#AmitShah Archives - Samyukta Karnataka

₹182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ
ಭಾರತದಲ್ಲಿ ಮೊದಲ ಬಾರಿಗೆ ಕ್ಯಾಪ್ಟಗನ್ ಪತ್ತೆ: ಮಾದಕವಸ್ತು ವಿರುದ್ಧ ಕೇಂದ್ರದ ಕಠಿಣ ಕ್ರಮ – ವಿದೇಶಿ ಪ್ರಜೆ ಬಂಧನ

ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ಭಾರೀ ಪ್ರಮಾಣದ ಕ್ಯಾಪ್ಟಗನ್ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ಯಶಸ್ವಿಯಾಗಿದ್ದು, ಇದರ ಮೌಲ್ಯ ಸುಮಾರು ₹182 ಕೋಟಿ ಎಂದು ಅಂದಾಜಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಹಿತಿ ಹಂಚಿಕೊಂಡಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, “ಮೋದಿ ಸರ್ಕಾರ ‘ಮಾದಕವಸ್ತು ಮುಕ್ತ ಭಾರತ’ ನಿರ್ಮಾಣಕ್ಕೆ ಬದ್ಧವಾಗಿದೆ. ‘ಆಪರೇಷನ್ ರೇಜ್‌ಪಿಲ್’ ಮೂಲಕ ನಮ್ಮ ಏಜೆನ್ಸಿಗಳು ₹182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಎಂದು ಕರೆಯಲ್ಪಡುವ ಕ್ಯಾಪ್ಟಗನ್ ಅನ್ನು ಮೊದಲ ಬಾರಿಗೆ ವಶಪಡಿಸಿಕೊಂಡಿವೆ” ಎಂದು ತಿಳಿಸಿದ್ದಾರೆ.

ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸಾಗಿಸಲು ಸಿದ್ಧವಾಗಿದ್ದ ಈ ಮಾದಕವಸ್ತು ಸಾಗಣೆಯನ್ನು ಎನ್‌ಸಿಬಿ ಪತ್ತೆಹಚ್ಚಿ ಜಾಲವನ್ನು ಭೇದಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಕ್ಯಾಪ್ಟಗನ್ ಅನ್ನು ಸಾಮಾನ್ಯವಾಗಿ ಅಕ್ರಮ ಮಾದಕವಸ್ತು ಮಾರುಕಟ್ಟೆಯಲ್ಲಿ ಅಪಾಯಕಾರಿ ಉದ್ದೀಪಕ ಡ್ರಗ್ ಎಂದು ಪರಿಗಣಿಸಲಾಗುತ್ತದೆ. ಕೆಲವೆಡೆ ಇದನ್ನು ‘ಜಿಹಾದಿ ಡ್ರಗ್’ ಎಂದು ಕರೆಯಲಾಗುತ್ತದೆ. ಯುದ್ಧ ಪರಿಸ್ಥಿತಿಗಳಲ್ಲಿ ಮತ್ತು ಅತಿರೇಕಿ ಸಂಘಟನೆಗಳ ನಡುವೆ ಇದರ ಬಳಕೆ ಕುರಿತು ಹಲವು ಅಂತರರಾಷ್ಟ್ರೀಯ ವರದಿಗಳು ಹಿಂದೆ ಬೆಳಕಿಗೆ ಬಂದಿದ್ದವು.

ಅಮಿತ್ ಶಾ ತಮ್ಮ ಪೋಸ್ಟ್‌ನಲ್ಲಿ, “ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಸರ್ಕಾರ ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ. ಭಾರತಕ್ಕೆ ಪ್ರವೇಶಿಸುವ ಅಥವಾ ಭಾರತವನ್ನು ಸಾರಿಗೆ ಮಾರ್ಗವಾಗಿ ಬಳಸಿಕೊಂಡು ಹೊರಹೋಗುವ ಪ್ರತಿಯೊಂದು ಗ್ರಾಂ ಮಾದಕವಸ್ತುವನ್ನೂ ನಾವು ನಿಗ್ರಹಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎನ್‌ಸಿಬಿ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ ಅವರು, “ಧೈರ್ಯಶಾಲಿ ಮತ್ತು ಜಾಗರೂಕ ಯೋಧರಂತೆ ಕೆಲಸ ಮಾಡಿದ ಎನ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮಾದಕವಸ್ತು ಜಾಲಗಳ ವಿರುದ್ಧ ಕೇಂದ್ರ ಸರ್ಕಾರ ಹಲವು ದೊಡ್ಡ ಮಟ್ಟದ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ವಿಶೇಷವಾಗಿ ಅಂತರರಾಷ್ಟ್ರೀಯ ಮಾದಕವಸ್ತು ಸಾಗಣೆ ಜಾಲಗಳನ್ನು ಭೇದಿಸಲು ಕೇಂದ್ರ ತನಿಖಾ ಸಂಸ್ಥೆಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ.

ದಾವಣಗೆರೆ: ಭೀಕರ ಹತ್ಯೆ – ಮಾಜಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

The post ₹182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ appeared first on Samyukta Karnataka.

ಬಂಗಾಳದಲ್ಲಿ ಕೇಸರಿ ಪರ್ವ; ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಒಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ಕಮ್ಯುನಿಸ್ಟ್ ಮತ್ತು ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಂಗಾಳದ ಮಣ್ಣಿನಲ್ಲಿ ಈಗ ಅಧಿಕೃತವಾಗಿ ಕೇಸರಿ ಬಾವುಟ ಹಾರಾಡಿದೆ. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಮೈದಾನದ ಸುತ್ತಲೂ ನೆರೆದಿದ್ದ ಸಹಸ್ರಾರು ಬಿಜೆಪಿ ಕಾರ್ಯಕರ್ತರ ‘ಜೈ ಶ್ರೀರಾಮ್’ ಘೋಷಣೆಗಳ ನಡುವೆ, ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಸಾಗಿ ಜನರತ್ತ ಕೈಬೀಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಅಧಿಕಾರಿ ಅವರು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು.

ಬಂಗಾಳದ ಈ ಬದಲಾವಣೆ ಕೇವಲ ಅಧಿಕಾರ ಹಸ್ತಾಂತರವಲ್ಲ, ಬದಲಾಗಿ ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಅವರ ಬಲಗೈ ಬಂಟನಂತಿದ್ದ ಸುವೇಂದು ಅಧಿಕಾರಿ ಅವರ ರಾಜಕೀಯ ಚಾಣಾಕ್ಷತನಕ್ಕೆ ಸಂದ ಜಯವಾಗಿದೆ. 294 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿಯ 15 ವರ್ಷಗಳ ಆಡಳಿತಕ್ಕೆ ತೆರೆ ಎಳೆದಿದೆ. ಬಿಹಾರದಲ್ಲಿ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾದ ನಂತರ, ಪೂರ್ವ ಭಾರತದಲ್ಲಿ ಬಿಜೆಪಿಗೆ ಸಿಕ್ಕಿರುವ ಎರಡನೇ ಅತಿದೊಡ್ಡ ವಿಜಯ ಇದಾಗಿದೆ.

ಯೋಗಿ ಆದಿತ್ಯನಾಥ್ ಮತ್ತು ಎನ್. ಚಂದ್ರಬಾಬು ನಾಯ್ಡು ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕರ ಸಮ್ಮುಖದಲ್ಲಿ ನಡೆದ ಈ ಸಮಾರಂಭವು ಮತ್ತೊಂದು ವಿಶೇಷತೆಗೆ ಸಾಕ್ಷಿಯಾಯಿತು. ವಿಶ್ವಕವಿ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾದ ‘ಪೊಚೀಶೆ ಬೋಯ್ಶಾಖ್’ ಅಂದೇ ಈ ಪ್ರಮಾಣವಚನ ಸಮಾರಂಭ ನಡೆದಿದ್ದು, ಬಂಗಾಳದ ಸಾಂಸ್ಕೃತಿಕ ಪರಂಪರೆ ಮತ್ತು ರಾಜಕೀಯ ಬದಲಾವಣೆಯ ಸಂಗಮದಂತೆ ಕಂಡುಬಂದಿತು. ಒಟ್ಟಿನಲ್ಲಿ, ಸುವೇಂದು ಅಧಿಕಾರಿ ನೇತೃತ್ವದ ನೂತನ ಸರ್ಕಾರವು ಬಂಗಾಳದ ಅಭಿವೃದ್ಧಿಯ ಪಥದಲ್ಲಿ ಎಂತಹ ಬದಲಾವಣೆ ತರಲಿದೆ ಎಂಬುದನ್ನು ಕಾದು ನೋಡಬೇಕಿದೆ.

The post ಬಂಗಾಳದಲ್ಲಿ ಕೇಸರಿ ಪರ್ವ; ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ appeared first on Samyukta Karnataka.

ಚುನಾವಣಾ ಕಣದಲ್ಲಿ ʻವಾಪಾಸ್‌ ಜಾವೋʼ ವಾರ್:‌ ಅಮಿತ್‌ ಶಾ ಮತ್ತು ಮಹುವಾ ಮೊಯಿತ್ರಾ ನಡುವೆ ವಾಕ್ಸಮರ!
ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ರಾಜಕೀಯ ವಾಗ್ವಾದಗಳು ತಾರಕಕ್ಕೇರಿವೆ. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರದ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಉದ್ದೇಶಿಸಿ ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಜಕೀಯ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

ಪಶ್ಚಿಮ ಬಂಗಾಳದ ಅರಾಮ್‌ಬಾಗ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಶಾ ವೇದಿಕೆಯ ಮೇಲೆ ಮಾತನಾಡುತ್ತಿದ್ದಾಗ, ಅಲ್ಲಿನ ಭದ್ರತಾ ವ್ಯವಸ್ಥೆಯಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರನ್ನು ಕಂಡು, “ಓ… ಬಂಗಾಳ ಪೊಲೀಸರೇ, ಜರಾ ವಾಪಾಸ್ ಜಾವೋ” (ಬಂಗಾಳ ಪೊಲೀಸರೇ, ಸ್ವಲ್ಪ ಹಿಂದೆ ಸರಿಯಿರಿ) ಎಂದು ಹೇಳಿದ್ದರು. ಶಾ ಈ ನೇರ ನುಡಿಗಳು ಅಲ್ಲಿ ನೆರೆದಿದ್ದ ಜನಸಮೂಹದಲ್ಲಿ ಭಾರಿ ಹರ್ಷೋದ್ದಾರ ಮೂಡಿಸಿತ್ತು. ಈ ವಿಡಿಯೋ ತುಣುಕು ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಮಾತಿನ ಸಮರಕ್ಕೆ ನಾಂದಿ ಹಾಡಿದೆ.

ಮಹುವಾ ಮೊಯಿತ್ರಾ ತಿರುಗೇಟು: ಅಮಿತ್ ಶಾ ಈ ಹೇಳಿಕೆಗೆ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಶಾ ‘ವಾಪಾಸ್ ಜಾವೋ’ ಎಂಬ ಪದವನ್ನೇ ಬಳಸಿ ತಿರುಗೇಟು ನೀಡಿದ್ದು, “ಅರೆ ಓ ಮೋಟಾಭಾಯಿ… ಸ್ವಲ್ಪ ಕೇಳಿ… ನೀವೇ ದಿಲ್ಲಿಗೆ ವಾಪಾಸ್ ಹೋಗಿ”, ಎಂದು ‘ಎಕ್ಸ್’ (X) ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಪೊಲೀಸರನ್ನು ಗೌರವಿಸದ ಕೇಂದ್ರ ನಾಯಕರ ನಡೆಗೆ ಟಿಎಂಸಿ ಆಕ್ರೋಶ ವ್ಯಕ್ತಪಡಿಸಿದೆ.

ಚುನಾವಣಾ ಕಣದಲ್ಲಿ ಬಿಜೆಪಿಯ ವಿಶ್ವಾಸ: ಮೊದಲ ಹಂತದ ಮತದಾನದ ಬಳಿಕ ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ಬಿಜೆಪಿಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಹಾಗೇ ಮೊದಲ ಹಂತದಲ್ಲಿ ದಾಖಲಾದ ಭಾರಿ ಮತದಾನವು (ಸುಮಾರು ಶೇ. 91.78) ಆಡಳಿತ ವಿರೋಧಿ ಅಲೆ ಮತ್ತು ಬಿಜೆಪಿಗೆ ಸಿಗುತ್ತಿರುವ ಬೆಂಬಲದ ಸಂಕೇತ ಎಂದು ಶಾ ವಿಶ್ಲೇಷಿಸಿದರು.

ಅಲ್ಲದೇ.. ಮತದಾರರಿಗೆ ತೊಂದರೆ ನೀಡುವ ಅಧಿಕಾರಿಗಳ ವಿರುದ್ಧ ಮೇ 5ರ ನಂತರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಪಶ್ಚಿಮ ಬಂಗಾಳದ ಚುನಾವಣೆ ಕೇವಲ ಮತದಾನಕ್ಕೆ ಸೀಮಿತವಾಗದೆ, ಕೇಂದ್ರ ಮತ್ತು ರಾಜ್ಯದ ಅಧಿಕಾರ ಕೇಂದ್ರಗಳ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಅಮಿತ್ ಶಾ ಈ ಒಂದು ಸಣ್ಣ ಹೇಳಿಕೆಯು ಈಗ ಬಂಗಾಳದ ರಾಜಕೀಯ ಅಖಾಡದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

The post ಚುನಾವಣಾ ಕಣದಲ್ಲಿ ʻವಾಪಾಸ್‌ ಜಾವೋʼ ವಾರ್:‌ ಅಮಿತ್‌ ಶಾ ಮತ್ತು ಮಹುವಾ ಮೊಯಿತ್ರಾ ನಡುವೆ ವಾಕ್ಸಮರ! appeared first on Samyukta Karnataka.

ಟಿಎಂಸಿ vs ಬಿಜೆಪಿ; ಬಂಗಾಳ ಗದ್ದುಗೆಗೆ ಭಾರೀ ಪೈಪೋಟಿ, ಮಮತಾಗೆ ಬೈ-ಬೈ ಎಂದ ಶಾ!
ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯ ಮುನ್ನ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಟಿಎಂಸಿ (ತೃಣಮೂಲ ಕಾಂಗ್ರೆಸ್) ಹಾಗೂ ಪ್ರಮುಖ ವಿರೋಧ ಪಕ್ಷ ಬಿಜೆಪಿಯ ನಡುವೆ ಕಠಿಣ ಪೈಪೋಟಿ ನಿರೀಕ್ಷೆಯಾಗಿದೆ. ನಂದಿಗ್ರಾಮ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸುಭೇಂದು ಅಧಿಕಾರಿ ಅವರ ನಾಮಪತ್ರ ಸಲ್ಲಿಕೆಗೆ ಹಾಜರಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಹತ್ವದ ರಾಜಕೀಯ ಘೋಷಣೆಗಳನ್ನು ಮಾಡಿದ್ದಾರೆ.

ಮುಂದಿನ 15 ದಿನಗಳು ನಾನು ಪಶ್ಚಿಮ ಬಂಗಾಳದಲ್ಲೇ ಉಳಿದು ಮಮತಾಗೆ ಬೈ-ಬೈ ಹೇಳಿಯೇ ಬರ್ತೀನಿ. ಚುನಾವಣಾ ಪ್ರಚಾರ ಮತ್ತು ಸಂಘಟನೆ ಕಾರ್ಯಗಳನ್ನು ನೇರವಾಗಿ ಮೇಲ್ವಿಚಾರಣೆ ಮಾಡುತ್ತೇನೆ ಎಂದು ಹೇಳಿದರು. ಅವರು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿರುವುದಾಗಿ ತಿಳಿಸಿ, ಬಹುತೇಕ ಎಲ್ಲ ಕಡೆ ಜನರಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ. ಬಂಗಾಳದ ಜನರು ಟಿಎಂಸಿಯ ಗೂಂಡಾಗಿರಿಯಿಂದ ಸಂಪೂರ್ಣವಾಗಿ ಬೇಸತ್ತಿದ್ದಾರೆ, ಆಗಾಗ ಸ್ಫೋಟಗಳು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಬಿಜೆಪಿ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುತ್ತದೆ, ಅಭಿವೃದ್ಧಿಯ ಹೊಸ ಅಲೆಯನ್ನು ತರುತ್ತದೆ. ಇದರಿಂದ ಬಂಗಾಳವುತನ್ನ ಹಿಂದಿನ ಗುರುತನ್ನು ಮರಳಿ ಪಡೆಯಬಹುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

ರಾಜಕೀಯ ವಾತಾವರಣ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿರುವ ಹಿನ್ನೆಲೆ, ಎರಡೂ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯಗಳನ್ನು ಕೈಗೊಂಡಿವೆ. ಬಿಜೆಪಿಯು ಉದ್ಯೋಗ, ಭದ್ರತೆ ಮತ್ತು ಅಭಿವೃದ್ಧಿ ವಿಚಾರಗಳನ್ನು ಪ್ರಮುಖ ಅಸ್ತ್ರಗಳಾಗಿ ಬಳಸುತ್ತಿದ್ದು, ಟಿಎಂಸಿ ತನ್ನ ಕಲ್ಯಾಣ ಯೋಜನೆಗಳು ಮತ್ತು ರಾಜ್ಯದ ಪ್ರಗತಿಯನ್ನು ಹೈಲೈಟ್ ಮಾಡುತ್ತಿದೆ.

ಮುಂದಿನ ದಿನಗಳಲ್ಲಿ ಪ್ರಮುಖ ನಾಯಕರ ರ್ಯಾಲಿಗಳು, ಸಾರ್ವಜನಿಕ ಸಭೆಗಳು ಮತ್ತು ತಂತ್ರಗಾರಿಕಾ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆ ಇದೆ. 2026ರ ಚುನಾವಣೆ ಪಶ್ಚಿಮ ಬಂಗಾಳದ ರಾಜಕೀಯ ದಿಕ್ಕನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಲಿದೆ.

The post ಟಿಎಂಸಿ vs ಬಿಜೆಪಿ; ಬಂಗಾಳ ಗದ್ದುಗೆಗೆ ಭಾರೀ ಪೈಪೋಟಿ, ಮಮತಾಗೆ ಬೈ-ಬೈ ಎಂದ ಶಾ! appeared first on Samyukta Karnataka.

ಉಪಚುನಾವಣೆ ಗದ್ದಲದಲ್ಲಿ ಶಾ ಎಂಟ್ರಿ; ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ, ಎದುರಾಳಿಗಳಿಗೆ ಎಚ್ಚರಿಕೆ!
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿರುವ ಸಂದರ್ಭದಲ್ಲಿ, ನಾಳೆ (ಶುಕ್ರವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ರಾಜ್ಯ ರಾಜಕೀಯ ಚಟುವಟಿಕೆಗಳಿಗೆ ಹೊಸ ತಿರುವು ನೀಡುವ ಸೂಚನೆ ನೀಡುತ್ತಿದೆ. ಈಗಾಗಲೇ ರಾಜಕೀಯ ಪಕ್ಷಗಳು ತೀವ್ರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಬೆನ್ನಲ್ಲೇ, ಇಂತಹ ಹೈಪ್ರೊಫೈಲ್ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.

ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಅವರು, ಅಲ್ಲಿಂದಲೇ ನೆಲಮಂಗಲ ತಾಲೂಕಿನ ನಗರೂರಿನ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ. ನಗರೂರಿನಲ್ಲಿರುವ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಇದು ಕೇವಲ ಶೈಕ್ಷಣಿಕ ಕಾರ್ಯಕ್ರಮವಲ್ಲ, ರಾಜಕೀಯವಾಗಿ ಸಹ ಮಹತ್ವ ಪಡೆದಿದೆ ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಎಂಇಯು ಕಾನ್ಫರೆನ್ಸ್ ಸಭಾಂಗಣದಲ್ಲಿ ಪ್ರಮುಖ ಎಎಸ್‌ಎಲ್ (ASL) ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಉಪಚುನಾವಣೆಗಳ ತಂತ್ರಗಳು ಹಾಗೂ ಸಂಘಟನೆ ಬಲವರ್ಧನೆ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ನೆಲಮಂಗಲ ಹಾಗೂ ನಗರೂರು ಸುತ್ತಮುತ್ತ ಭದ್ರತಾ ವ್ಯವಸ್ಥೆಯನ್ನು ಕಡ್ಡಾಯವಾಗಿ ಬಲಪಡಿಸಲಾಗಿದೆ. ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿದ್ದು, ಸಂಚಾರ ನಿಯಂತ್ರಣ ಕ್ರಮಗಳನ್ನೂ ಕೈಗೊಂಡಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜಕೀಯ ದೃಷ್ಟಿಯಿಂದ ನೋಡಿದರೆ, ಉಪಚುನಾವಣೆಗಳ ಮಧ್ಯೆ ನಡೆಯುತ್ತಿರುವ ಈ ಭೇಟಿ ಬಿಜೆಪಿಗೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಸಾಧ್ಯತೆ ಇದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ತಮ್ಮ ಪ್ರಚಾರ ತಂತ್ರಗಳನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆ ನೀಡಿವೆ.

ಒಟ್ಟಾರೆ, ಅಮಿತ್ ಶಾ ಅವರ ಈ ಭೇಟಿ ಕೇವಲ ಆಡಳಿತಾತ್ಮಕ ಕಾರ್ಯಕ್ರಮವಷ್ಟೇ ಅಲ್ಲದೆ, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗಳು ಮತ್ತು ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆಯಿದೆ. ಉಪಚುನಾವಣೆಗಳ ಫಲಿತಾಂಶದ ಮೇಲೆ ಇದರ ಪರಿಣಾಮ ಏನೆಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

The post ಉಪಚುನಾವಣೆ ಗದ್ದಲದಲ್ಲಿ ಶಾ ಎಂಟ್ರಿ; ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ, ಎದುರಾಳಿಗಳಿಗೆ ಎಚ್ಚರಿಕೆ! appeared first on Samyukta Karnataka.