#DakshinaKannada Archives - Samyukta Karnataka

ಧರ್ಮಸ್ಥಳದಲ್ಲಿ ನಾಳೆ ಉಚಿತ ಸಾಮೂಹಿಕ ವಿವಾಹ ಕಾರ್ಯ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.

ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದು ಟ್ರಸ್ಟ್‌ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸುತ್ತಿದ್ದು, ಕಳೆದ ವರ್ಷದ ವರೆಗೆ ಹದಿಮೂರು ಸಾವಿರ ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಡಿ. ಹರ್ಷೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕ ಹರೀಶ್ ಪೂಂಜ ಮತ್ತು ಮೆಸ್ಕಾಂ ಅಧ್ಯಕ್ಷ ಹರೀಶ್‌ಕುಮಾರ್ ನೂತನ ದಂಪತಿಗೆ ಶುಭ ಕೋರುವರು.

ಲಡಾಖ್‌ನಲ್ಲಿ ಐತಿಹಾಸಿಕ ನಿರ್ಧಾರ : ಜಿಲ್ಲೆಗಳ ಸಂಖ್ಯೆ 7ಕ್ಕೆ ಏರಿಕೆ

The post ಧರ್ಮಸ್ಥಳದಲ್ಲಿ ನಾಳೆ ಉಚಿತ ಸಾಮೂಹಿಕ ವಿವಾಹ ಕಾರ್ಯ appeared first on Samyukta Karnataka.

ಶಬರಿಮಲೆ ಯಾತ್ರೆ ದುರ್ಘಟನೆ: ರೈಲಿನಿಂದ ಬಿದ್ದು ಬೆಳ್ತಂಗಡಿ ವ್ಯಕ್ತಿ ಸಾವು
ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ರೈಲಿನಿಂದ ಬಿದ್ದು ಮೃತಪಟ್ಟ ದುರ್ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ, ಕೃಷಿಕರಾಗಿದ್ದ ವಸಂತ ಪೂಜಾರಿ (60) ಅವರು ಮೃತಪಟ್ಟವರಾಗಿದ್ದಾರೆ.

ಲಭ್ಯ ಮಾಹಿತಿ ಪ್ರಕಾರ, ವಸಂತ ಪೂಜಾರಿ ಅವರು ಶಬರಿಮಲೆ ದೇವಸ್ಥಾನಕ್ಕೆ ಯಾತ್ರೆಗೆ ತೆರಳಲು ಮಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಆರಂಭಿಸಿದ್ದರು. ಏಪ್ರಿಲ್ 17ರ ರಾತ್ರಿ ರೈಲು ಪ್ರಯಾಣದ ವೇಳೆ ಅವರು ಅನಾಹುತವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ನಂತರ ಕೇರಳದ ತ್ರಿಶೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಏಪ್ರಿಲ್ 18ರಂದು ಅವರು ಮೃತಪಟ್ಟಿದ್ದಾರೆ. ಇಂದು (ಏ.19) ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ. ಈ ಘಟನೆ ಬೆಳ್ತಂಗಡಿ ಭಾಗದಲ್ಲಿ ದುಃಖದ ವಾತಾವರಣ ಮೂಡಿಸಿದೆ.

ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು

The post ಶಬರಿಮಲೆ ಯಾತ್ರೆ ದುರ್ಘಟನೆ: ರೈಲಿನಿಂದ ಬಿದ್ದು ಬೆಳ್ತಂಗಡಿ ವ್ಯಕ್ತಿ ಸಾವು appeared first on Samyukta Karnataka.

ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA)ಗೆ ಶನಿವಾರ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ (Seven Seas Mariner) ಅನ್ನು ಭರ್ಜರಿಯಾಗಿ ಸ್ವಾಗತಿಸಿದ್ದು, ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಬಹಮಾಸ್ ಧ್ವಜ ಹೊಂದಿರುವ ಈ ಹಡಗು ಕೊಚ್ಚಿಯಿಂದ ಆಗಮಿಸಿ ಮಂಗಳೂರಿನ ಬರ್ಥ್ ನಂ.4ರಲ್ಲಿ ನಿಲುಗಡೆಗೊಂಡಿತು. ಹಡಗಿನಲ್ಲಿ ಒಟ್ಟು 607 ಪ್ರಯಾಣಿಕರು ಹಾಗೂ 460 ಸಿಬ್ಬಂದಿ ಇದ್ದರು. ಬಳಿಕ ಹಡಗು ತನ್ನ ಮುಂದಿನ ಗಮ್ಯಸ್ಥಾನವಾದ ಮರ್ಮುಗೋವ್ ಕಡೆಗೆ ಪ್ರಯಾಣ ಮುಂದುವರಿಸಲಿದೆ.

ಪ್ರವಾಸಿಗರಿಗೆ ವಿಶೇಷ ಅನುಭವ : ಪ್ರಯಾಣಿಕರ ಸುಗಮ ನಿರ್ವಹಣೆಗೆ ಎನ್‌ಎಂಪಿಎ, ಕಸ್ಟಮ್ಸ್, ಇಮಿಗ್ರೇಶನ್, CISF ಸೇರಿದಂತೆ ವಿವಿಧ ಸಂಸ್ಥೆಗಳು ಸಮನ್ವಯ ಸಾಧಿಸಿದ್ದವು. ಮಂಗಳೂರಿಗೆ ಆಗಮಿಸಿದ ವಿದೇಶಿ ಪ್ರವಾಸಿಗರಿಗೆ ಕಾರ್ಕಳ, ಮೂಡಬಿದಿರೆ ಹಾಗೂ ಪಿಲಿಕುಳ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ವಿಶೇಷ ಟೂರ್ ವ್ಯವಸ್ಥೆ ಕಲ್ಪಿಸಲಾಯಿತು.

ಈ ಯಶಸ್ವಿ ಕಾರ್ಯಾಚರಣೆ ಮಂಗಳೂರನ್ನು ಅಂತಾರಾಷ್ಟ್ರೀಯ ಕ್ರೂಸ್ ಪ್ರವಾಸೋದ್ಯಮದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವತ್ತ ಮತ್ತಷ್ಟು ಬಲ ತುಂಬಿದೆ.

ಹೊಸ ಚೈತನ್ಯ: ಈ ಹಿನ್ನೆಲೆ ದಕ್ಷಿಣ ಕನ್ನಡ ಸಂಸದಕ್ಯಾ. ಬ್ರಿಜೇಶ್‌ಚೌಟ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ತುಳುನಾಡಿನ ಹಳೆಯ ನೌಕಾಯಾನ ಪರಂಪರೆ ಪುನರುಜ್ಜೀವನಗೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ಚೌಗುಲೆ ಶಿಪ್‌ಯಾರ್ಡ್ ಆಧುನಿಕ ಹಡಗು ನಿರ್ಮಾಣ ಕೇಂದ್ರವಾಗಿ ರೂಪಾಂತರಗೊಂಡಿದ್ದು, “ಫ್ರಿಷಿಯನ್ ಫ್ಯೂಚರ್” ಎಂಬ 8,500 DWT ಸಾಮರ್ಥ್ಯದ ರಫ್ತು ಹಡಗು ನಿರ್ಮಾಣದ ಮೂಲಕ ಸ್ಥಳೀಯ ಉದ್ಯಮ, ಉದ್ಯೋಗ ಮತ್ತು ವಿಶ್ವಾಸಕ್ಕೆ ಉತ್ತೇಜನ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಈ ಬೆಳವಣಿಗೆಗಳು ನರೇಂದ್ರ ಮೋದಿ ಅವರ ಕಡಲ ವಲಯ ಅಭಿವೃದ್ಧಿ ದೃಷ್ಟಿಕೋನಕ್ಕೆ ಹೊಂದಿಕೊಂಡಿದ್ದು, ಮಂಗಳೂರನ್ನು ಜಾಗತಿಕ ಹಡಗು ನಿರ್ಮಾಣ ನಕ್ಷೆಯಲ್ಲಿ ಸ್ಥಿರವಾಗಿ ಸ್ಥಾಪಿಸುತ್ತಿವೆ ಎಂದಿದ್ದಾರೆ.

The post ಮಂಗಳೂರು ಬಂದರಿಗೆ ಬಂದ ಐಷಾರಾಮಿ ಕ್ರೂಸ್ ಹಡಗು appeared first on Samyukta Karnataka.

ತಾಯಿಯ ಅಂತ್ಯಕ್ರಿಯೆ ಮುಗಿಸಿ ಪರೀಕ್ಷೆ ಬರೆದಿದ್ದ ದಿಶಾ ರಾಜ್ಯಕ್ಕೇ ಫಸ್ಟ್
ದಕ್ಷಿಣ ಕನ್ನಡ: “ಪರೀಕ್ಷೆ ಚೆನ್ನಾಗಿ ಬರಿ ಮಗಳೇ…” ಎಂದು ಬೆನ್ನು ತಟ್ಟಿ ಕಳಿಸಿದ್ದ ತಾಯಿ, ಮಗಳು ಮೂರನೇ ಪರೀಕ್ಷೆ ಬರೆದು ಮನೆಗೆ ಬರುವಷ್ಟರಲ್ಲಿಯೇ ಇಹಲೋಕವನ್ನೇ ತ್ಯಜಿಸಿದ್ದಳು.

ಪರೀಕ್ಷೆ ಬರೆದು ಬಂದು ತಾಯಿಯ ಅಪ್ಪುಗೆ ಬಯಸಿದ್ದ ಮಗಳಿಗೆ ಎದುರು ಕಂಡಿದ್ದು, ತಾಯಿಯ ಮೃತದೇಹ. ಮೂರು ಪರೀಕ್ಷೆಗಳನ್ನು ಅತ್ಯುತ್ತಮವಾಗಿ ಬರೆದು ಬಂದ ಮಗಳಿಗೆ ಜಗತ್ತೇ ಮುಳುಗಿ ಹೋದಂತಾಗಿತ್ತು.

ಹರಿಸಿದ ತಾಯಿ ಅರ್ಧದಾರಿಯಲ್ಲಿ ಕೈಬಿಟ್ಟು ಹೋದಾಗ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮುಂದಿನ ಪರೀಕ್ಷೆಗಳನ್ನು ಎದುರಿಸಿದ್ದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಇಂದು ತಾಯಿಯ ಆಶೀರ್ವಾದದಿಂದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ನೋವು ಇಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ದಿಶಾ ತನ್ನ ತಾಯಿಯ ಮಾತಿನಂತೆ ಅಚ್ಚುಕಟ್ಟಾಗಿ ಪರೀಕ್ಷೆ ಬರೆದಿದ್ದಾಳೆ. ತಾಯಿ ನೆನಪಿನಲ್ಲಿ ಪರೀಕ್ಷೆ ಎದುರಿಸಿದ್ದ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದು ತನ್ನ ಅಂಕವನ್ನು ತಾಯಿಗೆ ಸಮರ್ಪಿಸಿದ್ದಾಳೆ.

ಮುಕ್ಕೋಟಿ ದೇವರಿಗೂ ಮಿಗಿಲಾದವಳು ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ದಿಶಾ ಮಾಡಿದ ಸಾಧನೆ ನಿಜಕ್ಕೂ ಶ್ಲಾಘನೀಯ. ದಿಶಾಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಜನತೆ ಹಾರೈಸುತ್ತಿದೆ.

ಮುಂದಿನ ದಿನಗಳಲ್ಲಿ ಸಿಎ ಮಾಡುವ ಗುರಿಯನ್ನು ಹೊಂದಿರುವ ದಿಶಾ, ಆಳ್ವಾಸ್ ಕಾಲೇಜಿನ ಉಪನ್ಯಾಸಕ ವಿದ್ಯಾರ್ಥಿ ಸ್ನೇಹಿ ಭೋಧನೆ, ಕಲಿಕೆಗೆ ಪೂರಕ ವಾತಾವರಣ, ಸಿಲೆಬಸ್ ಬೇಗ ಮುಗಿಸಿರುವುದು, ನಿರಂತರವಾಗಿ ಪೂರಕ ಪರೀಕ್ಷೆಗಳನ್ನು ಮಾಡಿರುವುದು ಸಾಧನೆ ಮಾಡಲು ಪೂರಕವಾಯಿತು ಎಂದು ತಿಳಿಸಿದ್ದಾರೆ.

The post ತಾಯಿಯ ಅಂತ್ಯಕ್ರಿಯೆ ಮುಗಿಸಿ ಪರೀಕ್ಷೆ ಬರೆದಿದ್ದ ದಿಶಾ ರಾಜ್ಯಕ್ಕೇ ಫಸ್ಟ್ appeared first on Samyukta Karnataka.

ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ: ಕೌಶಿಕ್ ಮೃತದೇಹ ಪತ್ತೆ
ಮೂಡುಬಿದಿರೆ: ಗುರುಪುರದ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂದು ಶಂಕಿಸಲಾದ ಮೂಡುಬಿದಿರೆಯ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಅವರ ಮೃತದೇಹವು ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ.

ಮೂಲಗಳ ಪ್ರಕಾರ, ಬುಧವಾರ ಸಂಜೆ ಸುಮಾರು 6:30ರ ವೇಳೆಗೆ ಕೌಶಿಕ್ ಅವರು ಸ್ಕೂಟರ್‌ನಲ್ಲಿ ಗುರುಪುರದತ್ತ ಆಗಮಿಸಿದ್ದರು. ಬಳಿಕ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ದುಃಖದ ವಾತಾವರಣವನ್ನುಂಟುಮಾಡಿತ್ತು.

ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ: ಘಟನೆಯ ಮಾಹಿತಿ ತಿಳಿದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ಬೆಳಗ್ಗಿನಿಂದಲೇ ಶೋಧ ಕಾರ್ಯಾಚರಣೆ ಆರಂಭಿಸಿದರು. ಪಾಣೆಮಂಗಳೂರಿನ ಮುಳುಗು ತಜ್ಞರು ಸಹ ಸ್ಥಳಕ್ಕೆ ಆಗಮಿಸಿ, ಸೇತುವೆಯ ಕಂಬಗಳ ಸುತ್ತಮುತ್ತ ಶೋಧ ನಡೆಸಿದರು.

ಸಮಗ್ರ ಶೋಧ ಕಾರ್ಯಾಚರಣೆಯ ನಂತರ ಮಧ್ಯಾಹ್ನ ವೇಳೆಗೆ ಕೌಶಿಕ್ ಅವರ ಮೃತದೇಹವನ್ನು ಪತ್ತೆಹಚ್ಚಲಾಯಿತು. ಬಳಿಕ ಅಗತ್ಯ ಕ್ರಮಕ್ಕಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಪೊಲೀಸ್ ತನಿಖೆ ಮುಂದುವರಿಕೆ: ಈ ಪ್ರಕರಣ ಸಂಬಂಧ ಬಜ್ಪೆ ಪೊಲೀಸರು ಕೌಶಿಕ್ ಬಳಸಿದ ಸ್ಕೂಟರ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಕುಟುಂಬದವರು ಹಾಗೂ ಸ್ನೇಹಿತರನ್ನು ವಿಚಾರಣೆಗೊಳಪಡಿಸುವ ಮೂಲಕ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ದ್ವಿತೀಯ PUC ಫಲಿತಾಂಶ ಪ್ರಕಟ: ಆನ್‌ಲೈನ್‌ನಲ್ಲಿ ಚೆಕ್ ಮಾಡಿ

The post ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ: ಕೌಶಿಕ್ ಮೃತದೇಹ ಪತ್ತೆ appeared first on Samyukta Karnataka.

ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ! ಸುಡೋ ಸೂರ್ಯನ ಪೆಟ್ಟು, ಮಳೆಯ ಅಬ್ಬರ; ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರಖರತೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದು ಕಡೆ ಕರಾವಳಿ ಭಾಗದಲ್ಲಿ ಬಿಸಿಲಿನ ಬೇಗೆಯಿಂದ ಹೈರಾಣಾಗಿರುವ ಜನತೆಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿ ಎಚ್ಚರಿಕೆ ನೀಡಿದ್ದರೆ, ಇನ್ನೊಂದೆಡೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆಯ ಸಿಹಿಸುದ್ದಿ ಸಿಕ್ಕಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಅಂದರೆ ಏಪ್ರಿಲ್ 9 ರಿಂದ ಏಪ್ರಿಲ್ 11ರವರೆಗೆ ತೀವ್ರವಾದ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಗಾಳಿಯಲ್ಲಿನ ಆರ್ದ್ರತೆ ಅಥವಾ ತೇವಾಂಶ ಹೆಚ್ಚಿರಲಿರುವುದರಿಂದ ಸಾರ್ವಜನಿಕರಿಗೆ ಸಾಮಾನ್ಯಕ್ಕಿಂತ ಹೆಚ್ಚಿನ ಸೆಖೆಯ ಅನುಭವವಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ವಹಿಸಲು ಸೂಚಿಸಿದೆ. ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯುವುದು, ಎಳನೀರು ಮತ್ತು ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳನ್ನು ಸೇವಿಸುವುದು ಉತ್ತಮ. ವಿಶೇಷವಾಗಿ ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಹೊರಗೆ ಹೋಗುವಾಗ ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ, ಛತ್ರಿ ಅಥವಾ ಟೋಪಿಯನ್ನು ಮರೆಯದೇ ಬಳಸಿ. ಈ ಬಿಸಿಲಿನ ಪ್ರಖರತೆ ಮಕ್ಕಳು ಮತ್ತು ವಯೋವೃದ್ಧರ ಮೇಲೆ ಬೇಗನೆ ಪರಿಣಾಮ ಬೀರಲಿದ್ದು, ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕವಾಗಿದೆ.

ಆದರೆ, ಈ ಬಿಸಿಲಿನ ನಡುವೆಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ. ಏಪ್ರಿಲ್ 9 ರಿಂದ 11ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ, ಏಪ್ರಿಲ್ 11 ರಂದು ಉತ್ತರ ಕರ್ನಾಟಕದ ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯ ಸಿಂಚನವಾಗುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ, ರಾಜ್ಯದ ಜನತೆ ಒಂದು ಕಡೆ ಬಿಸಿಲಿನ ಝಳಕ್ಕೆ ಸಜ್ಜಾಗಬೇಕಿದ್ದರೆ, ಇನ್ನೊಂದೆಡೆ ಮಳೆಯ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಅಲ್ಲಿಯವರೆಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ, ಸುರಕ್ಷಿತವಾಗಿರಿ.

The post ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ! ಸುಡೋ ಸೂರ್ಯನ ಪೆಟ್ಟು, ಮಳೆಯ ಅಬ್ಬರ; ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ appeared first on Samyukta Karnataka.

ಭೀಕರ ಅಪಘಾತ: ಟಿಪ್ಪರ್‌ಗೆ ಬೈಕ್ ಡಿಕ್ಕಿ – ತಾಯಿ-ಮಗ ಸಾವು
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ ಪುರಸಭಾ ವ್ಯಾಪ್ತಿಯ ಕೆಇಬಿ ಸಮೀಪದಲ್ಲಿ ಮಂಗಳವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ ಹಾಗೂ ಅವರ ಪುತ್ರ ಸೀನ ಯಾನೆ ಶ್ರೀನಿವಾಸ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಿಬ್ಬರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ವೇಗವಾಗಿ ಢಿಕ್ಕಿ ಹೊಡೆದಿದ್ದಾರೆ.

ಅಪಘಾತದ ತೀವ್ರತೆಗೆ ತಾಯಿ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರ ಸೀನ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

Donald Trump  ಕಠಿಣ ಸಂದೇಶ: ಜಾಗತಿಕ ತೈಲ ಮಾರುಕಟ್ಟೆ ತಲ್ಲಣ

The post ಭೀಕರ ಅಪಘಾತ: ಟಿಪ್ಪರ್‌ಗೆ ಬೈಕ್ ಡಿಕ್ಕಿ – ತಾಯಿ-ಮಗ ಸಾವು appeared first on Samyukta Karnataka.

ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿಗಳು: ಗಂಭೀರ ಗಾಯ
ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ ಬಾಗಿಲು ತೆರೆದು ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಬಿದ್ದ ಘಟನೆ – ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದ ಭೀಕರ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವೇಗವಾಗಿ ಸಂಚರಿಸುತ್ತಿದ್ದ KSRTC ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಘಟನೆಯ ವಿವರಗಳ ಪ್ರಕಾರ, ಪುತ್ತೂರಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಬಸ್ಸಿಗೆ ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಬಾಗಿಲು ಏಕಾಏಕಿ ತೆರೆದಿದೆ. ಈ ವೇಳೆ ಬಾಗಿಲ ಬಳಿ ನಿಂತಿದ್ದ ಅಕ್ಕ ಮೊದಲು ಕೆಳಗೆ ಬಿದ್ದಿದ್ದು, ಅವರನ್ನು ಹಿಡಿಯಲು ಯತ್ನಿಸಿದ ತಂಗಿಯೂ ನಿಯಂತ್ರಣ ತಪ್ಪಿ ಹೊರಗೆ ಎಸೆಯಲ್ಪಟ್ಟಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೃಶ್ಯವನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ.

ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ, ಇಬ್ಬರೂ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಇಬ್ಬರು ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು. ಈ ಘಟನೆ ಕುರಿತು KSRTC ಅಧಿಕಾರಿಗಳು ವರದಿ ಕೋರಿದ್ದಾರೆ, ಬೆಳ್ತಂಗಡಿ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಬಸ್ ಡ್ರೈವ‌ರ್ ಮತ್ತು ಕಂಡಕ್ಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ಬಳಿಕ ಬಸ್ ನಿರ್ವಹಣೆ, ಬಾಗಿಲಿನ ಭದ್ರತೆ ಮತ್ತು ಚಾಲಕರ ಜವಾಬ್ದಾರಿತನ ಕುರಿತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕರಾವಳಿ ಭದ್ರತೆಗೆ ಹೊಸ ಶಕ್ತಿ: ಸ್ವದೇಶಿ ತಂತ್ರಜ್ಞಾನದ ‘Yard-1280’

The post ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿಗಳು: ಗಂಭೀರ ಗಾಯ appeared first on Samyukta Karnataka.

ಈಜಲು ಹೋಗಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು
ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ಕು ಮಂದಿ ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಪುತ್ರ ಮಹಮ್ಮದ್ ಹಫೀಝ್ (14) ಮೃತಪಟ್ಟ ಬಾಲಕನಾಗಿದ್ದಾ‌ನೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

The post ಈಜಲು ಹೋಗಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು appeared first on Samyukta Karnataka.

ಮಂಗಳೂರು ವಿವಿ : ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
44ನೇ ಘಟಿಕೋತ್ಸವ: 162 ಪಿಎಚ್‌ಡಿ, 56 ಚಿನ್ನದ ಪದಕ ಪ್ರದಾನ – ದೈವ ನರ್ತಕನಿಗೂ ಮೊದಲ ಬಾರಿಗೆ ಡಾಕ್ಟರೇಟ್ ಗೌರವ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ತನ್ನ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜ ಸೇವೆ, ಜನಪದ ಸಂಸ್ಕೃತಿ ಹಾಗೂ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ ಮೂವರು ಗಣ್ಯರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮಾಹಿತಿ ನೀಡಿದ್ದಾರೆ.

ಗೌರವ ಡಾಕ್ಟರೇಟ್‌ಗೆ ಆಯ್ಕೆಯಾದವರಲ್ಲಿ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆ ಸೇರಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಈ ಗೌರವ ಪ್ರದಾನ ಮಾಡಲಾಗುತ್ತಿದೆ.

ಇದಲ್ಲದೆ, ನಿಧನರಾದ ಗೋವಿಂದ ಭಟ್ ಅವರಿಗೆ ಏಪ್ರಿಲ್ 13ರಂದು ಅವರ ನಿವಾಸದಲ್ಲೇ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ತಿಳಿಸಲಾಗಿದೆ. ಉಳಿದ ಇಬ್ಬರಿಗೆ ಘಟಿಕೋತ್ಸವ ಸಮಾರಂಭದಲ್ಲೇ ಈ ಗೌರವ ನೀಡಲಾಗುತ್ತದೆ. ವಿಶೇಷವಾಗಿ ದೈವ ನರ್ತಕರೊಬ್ಬರಿಗೆ ಇದೇ ಮೊದಲ ಬಾರಿಗೆ ಈ ಗೌರವ ನೀಡುತ್ತಿರುವುದು ಗಮನಾರ್ಹ ಸಂಗತಿ.

ಘಟಿಕೋತ್ಸವವು ಶನಿವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭಾಗವಹಿಸಲಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಈ ಬಾರಿ ಘಟಿಕೋತ್ಸವದಲ್ಲಿ 162 ಪಿಎಚ್‌ಡಿ ಪದವಿಗಳು, 56 ಚಿನ್ನದ ಪದಕಗಳು ಹಾಗೂ 57 ನಗದು ಬಹುಮಾನಗಳನ್ನು ಪ್ರದಾನ ಮಾಡಲಾಗುತ್ತದೆ. ಒಟ್ಟು 147 ರ್ಯಾಂಕ್‌ಗಳು ಘೋಷಿಸಲ್ಪಟ್ಟಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ದಾಖಲಿಸಿದ್ದಾರೆ.

ಒಟ್ಟು 22,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 19,568 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ.88.74 ಆಗಿದೆ. ಸ್ನಾತಕ ವಿಭಾಗದಲ್ಲಿ ಶೇ.87.87 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಶೇ.93.86 ಫಲಿತಾಂಶ ದಾಖಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಗಮನ ಸೆಳೆಯುತ್ತಿದೆ.

ನೇಪಾಳ: Gen Z ಕಣ್ಮಣಿ ಬಾಲೇಂದ್ರ ಶಾ ಪ್ರಧಾನಿಯಾಗಿ ಪದಗ್ರಹಣ

The post ಮಂಗಳೂರು ವಿವಿ : ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ appeared first on Samyukta Karnataka.