#BelagaviSession Archives - Samyukta Karnataka

ಬೆಳಗಾವಿ ಅಧಿವೇಶನದ ಪ್ರತಿಗಂಟೆಗೆ 24 ಲಕ್ಷ ಪೋಲು
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕಳೆದ ಡಿ. 9ರಿಂದ 19ರವರೆಗೆ ನಡೆದ 10 ದಿನಗಳ ಚಳಿಗಾಲದ ಅಧಿವೇಶನದ ಪ್ರತಿ ಗಂಟೆಗೆ 24 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ಈ ಬಾರಿಯ ಅಧಿವೇಶನಕ್ಕೆ ರಾಜ್ಯದ ಬೊಕ್ಕಸದಿಂದ ಒಟ್ಟು 27,78,56,669 (ಸುಮಾರು 28 ಕೋಟಿ) ರೂಪಾಯಿಗಳನ್ನು ಖರ್ಚು ಮಾಡಲಾಗಿದೆ.

ಕೇವಲ 115 ಗಂಟೆ 45 ನಿಮಿಷಗಳ ಕಾಲ ನಡೆದ ಉಭಯ ಸದನಗಳ ಕಲಾಪವನ್ನು ಲೆಕ್ಕ ಹಾಕಿದರೆ, ಸರ್ಕಾರ ಪ್ರತಿ ಒಂದು ಗಂಟೆಗೆ ಅಂದಾಜು 24 ಲಕ್ಷ ರೂಪಾಯಿಗಳನ್ನು ವ್ಯಯಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪ್ರತಿ ಗಂಟೆಯ ವೆಚ್ಚದಲ್ಲಿ 4 ಲಕ್ಷ ರೂ.ಗಳಷ್ಟು ಏರಿಕೆಯಾಗಿರುವುದು ಕಳವಳಕಾರಿ ಸಂಗತಿ ಎಂದರು.

ಇದನ್ನೂ ಓದಿ: ಕೆ.ಎಸ್. ಈಶ್ವರಪ್ಪಗೆ ಮತ್ತೆ ಬೆದರಿಕೆ ಕರೆ, ‘ವೈ’ ಶ್ರೇಣಿಯ ಭದ್ರತೆಗೆ ಆಗ್ರಹ

ಗಣ್ಯರ ವಸತಿಗಾಗಿ 783 ಲಕ್ಷ, ಊಟ-ಉಪಹಾರಕ್ಕಾಗಿ 275 ಲಕ್ಷ, ಪೊಲೀಸ್ ಭದ್ರತೆಗಾಗಿ 924 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳಿಗಾಗಿ 687 ಲಕ್ಷ ರೂಪಾಯಿಗಳನ್ನು ಬಳಸಲಾಗಿದೆ.

ಜನಪ್ರತಿನಿಧಿಗಳಿಗೆ ಕಿಮೀಗೆ 35 ರೂ. ಪ್ರಯಾಣ ಭತ್ಯೆ ಹಾಗೂ ದಿನಕ್ಕೆ 2500 ರೂ. ದಿನಭತ್ಯೆ ನೀಡಲಾಗುತ್ತಿದೆ. ಈ ಭಾಗದ ಜನರ ನಿರೀಕ್ಷೆಯಂತೆ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಗಂಭೀರ ಚರ್ಚೆಗಳು ನಡೆಯುವ ಬದಲು, ತೆರಿಗೆದಾರರ ಹಣವು ಹೋಟೆಲ್ ಮಾಲೀಕರು ಮತ್ತು ಗುತ್ತಿಗೆದಾರರ ಪಾಲಾಗುತ್ತಿದೆ ಎಂದು ಗಡಾದ್ ಕಿಡಿಕಾರಿದ್ದಾರೆ.

The post ಬೆಳಗಾವಿ ಅಧಿವೇಶನದ ಪ್ರತಿಗಂಟೆಗೆ 24 ಲಕ್ಷ ಪೋಲು appeared first on Samyukta Karnataka.

BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ
ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್‌ (Below Poverty Line) ಕಾರ್ಡ್ ಹೊಂದಿರುವ ಕುಟುಂಬಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬಿಪಿಎಲ್‌ ಕಾರ್ಡ್‌ಗಳ ಆದಾಯ ಮಿತಿಯನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾನದಂಡದಂತೆ ಬಿಪಿಎಲ್‌ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಆದರೆ ಪ್ರಸ್ತುತ ಕೂಲಿ ಕಾರ್ಮಿಕರಿಗೆ ದಿನಕ್ಕೆ ಸರಾಸರಿ ₹500 ಕೂಲಿ ದೊರೆಯುತ್ತಿರುವುದರಿಂದ, ಅವರ ವಾರ್ಷಿಕ ಆದಾಯವೇ ₹1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ವಾಸ್ತವಾಂಶವನ್ನು ಗಮನದಲ್ಲಿಟ್ಟುಕೊಂಡು, ಬಿಪಿಎಲ್‌ ಕಾರ್ಡ್ ಆದಾಯ ಮಿತಿಯನ್ನು ಮರುಪರಿಶೀಲನೆ ಮಾಡಬೇಕಾದ ಅಗತ್ಯತೆ ಎದುರಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: “5 ವರ್ಷ ನಾನೇ ಬಾಸ್..!” ಕುರ್ಚಿ ಕದನದ ಗೊಂದಲಕ್ಕೆ ಸಿದ್ದರಾಮಯ್ಯ ಫುಲ್ ಸ್ಟಾಪ್

ಕೇಂದ್ರ ಸರ್ಕಾರವು ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿರುವುದಾಗಿ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸದ್ಯ 4.53 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಹಾಗೂ 1.25 ಲಕ್ಷ ಎಪಿಎಲ್‌ ಕಾರ್ಡ್‌ಗಳು ಇವೆ. ರಾಜ್ಯದ ಒಟ್ಟು ಜನಸಂಖ್ಯೆಗೆ ಹೋಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್‌ ಕಾರ್ಡ್ ಪಡೆದಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ.

ರಾಜ್ಯವು ಜಿಎಸ್‌ಟಿ ಪಾವತಿ ಹಾಗೂ ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಇಂತಹ ಆರ್ಥಿಕ ಪರಿಸ್ಥಿತಿಯಲ್ಲಿ ಬಿಪಿಎಲ್‌ ಕುಟುಂಬಗಳ ಪ್ರಮಾಣ ಶೇ.50 ರಷ್ಟಿರಬೇಕೆಂಬ ನಿರೀಕ್ಷೆ ಇತ್ತು. ಆದರೆ ಅದಕ್ಕಿಂತ ಬಹಳ ಹೆಚ್ಚು ಕುಟುಂಬಗಳು ಬಿಪಿಎಲ್‌ ಕಾರ್ಡ್ ಹೊಂದಿರುವುದು ಸರ್ಕಾರದ ಗಮನ ಸೆಳೆದಿದೆ ಎಂದು ಸಚಿವರು ಹೇಳಿದರು.

ಈಗಾಗಲೇ 2017ರಲ್ಲಿ ರಾಜ್ಯ ಸರ್ಕಾರವು ಆದ್ಯತಾ ಪಡಿತರ ಚೀಟಿಗಳನ್ನು ನೀಡುವ ಹಾಗೂ ಹೊರಗಿಡುವ ಕುರಿತು ಸ್ಪಷ್ಟ ಮಾನದಂಡಗಳನ್ನು ರೂಪಿಸಿದೆ. ಈ ನಿಯಮಗಳ ಪ್ರಕಾರ ಸರ್ಕಾರಿ, ಅನುದಾನಿತ ಸಂಸ್ಥೆಗಳು, ಮಂಡಳಿ, ನಿಗಮ ಹಾಗೂ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸುವ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್ ನೀಡಲಾಗುವುದಿಲ್ಲ.

ಇದನ್ನೂ ಓದಿ: 600 ಬಿಲಿಯನ್‌‌ ಡಾಲರ್ ಸಂಪತ್ತು: ಜಗತ್ತಿಗೆ ಶ್ರೀಮಂತ ಎಲಾನ್ ಮಸ್ಕ್

ಆದಾಯ ಮಿತಿಯನ್ನು ಪರಿಷ್ಕರಿಸುವ ಕುರಿತು ಚಿಂತನೆ ನಡೆಯುತ್ತಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು.

ಸದ್ಯ ವೈದ್ಯಕೀಯ ಆಧಾರದ ಮೇಲೆ ಮಾತ್ರ ಹೊಸದಾಗಿ ಬಿಪಿಎಲ್‌ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎಂಬ ಕಾರಣದಿಂದ ಬಿಪಿಎಲ್‌ ಕಾರ್ಡ್ ರದ್ದುಪಡಿಸಿದ್ದರೆ, ಆ ನೌಕರ ಕುಟುಂಬದೊಂದಿಗೆ ವಾಸವಾಗಿಲ್ಲ ಎಂಬುದನ್ನು ಉಲ್ಲೇಖಿಸಿ ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ, 15 ದಿನಗಳೊಳಗೆ ಬಿಪಿಎಲ್‌ ಕಾರ್ಡ್ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 2023–24ನೇ ಸಾಲಿನವರೆಗೆ 48,715 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್ ವಿತರಿಸಲಾಗಿದೆ. 2023ರಿಂದ ಜನವರಿ 2025ರವರೆಗೆ ಒಟ್ಟು 688 ಬಿಪಿಎಲ್‌ ಕಾರ್ಡ್‌ಗಳನ್ನು ವಿತರಿಸಲಾಗಿದ್ದು, 99 ಕುಟುಂಬಗಳ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 930 ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕರಾದ ರಾಜೇಶ್ ನಾಯಕ್ ಹಾಗೂ ಬಾಲಕೃಷ್ಣ.ಸಿ.ಎನ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡುವ ವೇಳೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಈ ವಿವರಗಳನ್ನು ಸದನಕ್ಕೆ ತಿಳಿಸಿದರು.

The post BPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ appeared first on Samyukta Karnataka.

ತೀವ್ರ ವಿರೋಧದ ನಡುವೆಯೇ ದ್ವೇಷ ಭಾಷಣ ವಿಧೇಯಕ ಅಂಗೀಕಾರ
ಸದನದಲ್ಲಿ ಮಾತಿನ ಸಮರ, ಗದ್ದಲ–ಧರಣಿ; ಆಡಳಿತ–ವಿಪಕ್ಷ ಮುಖಾಮುಖಿ

ಬೆಳಗಾವಿ (ಸುವರ್ಣಸೌಧ): ಬಿಜೆಪಿ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಪ್ರತಿಭಟನೆಗಳ ನಡುವೆಯೇ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ವಿಧಾನಸಭೆ ಇಂದು ಅಂಗೀಕರಿಸಿತು. ವಿಧೇಯಕ ಮಂಡನೆ ಹಾಗೂ ಚರ್ಚೆ ಸಂದರ್ಭದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆಯಿತು.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಧೇಯಕದ ಉದ್ದೇಶ ಮತ್ತು ಅಂಶಗಳನ್ನು ವಿವರಿಸಿದರು. ಸಮಾಜದಲ್ಲಿ ದ್ವೇಷ ಭಾಷಣಗಳು ಮತ್ತು ದ್ವೇಷ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ ಈ ಕಾಯ್ದೆ ಅಗತ್ಯವಿದೆ ಎಂದು ಅವರು ಸಮರ್ಥಿಸಿದರು. ಆದರೆ ಇದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಡಾ. ಹೆಚ್.ಸಿ. ಮಹಾದೇವಪ್ಪ ಮಂಡಿಸಿದ್ದ ವಿಧೇಯಕ ಜನಪರವಾಗಿತ್ತು. ಆದರೆ ಡಾ. ಪರಮೇಶ್ವರ್ ಮಂಡಿಸಿರುವುದು ದ್ವೇಷ ಹುಟ್ಟಿಸುವ ವಿಧೇಯಕ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಹಣ ವಿಳಂಬ: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ

ಅಂಬೇಡ್ಕರ್ ವಿಚಾರದಲ್ಲಿ ತೀವ್ರ ವಾಗ್ವಾದ: ವಿಧೇಯಕ ಚರ್ಚೆ ವೇಳೆ ಸದನದಲ್ಲಿ ಅಂಬೇಡ್ಕರ್ ವಿಚಾರವೂ ಪ್ರಸ್ತಾಪಕ್ಕೆ ಬಂತು. ಬಿಜೆಪಿ ಶಾಸಕ ಸುರೇಶ್ ಕುಮಾರ್, ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷವೇ ಎಂದು ಆರೋಪಿಸಿದರು. ಇದಕ್ಕೆ ತಕ್ಷಣ ತಿರುಗೇಟು ನೀಡಿದ ಸಚಿವ ಸಂತೋಷ ಲಾಡ್, ಅಂಬೇಡ್ಕರ್ ಅವರನ್ನು ದೇಶದ ಮೊದಲ ಕಾನೂನು ಸಚಿವರನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂದು ಪ್ರತಿಕ್ರಿಯಿಸಿದರು. ಈ ಮಾತಿನ ಬಳಿಕ ಸದನದಲ್ಲಿ ಗದ್ದಲ ತೀವ್ರಗೊಂಡಿತು.

ಕರಾವಳಿ ಹೇಳಿಕೆಗೂ ಭಾರಿ ಆಕ್ರೋಶ: ಇದೇ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಭಾಷಣ ಮುಂದುವರಿಸುತ್ತಿದ್ದಾಗ ಸಚಿವ ಬೈರತಿ ಸುರೇಶ್ ಕರಾವಳಿಯಲ್ಲಿ ಬೆಂಕಿ ಹಾಕಿದವರು ಇಲ್ಲಿಯೂ ಬಂದು ಬೆಂಕಿ ಹಾಕಬೇಡಿ ಎಂದು ಹೇಳಿದ ಮಾತು ಬಿಜೆಪಿ ಶಾಸಕರನ್ನು ಮತ್ತಷ್ಟು ಕೆರಳಿಸಿತು. ವಿಶೇಷವಾಗಿ ಕರಾವಳಿ ಭಾಗದ ಬಿಜೆಪಿ ಶಾಸಕರು ಅಕ್ಷರಶಃ ಸಿಡಿದೆದ್ದರು. ಯಾರು ಬೆಂಕಿ ಹಚ್ಚಿದ್ದು? ಇಡೀ ಕರಾವಳಿಯನ್ನು ಅವಮಾನ ಮಾಡಿದ್ದಾರೆ. ಮೊದಲ ದ್ವೇಷ ಭಾಷಣದ ಕೇಸ್ ಬೈರತಿ ಸುರೇಶ್ ಮೇಲೆಯೇ ಹಾಕಬೇಕು ಎಂದು ಬಿಜೆಪಿ ಸದಸ್ಯರು ಒಟ್ಟಾಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಔಟ್‌ಗೋಯಿಂಗ್‌ ಚೀಫ್‌ ಮಿನಿಸ್ಟರ್‌

ಈ ಸಂದರ್ಭದಲ್ಲಿ ಕೆಲವು ಬಿಜೆಪಿ ಸದಸ್ಯರು ಸ್ಪೀಕರ್‌ರ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು. ನೀವು ಕರಾವಳಿ ಭಾಗದವರಾಗಿದ್ದರೂ ಸುಮ್ಮನೆ ಕುಳಿತಿದ್ದೀರಿ. ನಮ್ಮ ಕರಾವಳಿಗೆ ಕೆಟ್ಟ ಹೆಸರು ತರುವ ರೀತಿಯಲ್ಲಿ ಮಾತನಾಡಲಾಗಿದೆ ಎಂದು ಆಕ್ಷೇಪಿಸಿದರು.

ಧರಣಿ–ಪ್ರತಿಭಟನೆಯ ನಡುವೆಯೂ ವಿಧೇಯಕ ಅಂಗೀಕಾರ: ಸ್ಪೀಕರ್ ಅವರು ಬೈರತಿ ಸುರೇಶ್ ಹೇಳಿಕೆಯನ್ನು ಕಡತದಿಂದ ತೆಗೆದುಹಾಕುವುದಾಗಿ ಭರವಸೆ ನೀಡಿದರೂ ಬಿಜೆಪಿ ಸದಸ್ಯರು ಸಮಾಧಾನಗೊಂಡಿಲ್ಲ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸದನದ ಭಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ಆದರೆ ಇಂತಹ ಗದ್ದಲ ಮತ್ತು ಪ್ರತಿಭಟನೆಯ ನಡುವೆಯೂ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ವಿಧಾನಸಭೆ ಅಂಗೀಕರಿಸಿತು. ಈ ವಿಧೇಯಕ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

The post ತೀವ್ರ ವಿರೋಧದ ನಡುವೆಯೇ ದ್ವೇಷ ಭಾಷಣ ವಿಧೇಯಕ ಅಂಗೀಕಾರ appeared first on Samyukta Karnataka.

ಸರ್ಕಾರ ರೈತರಪರ: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ತೀಕ್ಷ್ಣ ಕ್ರಮ
ಮೈಕ್ರೋ ಫೈನಾನ್ಸ್ ಕಿರುಕುಳ ಖಂಡನೆ: ಸುವರ್ಣಸೌಧದ ಬಳಿ ರೈತ ಸಂಘದ ಧರಣಿಗೆ ಸಚಿವ ಎಂ.ಬಿ. ಪಾಟೀಲ್ ಭೇಟಿ – ಕಟ್ಟುನಿಟ್ಟಿನ ಕ್ರಮದ ಭರವಸೆ

ಬೆಳಗಾವಿ (ಸುವರ್ಣಸೌಧ): ಖಾಸಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಕೆಲವು ಸಂಘಟನೆಗಳು ರೈತರ ಮೇಲೆ ನಡೆಸುತ್ತಿರುವ ಗುಂಡಾವರ್ತನೆ, ಮಾನಸಿಕ ಕಿರುಕುಳ ಮತ್ತು ಅಕ್ರಮ ಹಣ ವಸೂಲಾತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ (ರಿ) ರಾಣೆಬೆನ್ನೂರು ತಾಲ್ಲೂಕು ಘಟಕದ ವತಿಯಿಂದ ಸುವರ್ಣಸೌಧದ ಬಳಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿ, ರೈತರ ಅಹವಾಲು ಆಲಿಸಿ ಮನವಿಯನ್ನು ಸ್ವೀಕರಿಸಿದರು.

ಧರಣಿಯಲ್ಲಿ ಭಾಗವಹಿಸಿದ್ದ ರೈತರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ, ಬೆದರಿಕೆ ಹಾಗೂ ಆತ್ಮಹತ್ಯೆಗೆ ದಾರಿ ಮಾಡಿಕೊಡುವಂತಹ ಕಿರುಕುಳಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ವಿಶೇಷವಾಗಿ ಗಡಿಭಾಗ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೆರೆ ರಾಜ್ಯಗಳ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಿಯಮಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ವ್ಯವಹಾರ ನಡೆಸುತ್ತಿರುವುದು ರೈತರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಹೆಸರನ್ನು ಅಳಿಸಿ ಗ್ರಾಮೀಣರ ಹಕ್ಕು ಕಸಿಯುವ VB-G RAM G ಬಿಲ್: ಸಚಿವ ಎಂ.ಬಿ. ಪಾಟೀಲ್ ಕಿಡಿ

ಸುಗ್ರೀವಾಜ್ಞೆ ಮೂಲಕ ಕಟ್ಟುನಿಟ್ಟಿನ ಕ್ರಮ: ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ರೈತರಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ನಮ್ಮ ಸರ್ಕಾರ ಈಗಾಗಲೇ ಸುಗ್ರೀವಾಜ್ಞೆ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಉಲ್ಲಂಘಿಸಿ ರೈತರನ್ನು ಹಿಂಸಿಸುವ ಯಾವುದೇ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಅಕ್ರಮ ವ್ಯವಹಾರಗಳಿಗೆ ಬ್ರೇಕ್: ನೆರೆ ರಾಜ್ಯಗಳ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ರಾಜ್ಯದ ಗಡಿಭಾಗಗಳಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳು ಸಾಲಗಾರರ ಮೇಲೆ ಒತ್ತಡ, ಬೆದರಿಕೆ ಹಾಗೂ ಅವಮಾನಕಾರಿ ವರ್ತನೆ ನಡೆಸುತ್ತಿರುವ ದೂರುಗಳು ಬಂದಲ್ಲಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ಮೂಲಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: 1600 PSI ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ: ಡಾ.ಜಿ.ಪರಮೇಶ್ವರ್

ರೈತರ ಪರ ಸರ್ಕಾರ ಬದ್ಧ: ನಮ್ಮ ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿದೆ. ರೈತರ ಹಿತಾಸಕ್ತಿಯ ರಕ್ಷಣೆಗೆ ಯಾವುದೇ ಹಂತಕ್ಕೂ ಹೋಗಲು ಸರ್ಕಾರ ಹಿಂದೇಟು ಹಾಕುವುದಿಲ್ಲ. ಈ ವಿಷಯವನ್ನು ಮಾನ್ಯ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿ ಇನ್ನಷ್ಟು ತೀಕ್ಷ್ಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಂ.ಬಿ. ಪಾಟೀಲ್ ಹೇಳಿದರು.

ಧರಣಿ ಕೈಬಿಡುವಂತೆ ಮನವಿ: ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವ ಭರವಸೆಯನ್ನು ನೀಡಿದ ಸಚಿವರು, ಈ ಹಿನ್ನೆಲೆಯಲ್ಲಿ ಧರಣಿಯನ್ನು ಕೈಬಿಡುವಂತೆ ರೈತ ಸಂಘದ ಮುಖಂಡರಿಗೆ ಮನವಿ ಮಾಡಿದರು. ಸರ್ಕಾರದ ಕ್ರಮಗಳ ಮೇಲೆ ನಂಬಿಕೆ ಇಟ್ಟು, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

The post ಸರ್ಕಾರ ರೈತರಪರ: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ತೀಕ್ಷ್ಣ ಕ್ರಮ appeared first on Samyukta Karnataka.

ತೀವ್ರ ಹೊಟ್ಟೆನೋವು; ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದ ಸಿಎಂ
ಬೆಳಗಾವಿ: ಅಧಿವೇಶನ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ.

ಬೆಳಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಹಾಗೂ ಸಚಿವರ ಜತೆ ಬೆಳಗಾವಿಯಲ್ಲಿ ಧರಣಿ ಪ್ರತಿಭಟನೆ ನಡೆಸಿದ ಸಿಎಂ ಸಿದ್ದರಾಮಯ್ಯ, ನಂತರ ಬೆಳಗಿನ ಅವಧಿಯ ಅಧಿವೇಶನಕ್ಕೆ ಹಾಜರಾಗಿದ್ದರು. ಮಧ್ಯಾಹ್ನದ ಬಳಿಕ ಸಿದ್ದರಾಮಯ್ಯ ಅವರಿಗೆ ದಿಢೀರ್ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕಲಾಪಕ್ಕೆ ಹಾಜರಾಗಲಿಲ್ಲ.

ವೈದ್ಯರ ಸಲಹೆಯಂತೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಯೇ ಮುಖ್ಯಮಂತ್ರಿಗಳು ವಿಶ್ರಾಂತಿ ತೆಗೆದುಕೊಂಡರು. ಈ ವೇಳೆ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಬೈರತಿ ಸುರೇಶ್ ಇತರರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

The post ತೀವ್ರ ಹೊಟ್ಟೆನೋವು; ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದ ಸಿಎಂ appeared first on Samyukta Karnataka.

ಬೌದ್ಧ ಬಿಕ್ಕುಗಳಿಗೆ ಶೀಘ್ರವೇ ಮಾಸಿಕ ಸಂಭಾವನೆ
ಬೆಳಗಾವಿ: ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ ನೀಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.‌ ಜಮೀರ್ ಅಹ್ಮದ್‌ಖಾನ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಶಿವಕುಮಾರ್ ಕೆ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಫ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್‌ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

The post ಬೌದ್ಧ ಬಿಕ್ಕುಗಳಿಗೆ ಶೀಘ್ರವೇ ಮಾಸಿಕ ಸಂಭಾವನೆ appeared first on Samyukta Karnataka.

ಗೃಹಲಕ್ಷ್ಮಿ ಗದ್ದಲ: ಸುಸೂತ್ರ ಕಲಾಪಕ್ಕೆ ನಾಲ್ಕು ತಾಸುಗಳಷ್ಟು ವ್ಯತ್ಯಯ
ಬೆಳಗಾವಿ: ಗೃಹಲಕ್ಷ್ಮಿ ಬಾಕಿ ಕಂತುಗಳ ವಿಷಯವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಬುಧವಾರ ವಿಧಾನಸಭೆಯಲ್ಲಿ ಭಾರೀ ಚಕಮಕಿ ನಡೆಯಿತು. ಕಲಾಪ ಶುರುವಾಗುತ್ತಿದ್ದಂತೇ ನಡೆದ ಈ ಘಟನೆಯಿಂದಾಗಿ ಸುಸೂತ್ರ ಕಲಾಪಕ್ಕೆ ನಾಲ್ಕು ತಾಸುಗಳಷ್ಟು ವ್ಯತ್ಯಯ ಉಂಟಾಯಿತು.

ಸದನಕ್ಕೆ ಸರ್ಕಾರ ದಾರಿ ತಪ್ಪಿಸಿದೆ. ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಕಂತುಗಳನ್ನು ಹಾಕದೇ 1.26 ಕೋಟಿ ಫಲಾನುಭವಿಗಳಿಗೆ ಅನ್ಯಾಯ ಮಾಡಿದೆ. ಒಟ್ಟು ಐದು ಸಾವಿರ ಕೋಟಿ ರೂಪಾಯಿಗಳ ಲೆಕ್ಕ ಎಲ್ಲಿ ಹೋಯಿತು ಎಂಬ ಪ್ರಶ್ನೆ ಮೂಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೋರಬೇಕು ಎಂಬುದು ಪ್ರತಿಪಕ್ಷದ ಬೇಡಿಕೆಯಾಗಿತ್ತು.

ಗದ್ದಲಕ್ಕೆ ಕಾರಣ: ಗೃಹಲಕ್ಷ್ಮೀ ಕಂತುಗಳನ್ನು ಹಾಕುವಾಗ, ಮಧ್ಯದಲ್ಲಿ ಫೆಬ್ರುವರಿ ಹಾಗೂ ಮಾರ್ಚ್ ಎರಡು ತಿಂಗಳ ಕಂತುಗಳನ್ನು ಏಕೆ ಹಾಕಿಲ್ಲ ಎಂದು ಹುಬ್ಬಳ್ಳಿ ಸೆಂಟ್ರಲ್‌ನ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರಶ್ನಿಸಿದ್ದರು. ಆಗಸ್ಟ್‌ವರೆಗಿನ ಎಲ್ಲ ಕಂತುಗಳನ್ನೂ ಹಾಕಲಾಗಿದೆ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನ್ನು ವಿರೋಧಿಸಿ, ಕಂತುಗಳು ಬಾರದಿರುವ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ದಾಖಲೆಗಳನ್ನು ಸಲ್ಲಿಸಿದ್ದರು.

ಅಶೋಕ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಸದನಕ್ಕೆ ತಪ್ಪು ಮಾಹಿತಿ ಕೊಟ್ಟಿರುವುದಕ್ಕೆ ಸಚಿವರು ಕ್ಷಮೆ ಕೇಳಬೇಕು ಹಾಗೂ ಲೋಪವನ್ನು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಸ್ಪೀಕರ್ ಯು.ಟಿ. ಖಾದರ್ ಸಚಿವರಿಂದ ಸ್ಪಷ್ಟನೆ ಕೊಡಿಸುವುದಾಗಿ ಹೇಳಿದ್ದರು. ಕಳೆದ ವಾರದ ಕೊನೆಯಲ್ಲಿ ಹೇಳಿದ್ದರು.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೇ ಅಶೋಕ್ ವಿಷಯವನ್ನು ಕೈಗೆತ್ತಿಕೊಂಡು `ಸಚಿವರಿಂದ ಸ್ಪಷ್ಟನೆ ದೊರೆಯದೇ ಕಲಾಪಗಳನ್ನು ಕೈಗೆತ್ತಿಕೊಳ್ಳಲು ಸಮ್ಮತಿ ಇಲ್ಲ’ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ ಸದನದಲ್ಲಿ ಇರಲಿಲ್ಲ. ಹೀಗಾಗಿ ಕಲಾಪದ ಉಳಿದ ವಿಷಯಗಳತ್ತ ಸದನ ಹೊರಳಿದ್ದನ್ನು ಒಪ್ಪದ ವಿಪಕ್ಷ ಬಾವಿಗೆ ಇಳಿದು ಧರಣಿ ಆರಂಭಿಸಿತು. ಇದರಿಂದ ಕಲಾಪವನ್ನು ಮುಂದೂಡಬೇಕಾಯಿತು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಂದು ಕಲಾಪ ಶುರುವಾಗುತ್ತಿದ್ದಂತೇ ಅಶೋಕ್ ವಿಪಕ್ಷದ ನಿಲುವು ಪುನರುಚ್ಚರಿಸಿದರು. ತಪ್ಪಾಗಿರುವುದನ್ನು ಒಪ್ಪಿಕೊಂಡು ಸದನದ ಕ್ಷಮೆ ಕೋರಬೇಕು ಎಂದು ಪಟ್ಟು ಹಿಡಿದರು.

`ಎರಡು ತಿಂಗಳ ಕಂತುಗಳು ಉಳಿದಿರುವುದು ನಿಜ. ಆದಷ್ಟು ಬೇಗ ಈ ಕಂತುಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು. ಯಾರಿಗಾದರೂ ನೋವಾಗಿದ್ದರೆ ವಿಷಾದಿಸುವೆ’ ಎಂದು ಸಚಿವೆ ಹೆಬ್ಬಾಳಕರ್ ಹೇಳಿದ್ದು ವಿಪಕ್ಷಕ್ಕೆ ತೃಪ್ತಿ ತರಲಿಲ್ಲ. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಗ್ವಾದ ನಡೆಯಿತು. ವಿಷಾದ- ಕ್ಷಮೆ ಪದಗಳ ಜಿಜ್ಞಾಸೆಯಲ್ಲಿ ಒಂದು ತಾಸಿಗೂ ಮೀರಿ ಟೀಕೆ ಪ್ರತಿಟೀಕೆಗಳು ನಡೆದವು.

The post ಗೃಹಲಕ್ಷ್ಮಿ ಗದ್ದಲ: ಸುಸೂತ್ರ ಕಲಾಪಕ್ಕೆ ನಾಲ್ಕು ತಾಸುಗಳಷ್ಟು ವ್ಯತ್ಯಯ appeared first on Samyukta Karnataka.

ಗೃಹಲಕ್ಷ್ಮಿ ಯೋಜನೆ ಹಣ ವಿಳಂಬ: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ
ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯ – ತಪ್ಪು ಒಪ್ಪಿಕೊಂಡ ಸಚಿವೆ, ಶೀಘ್ರ ಪರಿಹಾರ ಭರವಸೆ

ಬೆಳಗಾವಿ (ಸುವರ್ಣಸೌಧ): ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಗೆ ಸಂಬಂಧಿಸಿದಂತೆ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ತೀವ್ರ ವಿರೋಧಕ್ಕೆ ಗುರಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ಸದನದಲ್ಲಿ ಸ್ಪಷ್ಟನೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಬೇಕಾದ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದು ಸತ್ಯ ಎಂದು ಸಚಿವೆ ಒಪ್ಪಿಕೊಂಡರು. ಈ ವಿಚಾರವನ್ನು ಪರಿಶೀಲನೆ ನಡೆಸಿದಾಗ ಕೆಲವು ಫಲಾನುಭವಿಗಳಿಗೆ ಇನ್ನೂ ಎರಡು ತಿಂಗಳ ಹಣ ಜಮೆಯಾಗಿಲ್ಲ ಎಂಬುದು ಬೆಳಕಿಗೆ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡಕ್ಕೆ ನಲುಗಿ ಯುವತಿ ಆತ್ಮಹತ್ಯೆ

ಹಣ ದುರುಪಯೋಗವಾಗಿಲ್ಲ – ಸಚಿವೆ ಸ್ಪಷ್ಟನೆ: ಈ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬೇರೆ ಯಾವುದೇ ಉದ್ದೇಶಕ್ಕೆ ವರ್ಗಾಯಿಸಲಾಗಿಲ್ಲ. ಯಾವುದೇ ದುರುಪಯೋಗವೂ ಆಗಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ವಿಷಯದಲ್ಲಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂಬ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಬೇಗ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ನೆನಪಿಸಿದರು.

ತಪ್ಪಿದ್ದರೆ ವಿಷಾದ: ನಾನು ಜವಾಬ್ದಾರಿಯ ಸ್ಥಾನದಲ್ಲಿದ್ದೇನೆ. ಸದನವನ್ನು ದಾರಿ ತಪ್ಪಿಸುವ ಉದ್ದೇಶ ನನಗಿಲ್ಲ. ನನ್ನ ಬಳಿ ಇದ್ದ ಮಾಹಿತಿಯ ಆಧಾರದಲ್ಲೇ ಉತ್ತರ ನೀಡಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇದನ್ನೂ ಓದಿ: ಹೈಕಮಾಂಡ್ ಸೂಚಿಸುವವರೆಗೂ ನಾನೇ ಮುಖ್ಯಮಂತ್ರಿ

ವಿರೋಧ ಪಕ್ಷಗಳಿಂದ ಕ್ಷಮೆ ಆಗ್ರಹ: ಸಚಿವರ ಈ ಉತ್ತರದ ವೇಳೆ ಅರವಿಂದ ಬೆಲ್ಲದ್ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಕ್ಷಮೆ ಕೇಳುವಂತೆ ಆಗ್ರಹಿಸಿದರು, ಇದರಿಂದ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಚಿವೆ ತಮ್ಮ ಹೇಳಿಕೆಯನ್ನು ಮುಂದುವರೆಸುತ್ತಾ, ಆರ್ಥಿಕ ಇಲಾಖೆಯೊಂದಿಗೆ ಮಾತನಾಡಿ ಹಣ ಇನ್ನೂ ಜಮೆಯಾಗದೇ ಇದ್ದರೆ ತಕ್ಷಣ ಬಿಡುಗಡೆ ಮಾಡಲು ಸೂಚಿಸಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ತಿದ್ದುಪಡಿ ಭರವಸೆ: ಎರಡು ತಿಂಗಳ ಹಣ ಪಾವತಿಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಶೀಘ್ರ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ ಸಚಿವೆ, ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಿಸುವುದೇ ಸರ್ಕಾರದ ಉದ್ದೇಶ ಎಂದು ಪುನರುಚ್ಚರಿಸಿದರು.

ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ

The post ಗೃಹಲಕ್ಷ್ಮಿ ಯೋಜನೆ ಹಣ ವಿಳಂಬ: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ appeared first on Samyukta Karnataka.

ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ
ಬೆಳಗಾವಿ (ಸುವರ್ಣಸೌಧ): ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್‌ ಸೇರಿದಂತೆ ವಿವಿಧ ಪಠ್ಯಕ್ರಮಗಳನ್ನು ಬೋಧಿಸುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷಾ ಕಲಿಕೆಗೆ ಕಡ್ಡಾಯವಾಗಿ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ಭಾಷಾ ಕಲಿಕಾ ಅಧಿನಿಯಮ–2015ನ್ನು ರಾಜ್ಯದಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಈ ಅಧಿನಿಯಮದ ಅನುಷ್ಠಾನಕ್ಕೆ ಸಂಬಂಧಿಸಿದ ನಿಯಮಗಳನ್ನು ಶಿಕ್ಷಣ ಇಲಾಖೆ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಿದೆ ಎಂದರು.

ಇದನ್ನೂ ಓದಿ: ಹೈಕಮಾಂಡ್ ಸೂಚಿಸುವವರೆಗೂ ನಾನೇ ಮುಖ್ಯಮಂತ್ರಿ

ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಶಾಲೆಗಳ ವಿರುದ್ಧ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ. ಅಧಿನಿಯಮ ಉಲ್ಲಂಘಿಸಿದ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರದಲ್ಲಿರುವ ‘ದಿ ಬೆಂಗಳೂರು ಇಂಟರ್‌ನ್ಯಾಷನಲ್ ಶಾಲೆ’ ಹಾಗೂ ದೊಡ್ಡಕಣ್ಣಹಳ್ಳಿಯ ‘ಇನೋವೇಟಿವ್ ಶಾಲೆ’ಗಳ ಮೇಲೆ ನಿಯಮಾನುಸಾರ ದಂಡ ವಿಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಖಾಸಗಿ ಶಾಲೆಗಳ ನೊಂದಣಿಯ ಸಂದರ್ಭದಲ್ಲಿ, ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸುವುದು ಕಡ್ಡಾಯವಾಗಿದ್ದು, ಈ ಷರತ್ತಿನ ಮೇರೆಗೆ ಶಾಲೆಗಳಿಗೆ ನೊಂದಣಿ ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿಯೂ ಸಹ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳನ್ನು ಕಟ್ಟುನಿಟ್ಟಾಗಿ ಅನ್ವಯಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಶಾಲೆಗಳು ಇತರೆ ಪಠ್ಯಕ್ರಮಗಳಿಗೆ ಸಂಯೋಜನೆ ಪಡೆಯಲು ನಿರಾಕ್ಷೇಪಣ ಪತ್ರ (NOC) ಕೋರಿ ಅರ್ಜಿ ಸಲ್ಲಿಸುವಾಗ, ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸುವುದಾಗಿ ಮುಚ್ಚಳಿಕೆ ಪತ್ರ ಸಲ್ಲಿಸಿ, ಅಧಿನಿಯಮವನ್ನು ಪಾಲಿಸುವುದಾಗಿ ಪ್ರಮಾಣಿಕರಿಸಬೇಕು. ಈ ಷರತ್ತುಗಳನ್ನು ಪೂರೈಸಿದ ಶಾಲೆಗಳಿಗೆ ಮಾತ್ರ ನಿರಾಕ್ಷೇಪಣ ಪತ್ರ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಉದ್ದೇಶದಿಂದ ಸರ್ಕಾರ ಕನ್ನಡ ಭಾಷಾ ಕಲಿಕೆಯನ್ನು ಎಲ್ಲ ಶಾಲೆಗಳಲ್ಲಿ ಕಡ್ಡಾಯಗೊಳಿಸಿದ್ದು, ಅಧಿನಿಯಮ ಉಲ್ಲಂಘನೆಗೆ ಯಾವುದೇ ರೀತಿಯ ಸಡಿಲಿಕೆ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

The post ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ appeared first on Samyukta Karnataka.

ಗ್ರಾಹಕ ವಂಚನೆ: 2,334 ಪ್ರಕರಣ ದಾಖಲು, 2,250 ಇತ್ಯರ್ಥ
ಬೆಳಗಾವಿ (ಸುವರ್ಣಸೌಧ): ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಮೋಸ ಮಾಡಿ ಗೃಹೋಪಯೋಗಿ ವಸ್ತುಗಳು ಹಾಗೂ ವಿವಿಧ ಸೇವೆಗಳನ್ನು ಮಾರಾಟ ಮಾಡುತ್ತಿದ್ದ ಕಂಪನಿಗಳ ವಿರುದ್ಧ ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಒಟ್ಟು 2,334 ಪ್ರಕರಣಗಳು ದಾಖಲಾಗಿವೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.

ಈ ಪೈಕಿ 2,250 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಈ ಮಾಹಿತಿ ನೀಡಿದರು.

ಇದನ್ನೂ ಓದಿ: National Herald Case: ಸೋನಿಯಾಗಾಂಧಿ, ರಾಹುಲ್​ಗೆ ತಾತ್ಕಾಲಿಕ ರಿಲೀಫ್

ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಅಥವಾ ಸೇವೆಗಳನ್ನು ಪಡೆಯುವ ಸಂದರ್ಭದಲ್ಲಿ ವಂಚನೆಗೆ ಒಳಗಾದಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ–2019ರ ಅಡಿ ದೂರು ದಾಖಲಿಸುವ ಅವಕಾಶವಿದ್ದು, ಅದರ ಮೂಲಕ ನ್ಯಾಯಸಮ್ಮತ ಪರಿಹಾರವನ್ನು ಪಡೆಯಬಹುದು ಎಂದು ಸಚಿವರು ವಿವರಿಸಿದರು. ಗ್ರಾಹಕರ ಹಿತ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಇನ್ನು ಹೋಟೆಲ್‌ಗಳಲ್ಲಿ ಮಾರಾಟವಾಗುವ ಪ್ಯಾಕೆಟ್ ತಿಂಡಿ ತಿನಿಸುಗಳು ಮತ್ತು ನೀರಿನ ಬಾಟಲಿಗಳ ಮೇಲಿನ ಸರ್ಕಾರ ನಿಗದಿಪಡಿಸಿರುವ ಘೋಷಣೆಗಳು ಮತ್ತು ಮುದ್ರಣ ನಿಯಮಗಳ ಉಲ್ಲಂಘನೆ ಪ್ರಕರಣಗಳ ಕುರಿತು ಮಾತನಾಡಿದ ಅವರು, ಇಂತಹ ಉಲ್ಲಂಘನೆಗಳು ಕಂಡುಬಂದಲ್ಲಿ ಕಾನೂನು ಮಾಪನಶಾಸ್ತ್ರ (ಪೊಟ್ಟಣ ಸಾಮಗ್ರಿ) ನಿಯಮ–2011ರಡಿ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ನಿಯಮ ಉಲ್ಲಂಘಿಸಿದ ಹೋಟೆಲ್‌ಗಳ ಮೇಲೆ ನಿಯಮಾನುಸಾರ ಅಭಿಸಂಧಾನ ಶುಲ್ಕ (ಕಂಪೌಂಡಿಂಗ್ ಫೀ) ವಿಧಿಸಲಾಗುತ್ತದೆ. ಅಭಿಸಂಧಾನಕ್ಕೆ ಸಹಮತಿಸದ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದರು.

ಗ್ರಾಹಕರು ಜಾಗೃತರಾಗಿದ್ದು, ಯಾವುದೇ ರೀತಿಯ ವಂಚನೆ ಕಂಡುಬಂದಲ್ಲಿ ಸಂಬಂಧಪಟ್ಟ ಗ್ರಾಹಕ ಆಯೋಗಗಳು ಹಾಗೂ ಇಲಾಖೆಗೆ ದೂರು ನೀಡುವಂತೆ ಸಚಿವರು ಮನವಿ ಮಾಡಿದ್ದಾರೆ.

The post ಗ್ರಾಹಕ ವಂಚನೆ: 2,334 ಪ್ರಕರಣ ದಾಖಲು, 2,250 ಇತ್ಯರ್ಥ appeared first on Samyukta Karnataka.