ಮತ್ತೆ ಲಭ್ಯ : ರ್ನಾಟಕದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳು ಹಾಗೂ ಸಾಂಸ್ಕೃತಿಕ ವೈಭವವನ್ನು ವಿಭಿನ್ನ ರೀತಿಯಲ್ಲಿ ಪರಿಚಯಿಸುವ ಕರ್ನಾಟಕ ಫಿಲಾಟೆಲಿ ಪಾಸ್‌ಪೋರ್ಟ್ ಮತ್ತೆ ಬಿಡುಗಡೆಯಾಗಲಿದೆ. ಕರ್ನಾಟಕ ಅಂಚೆ ವೃತ್ತವು ಈ ಕೋಡುಗೆ ಮತ್ತೆ ಬರಲಿದೆ ಎಂದು ತಿಳಿಸಿದೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಆಯೋಗದ ವಿವಾದದ ನಡುವೆ ರಾಹುಲ್ ಗಾಂಧಿ ಹೊಸ ಆರೋಪ : ಭಾರತದಲ್ಲಿ ಚುನಾವಣೆಗಳ ಸಂದರ್ಭದಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬುದು “ಶೇಕಡಾ 100ರಷ್ಟು ಖಚಿತ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ ಅಕ್ರಮ ಅಥವಾ ‘ವೋಟ್ ಚೋರಿ’ ಎಂಬುದು ಕೇವಲ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ವಿಷಯವಲ್ಲ; ಇದು ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಸಂಸ್ಥೆಗಳ ಮೇಲಿನ ದಾಳಿ ಎಂದು ಅವರು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

AI ಅಪಾಯಗಳ ಕುರಿತು UN ಭದ್ರತಾ ಮಂಡಳಿಗೆ ಎಚ್ಚರಿಕೆ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ಸುರಕ್ಷತೆ ಹಾಗೂ ಭವಿಷ್ಯದ ಅಪಾಯಗಳ ಕುರಿತು ವಿಶ್ವದ ಪ್ರಮುಖ AI ಕಂಪನಿಗಳ ಮುಖ್ಯಸ್ಥರು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ. AIಯ ಹೆಚ್ಚುತ್ತಿರುವ ಸಾಮರ್ಥ್ಯವನ್ನು ಸುರಕ್ಷಿತವಾಗಿ ನಿರ್ವಹಿಸಲು ದೇಶಗಳು ಪರಸ್ಪರ ಸಹಕಾರದೊಂದಿಗೆ ಜಾಗತಿಕ ನಿಯಮಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ಸುದ್ದಿಗೋಷ್ಠಿ : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಜೆ ನವದೆಹಲಿಯ ಇಂದಿರಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವುದು ಹಾಗೂ ಚುನಾವಣಾ ದತ್ತಾಂಶದಲ್ಲಿ ಬದಲಾವಣೆಗಳಾಗಿವೆ ಎಂಬ ಆರೋಪಗಳ ಕುರಿತು ಅವರು ಮಾತನಾಡುವ ನಿರೀಕ್ಷೆಯಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಡಿಕೆಶಿ ಆಗ್ರಹ : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆಗಾರಿಕೆ ವಹಿಸಿಕೊಂಡು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾವೇರಿ ನೀರು ಬಾಕಿ ವಿಚಾರದಲ್ಲಿ ಹೊಸ ತಿರುವು : ಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ವಿವಾದ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನಗಳನ್ನು ಪಾಲಿಸುವ ವಿಚಾರದಲ್ಲಿ ಕರ್ನಾಟಕದ ಪ್ರತಿಕ್ರಿಯೆಯನ್ನು ನ್ಯಾಯಾಲಯ ಕೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಳಿಯಾಳ ಬರಪರಿಹಾರಕ್ಕೆ ಮಹತ್ವದ ಹೆಜ್ಜೆ – ವೈಜ್ಞಾನಿಕ ಪರಿಶೀಲನೆಗೆ ಅರ್ಹತೆ : ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯಿಂದ ಹಳಿಯಾಳ ತಾಲೂಕಿನ ರೈತರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಳಿಯಾಳ ತಾಲೂಕು ಬರ ಪರಿಸ್ಥಿತಿಯ Ground Truthing (ಸ್ಥಳ ಪರಿಶೀಲನೆ)ಗೆ ಅರ್ಹತೆ ಪಡೆದಿದ್ದು, ಬೆಳೆ ಹಾನಿಯ ನೈಜ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮನಸ್ಸುಗಳ ವೈದ್ಯನ ನಿರ್ಗಮನ : ಉತ್ತರ ಕರ್ನಾಟಕ ಕಂಡ ಅಪರೂಪದ ಮಾನವೀಯ ವೈದ್ಯ ಪರಂಪರೆಯ ಅಂತ್ಯವಾದಂತಾಗಿದೆ. ವೈದ್ಯೋ ನಾರಾಯಣ ಹರಿ ಎಂಬ ಮಾತು ಎಷ್ಟು ಸತ್ಯ ಎಂಬ ಅನುಭವ ಸಾರಿದ ಮನಸ್ಸುಗಳ ವೈದ್ಯ, ಸಾವಿರಾರು ಕುಟುಂಬಗಳಿಗೆ ನೆಮ್ಮದಿ ನೀಡಿದ್ದ ಡಾ. ಆನಂದ ಪಾಂಡುರಂಗಿ ಇನ್ನಿಲ್ಲ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಳಿನದಿಯಲ್ಲಿ ವಿಸರ್ಜಿತ ಗಣಪನ ಮೂರ್ತಿಗಳ ರಾಶಿ : ದಾಂಡೇಲಿಯಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆದ ಗಣೇಶೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಮನೆ ಹಾಗೂ ಸಾರ್ವಜನಿಕ ಗಣಪನ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ ಭಕ್ತರು ಶ್ರದ್ಧಾಭಕ್ತಿಯಿಂದ ಕಾಳಿನದಿಯಲ್ಲಿ ವಿಸರ್ಜನೆ ನೆರವೇರಿಸುತ್ತಿದ್ದಾರೆ. ಆದರೆ, ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿಸರ್ಜಿತ ಗಣಪನ ಮೂರ್ತಿಗಳು ಸಂಪೂರ್ಣವಾಗಿ ಮುಳುಗದೆ ರಾಶಿಯಾಗಿ ಕಾಣಿಸುತ್ತಿವೆ. ದೊಡ್ಡ ಸಾರ್ವಜನಿಕ ಗಣಪನ ಮೂರ್ತಿಗಳು ನದಿಯಲ್ಲಿ ಅಡ್ಡಬಿದ್ದು, ದೀರ್ಘಕಾಲ ಅಲ್ಲಿಯೇ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರವಾಡದ ಹಿರಿಯ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ :  ಕರ್ನಾಟಕದ ಹಿರಿಯ ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಹಾಗೂ ಅಂಕಣಕಾರ ಡಾ. ಆನಂದ ಪಾಂಡುರಂಗಿ ನಿಧನ ಹೊಂದಿದ್ದಾರೆ. ಧಾರವಾಡದಲ್ಲಿ ದೀರ್ಘಕಾಲ ಮನೋವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ. ಆನಂದ ಪಾಂಡುರಂಗಿ ಅವರು ವೈದ್ಯಕೀಯ ಸೇವೆಯ ಜತೆಗೆ ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಕ್ರಿಯರಾಗಿದ್ದರು. ವಿದ್ಯಾರ್ಥಿಗಳು, ಯುವಜನರು ಹಾಗೂ ಕುಟುಂಬಗಳಿಗೆ ಮಾರ್ಗದರ್ಶನ ನೀಡುವುದು, ವ್ಯಕ್ತಿತ್ವ ವಿಕಸನ ಮತ್ತು ಆತ್ಮವಿಶ್ವಾಸದ ಕುರಿತು ಉಪನ್ಯಾಸಗಳನ್ನು ನೀಡುವುದು ಅವರ ಸಾಮಾಜಿಕ ಚಟುವಟಿಕೆಗಳ ಪ್ರಮುಖ ಭಾಗವಾಗಿತ್ತು. ಅವರ ವೃತ್ತಿಪರ ಪರಿಚಯದಲ್ಲಿ ವಿದ್ಯಾರ್ಥಿ ಮಾರ್ಗದರ್ಶನ, ಪೋಷಕರ ಸಮಾಲೋಚನೆ, ಕಿಶೋರರ ಆರೈಕೆ ಮತ್ತು ವ್ಯಸನಮುಕ್ತಿ ಸೇವೆಗಳನ್ನೂ ಸಲ್ಲಿಸಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಮಾನ್ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ – ಭಾರತೀಯ ನಾವಿಕ ಸಾವು : ಒಮಾನ್‌ನ ಪೂರ್ವ ಕರಾವಳಿ ಸಮೀಪ ವಾಣಿಜ್ಯ ಹಡಗು MV Cape Dao ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ. ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಪೈಕಿ 19 ಮಂದಿಯನ್ನು ರಕ್ಷಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಹಡಗುಗಳು ಹಾಗೂ ನಾವಿಕರ ಮೇಲಿನ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಕಣ ಬರಹ | ಕಲ್ಯಾಣ-ಕರಾವಳಿ ಬದುಕಿಗೆ ಬೇಕಿಲ್ಲ ಭಾವನೆಯ ಆಟ! : ಸಂಯುಕ್ತ ಕರ್ನಾಟಕ ಕಾರ್ಯನಿರ್ವಾಹಕ ಹಾಗೂ ಸಂಪಾದಕರಾದ ಮೋಹನ ಹೆಗಡೆ ಅವರ ಅಂಕಣ ಗುರುವಾರ ದಿನಪತ್ರಿಕೆಯಲ್ಲಿ ಪ್ರಕಟವಾದ ಲೇಖನದಲ್ಲಿ ಕಲ್ಯಾಣ ಕರ್ನಾಟಕದಿಂದ ಕರಾವಳಿ ಕರ್ನಾಟಕದವರೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಂಡ ಪ್ರವಾಸ ಕುರಿತಂತೆ ಹಾಗೂ ಜನರ ಭಾವನೆಗಳಿಗೆ ಸ್ಪಂದಿಸುವ ಘೋಷಣೆಗಳ ಜೊತೆಗೆ ಶಿಕ್ಷಕರ ನೇಮಕಾತಿ, 371(ಜೆ), ಮೂಲಸೌಕರ್ಯ, ಭೂಮಿ-ಪುನರ್ವಸತಿ, CRZ, ಅರಣ್ಯ ಕಾಯ್ದೆ ಹಾಗೂ ಕಸ್ತೂರಿರಂಗನ್ ವರದಿಯಂತಹ ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕೆಂದು ಲೇಖಕರು ಪ್ರಶ್ನಿಸುತ್ತಾರೆ. ಜನರ ಭಾವನೆಗಳನ್ನು ಗೌರವಿಸುವ ರಾಜಕಾರಣದ ಜೊತೆಗೆ ಅವರ ನೈಜ ಬದುಕಿನ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆಯೇ? ಎಂಬುದು. ಕಲ್ಯಾಣ ಕರ್ನಾಟಕ ಮತ್ತು ಕರಾವಳಿ ಭಾಗದ ಜನರಿಗೆ ಘೋಷಣೆಗಳಿಗಿಂತ ಶಿಕ್ಷಣ, ಉದ್ಯೋಗ, ನೀರು, ರಸ್ತೆ, ಭೂಮಿ, ಪುನರ್ವಸತಿ ಮತ್ತು ಮೂಲಭೂತ ಸೌಲಭ್ಯಗಳ ಖಚಿತತೆ ಅಗತ್ಯ ಎಂದು ಈ ಲೇಖನದಲಿ ಹೇಳಲಾಗಿದ್ದು.  “ಭಾವನೆಗಳ ರಾಜಕಾರಣ”ಕ್ಕಿಂತ “ಬದುಕಿನ ರಾಜಕಾರಣ”ಕ್ಕೆ ಆದ್ಯತೆ ನೀಡಬೇಕು, ಘೋಷಿತ ಯೋಜನೆಗಳು ಕಾರ್ಯರೂಪಕ್ಕೆ ಬಂದು ಜನರ ಬದುಕಿನಲ್ಲಿ ಬದಲಾವಣೆ ತರಬೇಕು ಎಂಬ ಆಶಯವೇ ಅಂಕಣದ ಮುಖ್ಯ ಸಂದೇಶ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಮನೋವೈದ್ಯ, ಪ್ರೇರಣಾದಾಯಿ ವಾಗ್ಮಿ ಡಾ. ಆನಂದ ಪಾಂಡುರಂಗಿ ನಿಧನ appeared first on Samyukta Karnataka.

Samyukta Karnataka News Live: ರೈತರ ಸಂಕಷ್ಟ, ಬರ ಪರಿಹಾರ ಇಂದು ಸದನದಲ್ಲಿ ಪ್ರಮುಖ ಚರ್ಚೆ
ರಾಷ್ಟ್ರೀಯ ಪ್ರಶಸ್ತಿ ಗೆದ್ದು ಮಂಗಳೂರಿಗೆ ಮರಳಿದ ‘ಮಿಥ್ಯ’ ತಂಡ :  72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕನ್ನಡದ ‘ಮಿಥ್ಯ’ ಚಿತ್ರದ ತಂಡದ ಸದಸ್ಯರು ಬುಧವಾರ ಮಂಗಳೂರಿಗೆ ಮರಳಿದರು. ಖ್ಯಾತ ರಂಗಭೂಮಿ ಕಲಾವಿದೆ ಹಾಗೂ ಪೋಷಕ ನಟಿ ರೂಪಶ್ರೀ ವರ್ಕಾಡಿ, ಬಾಲನಟ ಆತೀಶ್ ಎಸ್. ಶೆಟ್ಟಿ, ಚಿತ್ರದ ಬರಹಗಾರ ಹಾಗೂ ನಿರ್ದೇಶಕ ಸುಮಂತ್ ಭಟ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತ್ಮೀಯರು, ಹಿತೈಷಿಗಳು ಹಾಗೂ ಅಭಿಮಾನಿಗಳು ಸ್ವಾಗತ ಕೋರಿದರು. ‘ಮಿಥ್ಯ’ ಚಿತ್ರವು 72ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯಲ್ಲಿ ಮೂರು ಪ್ರಮುಖ ಗೌರವಗಳನ್ನು ಪಡೆದುಕೊಂಡಿದೆ. ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಲಭಿಸಿದ್ದು, ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಆತೀಶ್ ಎಸ್. ಶೆಟ್ಟಿ ಅವರಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಗಳನ್ನು ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಲಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಭಾನುವಾರ ಬ್ಯಾಂಕ ಓಪನ್ ಇರಲಿದೆ : ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸೆಪ್ಟೆಂಬರ್ 28ರಿಂದ 30ರವರೆಗೆ ಪ್ರಸ್ತಾವಿತವಾಗಿರುವ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 27ರ ಭಾನುವಾರ ಸಾರ್ವಜನಿಕ ವಲಯದ ಬ್ಯಾಂಕುಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಶಾಖೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿವೆ. ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಅನುಮೋದನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 28, 29 ಮತ್ತು 30ರಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್ ಸಿಬ್ಬಂದಿಗೆ ಐದು ದಿನಗಳ ಕೆಲಸದ ವಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹಣಕಾಸು ಸಚಿವಾಲಯವು ಮುಷ್ಕರದಿಂದ ಹಿಂದೆ ಸರಿದು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸುವಂತೆ ಬ್ಯಾಂಕ್ ಸಿಬ್ಬಂದಿ ಮತ್ತು ಸಂಘಟನೆಗಳಿಗೆ ಮನವಿ ಮಾಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ AIಗೆ ಹೊಸ ಅಧ್ಯಾಯ – MCP ಏಕೀಕರಣದೊಂದಿಗೆ Zoho Zia Chat ಪರಿಚಯ : ವ್ಯವಹಾರ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಸಾಫ್ಟ್‌ವೇರ್ ಕಂಪನಿ Zoho ಹೊಸ Zia Chat AI ಇಂಟರ್‌ಫೇಸ್‌ ಅನ್ನು ಪರಿಚಯಿಸಿದೆ. ವಿವಿಧ ವ್ಯವಹಾರ ಅಪ್ಲಿಕೇಶನ್‌ಗಳ ನಡುವೆ ಪದೇಪದೇ ಬದಲಾಯಿಸದೆ, ಒಂದೇ ಸಂವಾದಾತ್ಮಕ ಇಂಟರ್‌ಫೇಸ್ ಮೂಲಕ ಮಾಹಿತಿ ಹುಡುಕುವುದು, ವ್ಯವಹಾರದ ಸಂದರ್ಭವನ್ನು ಅರ್ಥಮಾಡಿಕೊಳ್ಳುವುದು ಹಾಗೂ ಅಗತ್ಯ ಕಾರ್ಯಗಳನ್ನು ಕೈಗೊಳ್ಳುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಾಮಾನ್ಯವಾಗಿ ಸಂಸ್ಥೆಗಳಲ್ಲಿ ಮಾರಾಟ, ಮಾರ್ಕೆಟಿಂಗ್, ಗ್ರಾಹಕ ಸೇವೆ, ಮಾನವ ಸಂಪನ್ಮೂಲ ಹಾಗೂ ಹಣಕಾಸು ಸೇರಿದಂತೆ ವಿವಿಧ ಕಾರ್ಯಗಳಿಗೆ ಪ್ರತ್ಯೇಕ ಸಾಫ್ಟ್‌ವೇರ್‌ಗಳನ್ನು ಬಳಸಲಾಗುತ್ತದೆ. ಇದರಿಂದ ಉದ್ಯೋಗಿಗಳು ಒಂದು ಅಪ್ಲಿಕೇಶನ್‌ನಿಂದ ಮತ್ತೊಂದು ಅಪ್ಲಿಕೇಶನ್‌ಗೆ ತೆರಳಿ ಮಾಹಿತಿ ಹುಡುಕಬೇಕಾಗುತ್ತದೆ. ಈ ರೀತಿಯ ವಿಭಜಿತ ಕೆಲಸದ ಅನುಭವವನ್ನು ಕಡಿಮೆ ಮಾಡುವ ಉದ್ದೇಶದಿಂದ Zia Chat ಅನ್ನು ರೂಪಿಸಲಾಗಿದೆ ಎಂದು Zoho ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯ ಉಸ್ತುವಾರಿಗಳ ಪುನಾರಚನೆ – ರಾಜ್ಯ ಉಸ್ತುವಾರಿಗಳ ನೇಮಕ : ಬಿಜೆಪಿಯಲ್ಲಿ ಮಹತ್ವದ ಸಂಘಟನಾ ಪುನಾರಚನೆ – ರಾಜ್ಯ ಉಸ್ತುವಾರಿಗಳ ಹೊಸ ಪಟ್ಟಿ ಪ್ರಕಟಗೊಂಡಿದೆ. ಭಾರತೀಯ ಜನತಾ ಪಕ್ಷದಲ್ಲಿ ಮಹತ್ವದ ಸಂಘಟನಾ ಬದಲಾವಣೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ವಿವಿಧ ರಾಜ್ಯಗಳ ಪಕ್ಷದ ಉಸ್ತುವಾರಿಗಳು ಹಾಗೂ ಸಹ-ಉಸ್ತುವಾರಿಗಳ ಹೊಸ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಹೊಸ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದಲ್ಲಿ ಮೊಳಗಿದ ‘ಲವ್ ಟುವರ್ಡ್ಸ್ ಫ್ಯಾಮಿಲಿ’ ಚಿತ್ರದ ‘ಹೇ ನವಿಲೆ’ ಹಾಡು : ‘ಲವ್ ಟುವರ್ಡ್ಸ್ ಫ್ಯಾಮಿಲಿ’ ಸಿನಿಮಾದ ಎರಡನೇ ಗೀತೆ ‘ಹೇ ನವಿಲೆ’ ಇದೀಗ ಬಿಡುಗಡೆಯಾಗಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ಹೊಸ ಹಾಡನ್ನು ಅನಾವರಣಗೊಳಿಸಲಾಗಿದ್ದು, ಸಿನಿಮಾ ತಂಡ ಮತ್ತಷ್ಟು ಪ್ರಚಾರ ಕಾರ್ಯಗಳಿಗೆ ವೇಗ ನೀಡಿದೆ. ‘ಹೇ ನವಿಲೆ’ ಹಾಡು ಇತ್ತಿಚೆಗೆ ಮ್ಯೂಸಿಕ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

TRAI ಹೊಸ ನಿಯಮ – ಮೊಬೈಲ್ ರೀಚಾರ್ಜ್‌ನಲ್ಲಿ ಮಹತ್ವದ ಬದಲಾವಣೆ : ಮೊಬೈಲ್ ಬಳಕೆದಾರರಿಗೆ ಸಂಬಂಧಿಸಿದಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಮಹತ್ವದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡೇಟಾ ಸೇವೆ ಅಗತ್ಯವಿಲ್ಲದೆ ಕೇವಲ ಕರೆ ಮತ್ತು SMS ಬಳಸುವ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ಒದಗಿಸುವ ಉದ್ದೇಶದಿಂದ Telecom Consumer Protection (Thirteenth Amendment) Regulations, 2026 ಅನ್ನು TRAI ಬಿಡುಗಡೆ ಮಾಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ IAS ಅಧಿಕಾರಿಗಳ ದಿಢೀರ್ ವರ್ಗಾವಣೆ: ರ್ನಾಟಕ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, 6 ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನಿಯೋಜಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, HESCOM, GESCOM, ಹಟ್ಟಿ ಗೋಲ್ಡ್ ಮೈನ್ಸ್ ಹಾಗೂ ವಿವಿಧ ಜಿಲ್ಲಾ ಪಂಚಾಯಿತಿಗಳ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆಯುಷ್ಮಾನ್ ಭಾರತ ಯೋಜನೆಗೆ 8 ವರ್ಷ : ಶದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಸೇವೆಗಳನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ 2018ರಲ್ಲಿ ಆರಂಭಿಸಲಾದ ಆಯುಷ್ಮಾನ್ ಭಾರತ–ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಇದೀಗ ಎಂಟನೇ ವರ್ಷಕ್ಕೆ ಕಾಲಿಟ್ಟಿದೆ. ಯೋಜನೆಯಡಿ ಸೆಪ್ಟೆಂಬರ್ 21, 2026ರ ವೇಳೆಗೆ 48.51 ಕೋಟಿಗೂ ಹೆಚ್ಚು ಜನರು ಆಯುಷ್ಮಾನ್ ಕಾರ್ಡ್ ಹೊಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ IMEC ಯೋಜನೆಗೆ ಟ್ರಂಪ್ ಬೆಂಬಲ: ಹೋರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಮತ್ತು ವಾಣಿಜ್ಯ ಹಡಗುಗಳ ಸಂಚಾರದ ಮೇಲಿನ ಆತಂಕದ ನಡುವೆಯೇ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ನಡೆದ ಸಭೆಗಳಲ್ಲಿ ಗಲ್ಫ್ ರಾಷ್ಟ್ರಗಳು ಹಾಗೂ ಜೋರ್ಡಾನ್ ಸೇರಿದಂತೆ ಅರಬ್ ಪ್ರತಿನಿಧಿಗಳೊಂದಿಗೆ ಈ ಕುರಿತು ಚರ್ಚೆ ನಡೆದಿದೆ. ಭಾರತ, ಕೊಲ್ಲಿ ಪ್ರದೇಶ ಮತ್ತು ಯುರೋಪ್ ನಡುವಿನ ವ್ಯಾಪಾರ ಸಂಪರ್ಕವನ್ನು ಬಲಪಡಿಸುವ ಉದ್ದೇಶದ IMEC ಯೋಜನೆಗೆ 2023ರ ನವದೆಹಲಿ G20 ಶೃಂಗಸಭೆಯಲ್ಲಿ ಚಾಲನೆ ನೀಡಲಾಗಿತ್ತು. ಯೋಜನೆಯಡಿ ಭಾರತದಿಂದ ಸಮುದ್ರ ಮಾರ್ಗದ ಮೂಲಕ ಕೊಲ್ಲಿ ಪ್ರದೇಶಕ್ಕೆ ಸರಕು ಸಾಗಣೆ, ಅಲ್ಲಿಂದ ರೈಲು ಮತ್ತು ಇತರ ಸಂಪರ್ಕ ವ್ಯವಸ್ಥೆಗಳ ಮೂಲಕ ಯುರೋಪ್‌ಗೆ ಸಾಗಿಸುವ ಬಹುಮಾದರಿ ಜಾಲವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರ ಸಂಕಷ್ಟ, ಬರ ಪರಿಹಾರ ಇಂದು ಸದನದಲ್ಲಿ ಪ್ರಮುಖ ಚರ್ಚೆ – ಅಧಿವೇಶನ ವಿಸ್ತರಣೆಗೆ ಬೇಡಿಕೆ? :ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನದ ಕೊನೆಯ ದಿನ ಬರ ಪರಿಸ್ಥಿತಿ, ಪರಿಹಾರ ಹಾಗೂ ರೈತರ ಸಂಕಷ್ಟದ ಕುರಿತು ಚರ್ಚೆ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಲಿದ್ದಾರೆ. ಅಧಿವೇಶನದ ಕೊನೆಯ ದಿನ ಬರ, ರೈತರ ಸಂಕಷ್ಟ ಮತ್ತು ಪರಿಹಾರ ಕ್ರಮಗಳ ಕುರಿತು ನಡೆಯಲಿರುವ ಚರ್ಚೆ ಹಾಗೂ ಸರ್ಕಾರದ ಉತ್ತರದ ಬಳಿಕ ಅಧಿವೇಶನ ವಿಸ್ತರಣೆ ಕುರಿತು ಯಾವುದೇ ನಿರ್ಧಾರ ಹೊರಬರುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ರೈತರ ಸಂಕಷ್ಟ, ಬರ ಪರಿಹಾರ ಇಂದು ಸದನದಲ್ಲಿ ಪ್ರಮುಖ ಚರ್ಚೆ appeared first on Samyukta Karnataka.

Samyukta Karnataka News Live: ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ
‘ರಣ ವಿಕ್ರಮ’ ಬಳಿಕ ಕನ್ನಡದ ರಾಮರಸ ಚಿತ್ರಕ್ಕೆ ಅದಾ ಶರ್ಮಾ ಎಂಟ್ರಿ : ಸ್ಯಾಂಡಲ್‌ವುಡ್‌ನಲ್ಲಿ ನಿರೀಕ್ಷೆ ಮೂಡಿಸಿರುವ ‘ರಾಮರಸ’ ಚಿತ್ರತಂಡದಿಂದ ಇದೀಗ ಮತ್ತೊಂದು ಪ್ರಮುಖ ಅಪ್‌ಡೇಟ್‌ ಹೊರಬಿದ್ದಿದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಅದಾ ಶರ್ಮಾ ‘ರಾಮರಸ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ 2015ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ‘ರಣ ವಿಕ್ರಮ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದೀಗ ಸುದೀರ್ಘ ವಿರಾಮದ ಬಳಿಕ ‘ರಾಮರಸ’ ಮೂಲಕ ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿವೃತ್ತ ಹಾಸ್ಟೆಲ್ ಅಧೀಕ್ಷಕನಿಗೆ ಲೋಕಾಯುಕ್ತ ಶಾಕ್ : ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರಿಗೆ ಸೇರಿದ ಮನೆ ಹಾಗೂ ಫಾರ್ಮ್‌ಹೌಸ್ ಮೇಲೆ ಮಂಡ್ಯ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ಶೋಧ ನಡೆಸಿದ್ದಾರೆ. ಮದ್ದೂರಿನ ಕೊಲ್ಲಿ ವೃತ್ತದ ಸಮೀಪದ ವಿನಾಯಕ ಬಡಾವಣೆಯಲ್ಲಿರುವ ಶಿವರಾಜು ಅವರ ಮನೆ ಹಾಗೂ ಫಾರ್ಮ್‌ಹೌಸ್ ಸೇರಿದಂತೆ ಎರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಡಿಶಾ ಕರಾವಳಿಯ ಆಳ ಸಮುದ್ರದಲ್ಲಿ ಅನಿಲ ಪತ್ತೆ : ಭಾರತದ ಆಳ ಸಮುದ್ರದ ತೈಲ ಮತ್ತು ಅನಿಲ ಶೋಧನಾ ಪ್ರಯತ್ನಕ್ಕೆ ಮಹತ್ವದ ಬೆಳವಣಿಗೆ ದೊರೆತಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಒಡಿಶಾ ಕರಾವಳಿಯ ಸಮೀಪದ ಮಹಾನದಿ ಆಫ್‌ಶೋರ್ ಬೇಸಿನ್‌ನಲ್ಲಿ ನೈಸರ್ಗಿಕ ಅನಿಲವನ್ನು ಪತ್ತೆಹಚ್ಚಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

KEONICS 50 ವರ್ಷ – AI ಯುಗಕ್ಕೆ ಕರ್ನಾಟಕ ಸಿದ್ಧ: ತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಜ್ಞಾನವನ್ನು ಗ್ರಾಮೀಣ ಪ್ರದೇಶಗಳ ಮಕ್ಕಳು, ಶಾಲೆಗಳು ಹಾಗೂ ಸಣ್ಣ ಉದ್ಯಮಿಗಳಿಗೂ ತಲುಪಿಸುವ ಉದ್ದೇಶದಿಂದ ಕಿಯೋನಿಕ್ಸ್ ಕೈಗೊಂಡಿರುವ KEO AI ಕಂಪ್ಯೂಟರ್ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಎಐ ಯುಗಕ್ಕೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಮಕ್ಕಳನ್ನು ಭವಿಷ್ಯದ ತಂತ್ರಜ್ಞಾನಕ್ಕೆ ಸಜ್ಜುಗೊಳಿಸುವ ಪ್ರಯತ್ನ ಅಗತ್ಯವಾಗಿದೆ ಎಂದು ಹೇಳಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ತಂಡಕ್ಕೆ ಚಿನ್ನದ ಪದಕ : 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕವನ್ನು ಮಹಿಳಾ ಕ್ರಿಕೆಟ್ ಮೂಲಕ ಗೆದ್ದುಕೊಂಡಿದೆ. ನಿಸ್ಸಿನ್‌ನ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾವನ್ನು 147 ರನ್‌ಗಳಿಂದ ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮೊಬೈಲ್ ಸ್ಕ್ರೀನ್ ಗಾರ್ಡ್‌ಗಳಿಗೂ BIS ಮಾನದಂಡ : ರ್ಟ್‌ಫೋನ್‌ಗಳ ಸ್ಕ್ರೀನ್‌ಗಳಿಗೆ ಬಳಸುವ ಗ್ಲಾಸ್ ಸ್ಕ್ರೀನ್ ಪ್ರೊಟೆಕ್ಟರ್‌ಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಹೊಸ ಭಾರತೀಯ ಮಾನದಂಡವನ್ನು ಪ್ರಕಟಿಸಿದೆ. IS 19348:2025 – Glass Screen Protector — Specification ಎಂಬ ಮಾನದಂಡವನ್ನು 2025ರ ಜುಲೈ 29ರಂದು ಪ್ರಕಟಿಸಲಾಗಿದೆ ಎಂದು BISನ ಅಧಿಕೃತ ದಾಖಲೆ ತಿಳಿಸುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ ಜೆಸ್ಕಾಂ ಎಇಇ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ :  ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇರೆಗೆ ಕಲಬುರಗಿಯ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ (ಎಇಇ) ರಾಜೇಶ್ವರಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ. ​ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಕಲಬುರಗಿಯ ಖಾದ್ರೀ ಚೌಕ್‌ನಲ್ಲಿ ರಾಜೇಶ್ವರಿ ಅವರಿಗೆ ಸೇರಿದ ಮತ್ತೊಂದು ಮನೆ ಇದ್ದು, ಅಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸೆ.25ರಿಂದ ಧಾರವಾಡದಲ್ಲಿ ಕೃಷಿ ಮೇಳ : ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ, ಸುಸ್ಥಿರ ಕೃಷಿ ಪದ್ಧತಿಗಳು ಹಾಗೂ ರೈತರಿಗೆ ಅಗತ್ಯವಾದ ವೈಜ್ಞಾನಿಕ ಮಾಹಿತಿಯನ್ನು ಪರಿಚಯಿಸುವ ಉದ್ದೇಶದಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆಪ್ಟೆಂಬರ್ 25ರಿಂದ 28ರವರೆಗೆ ಕೃಷಿ ಮೇಳ–2026 ಆಯೋಜಿಸಲಾಗಿದೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಮೇಳವನ್ನು ‘ಸಶಕ್ತ ಮಹಿಳೆ–ಸುಸ್ಥಿರ ಕೃಷಿ’ ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾವೀರ್ ಕರ್ಣ ಫಸ್ಟ್ ಲುಕ್ ಬಿಡುಗಡೆ : ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕರ್ಣನ ಕಥೆಯನ್ನು ಆಧರಿಸಿ ನಿರ್ದೇಶಕ ರಮೇಶ್ ವರ್ಮಾ ನಿರ್ಮಾಣದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಮಹಾವೀರ್ ಕರ್ಣ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಟ ರಾಘವ ಲಾರೆನ್ಸ್ ಅವರು ಕರ್ಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್‌ಗಳು ಮಂಗಳವಾರ ಬಿಡುಗಡೆಯಾಗಿದ್ದು, ಚಿತ್ರರಂಗದಲ್ಲಿ ಗಮನ ಸೆಳೆದಿವೆ. ಚಿತ್ರದ ನಿರ್ಮಾಣ ಸಂಸ್ಥೆ ಪೆನ್ ಮೂವೀಸ್ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಹಂಚಿಕೊಂಡಿದೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ : ಬಿಹಾರ, ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ವಿಧಾನ ಪರಿಷತ್ತುಗಳ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ತೆರವಾಗಲಿರುವ ಸ್ಥಾನಗಳಿಗೆ ಅಕ್ಟೋಬರ್ 23, 2026ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕುಷ್ಟಗಿಯನ್ನು ಬರ ಪಟ್ಟಿಗೆ ಸೇರಿಸಲು ಕ್ರಮ – ಅಮರೇಗೌಡ ಬಯ್ಯಾಪುರ ಮನವಿಗೆ ಡಿಸಿಎಂ ಭರವಸೆ : ಮಳೆ ಆಶ್ರಿತ ಪ್ರದೇಶವಾಗಿರುವ ಕುಷ್ಟಗಿ ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು ಎಂದು ಮಾಜಿ ಸಚಿವ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪುರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿದ ಅಮರೇಗೌಡ ಬಯ್ಯಾಪುರ ಅವರು, ಕುಷ್ಟಗಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಜೊತೆ ಕುಳಿತು ಉಪಾಹಾರ ಸೇವಿಸಿದ ಸಿಎಂ ವಿಜಯ್ : ತಮಿಳುನಾಡಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ಉಪಾಹಾರ ಒದಗಿಸುವ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ಚೆನ್ನೈನಲ್ಲಿ ವಿಸ್ತರಿತ ‘ಪೆರುಂತಲೈವರ್ ಕಾಮರಾಜರ್ ಉಚಿತ ಉಪಾಹಾರ ಯೋಜನೆ’ಗೆ ಚಾಲನೆ ನೀಡಿದರು. ಚೆನ್ನೈನ ತಿರುವಣ್ಮಿಯೂರ್‌ನ ಗಾಂಧಿ ಗ್ರಾಮಂ ಸರ್ಕಾರಿ ಮಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ವಿದ್ಯಾರ್ಥಿಗಳಿಗೆ ಸ್ವತಃ ಉಪಾಹಾರ ಬಡಿಸಿದರು. ಬಳಿಕ ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವಿಸಿದರು. ಶಾಲೆಯ ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಉಪಾಹಾರ ವ್ಯವಸ್ಥೆಯನ್ನೂ ಪರಿಶೀಲಿಸಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಲೋಕಾಯುಕ್ತ ಬಿಗ್ ಆಪರೇಷನ್ – ಕಲಬುರಗಿ, ಹುಬ್ಬಳ್ಳಿ ಸೇರಿ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ : ಅಕ್ರಮ ಆಸ್ತಿ ಗಳಿಕೆ ಮತ್ತು ಲಂಚದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರ ಮುಂಜಾನೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ : ಹುಬ್ಬಳ್ಳಿಯ ಹೆಸ್ಕಾಂ ಎಇಇ ಮನೆ ಹಾಗೂ ಕಚೇರಿ, ಧಾರವಾಡದ ಸಹೋದರನ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಹೆಸ್ಕಾಂ ಎಇಇ ಕಿರಣಕುಮಾರ್ ಬೈಂದೂರ್ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು-ಬೈಕ್ ಡಿಕ್ಕಿ – ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು : ದಾವಣಗೆರೆ: ತಾಲ್ಲೂಕಿನ ಕೊಗ್ಗನೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ನಾಗರಾಜಪ್ಪ ಅವರ ಪುತ್ರಿ, ದಾವಣಗೆರೆಯ ಎವಿಕೆ ಕಾಲೇಜಿನ ವಿದ್ಯಾರ್ಥಿನಿ ಋತು (17) ಎಂದು ಗುರುತಿಸಲಾಗಿದೆ. ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: ಕರ್ನಾಟಕ ವಿಧಾನ ಪರಿಷತ್ ಸೇರಿ 4 ರಾಜ್ಯಗಳ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ appeared first on Samyukta Karnataka.

Samyukta Karnataka News Live: 15ರ ವಯಸ್ಸಿನಲ್ಲೇ ಹೂಡಿಕೆ, ಹಣಕಾಸು ಸಾಕ್ಷರತೆಗೆ ಹೊಸ ಹೆಜ್ಜೆ ಹಾಕಿದ ಬೆಂಗಳೂರಿನ ಸಿಂಚನಾ
ಮೂರು ತಿಂಗಳಿನಿಂದ ಯೋಗ ಅಭ್ಯಾಸ, 5ನೇ ವಯಸ್ಸಿನಲ್ಲಿ ವಿಶ್ವ ದಾಖಲೆ : ಅಮೆರಿಕದ ಫೀನಿಕ್ಸ್ ಗಿಸೆಲ್ ಹಿಕ್ಸ್ ಎಂಬ ಬಾಲಕಿ ಅತ್ಯಂತ ಕಿರಿಯ ವಯಸ್ಸಿನಲ್ಲೇ ಯೋಗ ಶಿಕ್ಷಕಿಯಾಗಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕೇವಲ 5 ವರ್ಷ 337 ದಿನಗಳ ವಯಸ್ಸಿನಲ್ಲಿ 200 ಗಂಟೆಗಳ ಯೋಗ ಶಿಕ್ಷಕರ ತರಬೇತಿ ಪೂರ್ಣಗೊಳಿಸಿ, ವಿಶ್ವದ ಅತ್ಯಂತ ಕಿರಿಯ ಮಹಿಳಾ ಯೋಗ ಬೋಧಕಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Raaka ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆ : ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲೀ ಅವರ ಬಹುನಿರೀಕ್ಷಿತ ‘Raaka’ ಚಿತ್ರ ನಿರ್ಮಾಣ ಹಂತದಲ್ಲೇ ಜಾಗತಿಕ ದಾಖಲೆ ನಿರ್ಮಿಸಿದೆ. ಚಿತ್ರಕ್ಕಾಗಿ 37 ಪ್ರದರ್ಶಕರನ್ನು ಒಂದೇ ಸಮಯದಲ್ಲಿ ರಿಯಲ್‌ಟೈಮ್‌ನಲ್ಲಿ ಮೋಷನ್ ಕ್ಯಾಪ್ಚರ್ ಮಾಡಿದ ಸಾಧನೆಗೆ ಗಿನ್ನೆಸ್ ವಿಶ್ವ ದಾಖಲೆ ಲಭಿಸಿದೆ. ಚಿತ್ರದ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಸೆಪ್ಟೆಂಬರ್ 21ರಂದು ಸಾಮಾಜಿಕ ಜಾಲತಾಣದ ಮೂಲಕ ಈ ಸಾಧನೆಯನ್ನು ಘೋಷಿಸಿದೆ. “Most People Motion-Captured in Real-Time” ವಿಭಾಗದಲ್ಲಿ 37 ಮಂದಿಯನ್ನು ಏಕಕಾಲದಲ್ಲಿ ಮೋಷನ್ ಕ್ಯಾಪ್ಚರ್ ಮಾಡಲಾಗಿದೆ ಎಂದು ತಿಳಿಸಿದೆ. ಅಲ್ಲು ಅರ್ಜುನ್ ಮತ್ತು ಅಟ್ಲೀ ಅವರು ಗಿನ್ನೆಸ್ ವಿಶ್ವ ದಾಖಲೆ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣಕ್ಕೆ ಹೊಸ ತಿರುವು : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು 1980ರ ದೆಹಲಿ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು, ಪ್ರಕರಣದಲ್ಲಿ FIR ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಹಿಂದಿನ ಆದೇಶವನ್ನು ರದ್ದುಗೊಳಿಸಿ, ವಿಷಯವನ್ನು ಮತ್ತೆ ಪರಿಗಣಿಸುವಂತೆ ಸೂಚಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಹೊಸ ತಿರುವು : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ 2012ರ ಅಕ್ಟೋಬರ್‌ನಲ್ಲಿ ನಡೆದ 17 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣವನ್ನು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

AI ಯುಗದ ಹೊಸ ಉದ್ಯೋಗ – ಮುಖವೇ ಹೊಸ ಆಸ್ತಿ! : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಮನರಂಜನಾ ಕ್ಷೇತ್ರವನ್ನು ವೇಗವಾಗಿ ಬದಲಾಯಿಸುತ್ತಿರುವ ಬೆನ್ನಲ್ಲೇ, ಚೀನಾದಲ್ಲಿ ಮತ್ತೊಂದು ಕುತೂಹಲಕಾರಿ ಟ್ರೆಂಡ್ ಬೆಳೆಯುತ್ತಿದೆ. ಜನರು ತಮ್ಮ ಮುಖದ ಡಿಜಿಟಲ್ ರೂಪವನ್ನು AI ಆಧಾರಿತ ಡ್ರಾಮಾಗಳು, ಜಾಹೀರಾತುಗಳು, ಗೇಮ್‌ಗಳು ಮತ್ತು ಇತರ ವಿಡಿಯೊ ಕಂಟೆಂಟ್‌ಗಳಲ್ಲಿ ಬಳಸಲು ಲೈಸೆನ್ಸ್ ನೀಡಿ ಹಣ ಗಳಿಸುತ್ತಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಬರಿಮಲೆಯಿಂದ ಮರಳುತ್ತಿದ್ದ ಅಯ್ಯಪ್ಪ ಮಾಲಾಧಾರಿ ಹೃದಯಾಘಾತಕ್ಕೆ ಬಲಿ : ಶಬರಿಮಲೆ ಯಾತ್ರೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ಮರಳುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರು ರೈಲಿನಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ನಿವಾಸಿ ಮಹಾದೇವ ಅಟ್ಟೂರ್ (56) ಎಂದು ಗುರುತಿಸಲಾಗಿದೆ. ಬಸಯ್ಯ ಸಾಲಿಮಠ ಗುರುಸ್ವಾಮಿ ಸನ್ನಿಧಾನದ ಗುಂಪಿನೊಂದಿಗೆ ಶಬರಿಮಲೆಗೆ ತೆರಳಿದ್ದ ಅವರು ಯಾತ್ರೆ ಮುಗಿಸಿಕೊಂಡು ಸಹಯಾತ್ರಿಕರೊಂದಿಗೆ ವಾಪಸ್‌ ಬರುತ್ತಿದ್ದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಸಹೋದರ ನಿಧನ : ದುಬೈ ಆಡಳಿತಗಾರ ಹಾಗೂ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ಕಿರಿಯ ಸಹೋದರ ಶೇಖ್ ಅಹ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು ಎಂದು ವರದಿಗಳು ತಿಳಿಸಿವೆ. ಶೇಖ್ ಅಹ್ಮದ್ ಅವರ ನಿಧನದ ಹಿನ್ನೆಲೆಯಲ್ಲಿ ದುಬೈ ಆಡಳಿತಗಾರರ ನ್ಯಾಯಾಲಯವು 10 ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 21ರಿಂದ ಆರಂಭವಾಗಿರುವ ಈ ಶೋಕಾಚರಣೆಯ ಅವಧಿಯಲ್ಲಿ ದುಬೈ ಎಮಿರೇಟ್‌ನಾದ್ಯಂತ ಯುಎಇ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

SIM ಕಾರ್ಡ್ ಬಳಕೆದಾರರಿಗೆ DoT ಮಹತ್ವದ ಎಚ್ಚರಿಕೆ : SIM ಕಾರ್ಡ್‌ಗಳ ವಂಚನೆಯ ವಿತರಣೆ, ಟೆಲಿಕಾಂ ಗುರುತುಗಳ ದುರುಪಯೋಗ ಹಾಗೂ ಮೊಬೈಲ್‌ಗಳ IMEI ಸಂಖ್ಯೆಯನ್ನು ತಿರುಚುವ ಪ್ರಕರಣಗಳ ಬಗ್ಗೆ ದೂರಸಂಪರ್ಕ ಇಲಾಖೆ (DoT) ನಾಗರಿಕರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ತಮ್ಮ ಹೆಸರಿನಲ್ಲಿ ಪಡೆದ SIM ಕಾರ್ಡ್‌ಗಳನ್ನು ಮತ್ತೊಬ್ಬರಿಗೆ ನೀಡುವುದು ಅಥವಾ ವರ್ಗಾಯಿಸುವುದರಿಂದ ಕಾನೂನು ಸಮಸ್ಯೆ ಎದುರಾಗಬಹುದು ಎಂದು ಇಲಾಖೆ ತಿಳಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ – ನಾಲ್ವರ ಬಂಧನ : ಮೇಯಲು ಬಿಟ್ಟ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿ, ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಅಧಿವೇಶನದಲ್ಲೇ ‘ವಂದೇ ಮಾತರಂ’ ವಿವಾದ : ಕರ್ನಾಟಕ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನದ ಮೊದಲ ದಿನವೇ ವಿಧಾನ ಪರಿಷತ್‌ನಲ್ಲಿ ‘ವಂದೇ ಮಾತರಂ’ ಗಾಯನದ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಸೆಪ್ಟೆಂಬರ್ 21ರಂದು ಆರಂಭವಾದ ಅಧಿವೇಶನದಲ್ಲಿ ‘ವಂದೇ ಮಾತರಂ’ ಗೀತೆಯ ಅಧಿಕೃತ ಗಾಯನ ಎರಡು ಚರಣಗಳ ಬಳಿಕ ಮುಕ್ತಾಯಗೊಂಡಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಉಳಿದ ಚರಣಗಳನ್ನು ತಾವೇ ಹಾಡಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಪರಿಷತ್‌ನಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಉಪಚುನಾವಣೆಗೂ ಮುನ್ನ TMC ಹೆಸರು–ಚಿಹ್ನೆ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆ : ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದ ಚುನಾವಣಾ ಆಯೋಗದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಪ್ರಕರಣ ಪ್ರಸ್ತಾಪವಾಗಿದ್ದು, ಈ ವಾರವೇ ವಿಚಾರಣೆ ನಡೆಸುವ ಉದ್ದೇಶವನ್ನು ನ್ಯಾಯಾಲಯ ವ್ಯಕ್ತಪಡಿಸಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ 15ರ ಬಾಲಕಿಯ ಹೂಡಿಕೆ ಸಾಧನೆ : ಬೆಂಗಳೂರಿನ 15 ವರ್ಷದ ಸಿಂಚನಾ ಸಂತೋಷ್ 10ನೇ ತರಗತಿಯಲ್ಲಿ ಓದುತ್ತಲೇ ₹13.9 ಲಕ್ಷದ ಹೂಡಿಕೆ ಪೋರ್ಟ್‌ಫೋಲಿಯೊ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ಆರ್.ಆರ್. ನಗರದ ಸ್ವರ್ಗರಾಣಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಸಿಂಚನಾ ಅವರು ₹13.9 ಲಕ್ಷ ಮೌಲ್ಯದ ಹೂಡಿಕೆ ಪೋರ್ಟ್‌ಫೋಲಿಯೊವನ್ನು ನಿರ್ವಹಿಸುತ್ತಿದ್ದಾರೆ ಎಂದು ಇತ್ತೀಚಿನ ವರದಿ ತಿಳಿಸಿದೆ. ಅವರ ಹೂಡಿಕೆಗಳು ಈಕ್ವಿಟಿ ಹಾಗೂ ಮ್ಯೂಚುವಲ್ ಫಂಡ್‌ಗಳಲ್ಲಿ ಹರಡಿಕೊಂಡಿದ್ದು, ಭಾರತೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯೂ ಹೂಡಿಕೆ ಹೊಂದಿವೆ. ಸಾಮಾಜಿಕ ಜಾಲತಾಣದಲ್ಲಿ ಸಿಂಚನಾ ವಿಡಿಯೋ ವೈರಲ್‌ ಆಗಿದ್ದು ಇದೀಗ ನೆಟ್ಟಿಗರ ಗಮನ ಸೆಳೆದಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಕಲಿ ಔಷಧ ಜಾಲಕ್ಕೆ ಬಿಗ್ ಶಾಕ್ – ಕರ್ನಾಟಕ FDA ಕಠಿಣ ಕ್ರಮ : ಕರ್ನಾಟಕದ ಔಷಧ ನಿಯಂತ್ರಣ ಅಧಿಕಾರಿಗಳು ಬಿದದಿ ಸಮೀಪದ ಪರವಾನಗಿ ರಹಿತ ಘಟಕದ ಮೇಲೆ ನಡೆಸಿದ ದಾಳಿಯ ಬೆನ್ನಲ್ಲೇ ನಕಲಿ ಔಷಧ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಆಗಸ್ಟ್ 18ರಂದು ಕುರುಬರಕೆರನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ನಡೆದ ದಾಳಿಯಲ್ಲಿ ಸುಮಾರು ₹5.05 ಕೋಟಿ ಮೌಲ್ಯದ ಶಂಕಿತ ನಕಲಿ ಔಷಧಗಳು, ಪ್ಯಾಕೇಜಿಂಗ್ ಸಾಮಗ್ರಿ, ಯಂತ್ರೋಪಕರಣಗಳು ಮತ್ತು ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆರೋಗ್ಯ ಸಚಿವ ಯು.ಟಿ. ಖಾದರ್ ಸಾಮಾಜಿಕ ಜಾಲತಾಣದಲ್ಲಿ ಇಂದು ಪೋಸ್ಟ್‌ ಮಾಡಿ ನಕಲಿ ಔಷಧಿಗಳ ಮಾರಾಟ ಹಾಗೂ ವಿತರಣೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದ ಒಟ್ಟು 24 ಫಾರ್ಮಾ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.  ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ :  ರಾಜ್ಯದ ತೀವ್ರ ಬರ ಪರಿಸ್ಥಿತಿ ಹಾಗೂ ಪಶ್ಚಿಮಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಕರ್ನಾಟಕ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡೂ ಸದನಗಳಲ್ಲಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.

(ಮಾಹಿತಿ ಅಪ್​ಡೇಟ್ ಆಗಲಿದೆ)

The post Samyukta Karnataka News Live: 15ರ ವಯಸ್ಸಿನಲ್ಲೇ ಹೂಡಿಕೆ, ಹಣಕಾಸು ಸಾಕ್ಷರತೆಗೆ ಹೊಸ ಹೆಜ್ಜೆ ಹಾಕಿದ ಬೆಂಗಳೂರಿನ ಸಿಂಚನಾ appeared first on Samyukta Karnataka.